ಮಾಲದಿನ್ನಿ,ತಾ/ಗೋಕಾಕ:03 ವೈಜ್ಞಾನಿಕವಾಗಿ ನಾವು ಅನೇಕ ಸಾಧನೆಗಳನ್ನು ಮಾಡುತ್ತಿದ್ದರೂ ಇನ್ನೂ ನಮ್ಮ ಅನೇಕ ಸಾಮಾಜಿಕ ಸಮಸ್ಯೆಗಳು ದೂರವಾಗಿಲ್ಲ, ಬಾಲ್ಯ ವಿವಾಹ, ವರದಕ್ಷಿಣೆ, ಅತ್ಯಾಚಾರ, ಹೆಣ್ಣು ಮಕ್ಕಳನ್ನು ನಂಬಿಸಿ ಮಾರಾಟ ಮಾಡುವ ಅನೇಕ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಬಡತನ, ಉದ್ಯೋಗದ ಭರವಸೆ, ಪಾಶ್ಚಿಮಾತ್ಯ ಸಂಸ್ಕೃತಿಯ ಆಕರ್ಷಣೆ, ಇಂತಹ ಸಮಸ್ಯೆಯನ್ನು ಇನ್ನಷ್ಟು ಉಲ್ಬಣಗೊಳಿಸಿದೆ. ಆದ್ದರಿಂದ ಕಿಶೋರಿಯರು ಯಾವುದೇ ಆಮಿಷಕ್ಕೆ ಒಳಗಾಗದೇ ಸುಂದರ ಬದುಕು ಕಟ್ಟಿಕೊಳ್ಳಬೇಕೆಂದು ಮೈ ಚಾಯ್ಸ್ ಫೌಂಡೇಶನ್ ಹೈದರಾಬಾದ್ನ ಸುರಕ್ಷಿತ ಗ್ರಾಮ ಕಾರ್ಯಕ್ರಮದ ರಾಜ್ಯ ಸಂಯೋಜಕ ಮುನಿಚೌಡಪ್ಪಾ ಅಭಿಪ್ರಾಯಪಟ್ಟರು.
ಮೈ ಚಾಯ್ಸ್ ಫೌಂಡೇಶನ್ ಹೈದರಾಬಾದ್, ಆಪರೇಶನ್ ರೆಡ್ ಅಲರ್ಟ ಯೋಜನೆ ಹಾಗೂ ಮಹಿಳಾ ಕಲ್ಯಾಣ ಸಂಸ್ಥೆಯ ಉಜ್ವಲಾ ಮಹಿಳೆಯರ ರಕ್ಷಣೆ ಮತ್ತು ಪುನರ್ವಸತಿ ಕೇಂದ್ರ ಬೆಳಗಾವಿ ಜಂಟಿಯಾಗಿ ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆ ಕುರಿತು ಜಾಗೃತಿ ಮೂಡಿಸಲು ಗೋಕಾಕ ತಾಲೂಕಿನ ಮಾಲದಿನ್ನಿ ಗ್ರಾಮದ ಸರಕಾರಿ ಪ್ರೌಢ ಶಾಲೆಯಲ್ಲಿ ಕಿಶೋರಿಯರಿಗೆ ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ಸಂಪನ್ಮೂಲ ವ್ಯಕ್ತಿ ಸುರೇಖಾ ಪಾಟೀಲ ಮಾತನಾಡಿ ಲೈಂಗಿಕ ಹಲ್ಲೆಗೆ ಮುಗ್ಧ ಮಕ್ಕಳನ್ನು ಬಲಿಯಾಗಿಸುವ ಪ್ರಕರಣಗಳು ಹೆಚ್ಚುತ್ತಿವೆ. ಮಹಿಳೆ ಮತ್ತು ಮಕ್ಕಳನ್ನು ಕಾಮರ್ಿಕ, ವಾಣಿಜ್ಯ, ಲೈಂಗಿಕ ಕ್ರಿಯೆಗೆ ಬಳಸಿಕೊಳ್ಳುವ ಉದ್ದೇಶದಿಂದ ಅನೈತಿಕವಾಗಿ ಸಾಗಾಣಿಕೆ ಮಾಡಲಾಗುತ್ತಿದೆ ಇಂತಹ ಸವಾಲನ್ನು ಪರಿಣಾಮಕಾರಿಯಾಗಿ ಎದುರಿಸಲು ಸಾರ್ವಜನಿಕರು ಎಚ್ಚರಗೊಳ್ಳಬೇಕು. ಸಮಸ್ಯೆಗಳಿಗೆ ಒಳಗಾದವರ ಪುನರ್ವಸತಿಗಾಗಿ ಸಂಸ್ಥೆ ಸಂಗಾತಿ ಕೌಟುಂಬಿಕ ಸಲಹಾ ಕೇಂದ್ರ, ಉಜ್ವಲಾ ಯೋಜನೆ ಹಾಗೂ ಸಾಂತ್ವನ ಮಹಿಳಾ ಸಹಾಯವಾಣಿ ನಡೆಸುತ್ತಲಿದ್ದು ತೊಂದರೆಗೊಳಗಾದವರು ಪ್ರಯೋಜನ ಪಡೆದುಕೊಳ್ಳಬೇಕೆಂದರು.
ಅಧ್ಯಕ್ಷತೆಯನ್ನು ಎಂ.ಎಂ.ಗಡಗಲಿ ವಹಿಸಿ ಮಾತನಾಡಿ ವಿದ್ಯಾಥರ್ಿಗಳಿಗೆ ಇಂತಹ ವಿಷಯಗಳ ಜಾಗೃತಿ ಮೂಡಿಸುವದು ಇಂದಿನ ಅಗತ್ಯತೆಯಾಗಿದೆ. ಪಾಲಕರು ಕಷ್ಟಪಟ್ಟು ಮಕ್ಕಳನ್ನು ಬೆಳೆಸಿ ಅನೇಕ ಕನಸುಗಳನ್ನು ಕಟ್ಟಿಕೊಂಡಿರುತ್ತಾರೆ. ಅವುಗಳನ್ನು ಸರಿಯಾದ ದಾರಿಯಲ್ಲಿ ಹೋಗಿ ಸಾಕಾರಗೊಳಿಸಬೇಕಾದುದು ಮಕ್ಕಳ ಕರ್ತವ್ಯ ಎಂದರು. ಕಾರ್ಯಕ್ರಮದಲ್ಲಿ ಸಂತೋಷ ಬಡಿಗೇರ ಪ್ರಾಸ್ತಾವಿಕವಾಗಿ ಮಾತನಾಡಿ ಸರ್ವರನ್ನು ಸ್ವಾಗತಿಸಿದರು. ಅನೈತಿಕ ಸಾಗಾಣಿಕೆ ತಡೆ ಕುರಿತು ಚಲನಚಿತ್ರ ಪ್ರದರ್ಶನ, ಆಯೋಜಿಸಲಾಗಿತ್ತು. ಸಂಗಮೇಶ ಕಂಬಾರ ವಂದಿಸಿದರು.