ಕೊಪ್ಪಳ: ಸಕಾಲದಲ್ಲಿ ಬಾಕಿ ಉಳಿದಿರುವ ಪ್ರಕರಣಗಳ ವಿಲೇಗೆ ಕ್ರಮಕೈಗೊಳಿ: ಪ್ರಾದೇಶಿಕ ಆಯುಕ್ತರಾದ ಸುಬೋಧ್

ಕೊಪ್ಪಳ 24: ಸಕಾಲ ಸೇವೆಗಳಲ್ಲಿ ಬಾಕಿ ಉಳಿದಿರುವ ಪ್ರಕರಣಗಳ ವಿಲೇವಾರಿಗೆ ಕ್ರಮ ಕೈಗೊಳ್ಳುವಂತೆ ಪ್ರಾದೇಶಿಕ ಆಯುಕ್ತರಾದ ಸುಬೋಧ್ ಯಾದವ್ರವರು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.  

ಅವರು ನಿನ್ನೆ (ಜುಲೈ.23) ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.  

ನಾಗರಿಕರಿಗೆ ಗೊತ್ತುಮಾಡಿದ ಕಾಲಮಿತಿಯೊಳಗೆ ಸೇವೆಗಳನ್ನು ಒದಗಿಸಲು ``ಸಕಾಲ'' ತುಂಬಾ ಸಹಕಾರಿಯಾಗಿದ್ದು, ಸಕಾಲದಲ್ಲಿ  ನಿಗದಿತ ಕಾಲದೊಳಗೆ ನಾಗರಿಕರಿಗೆ ಸೇವಾ ಖಾತರಿಯನ್ನು ಒದಗಿಸಬೇಕು.  ನಾಗರಿಕರು ಸೇವೆಯನ್ನು ಕೋರಿ ಅಜರ್ಿ ಸಲ್ಲಿಸಿರುವಾಗ ನಿಧರ್ಿಷ್ಟ ಕಾಲ ಮಿತಿ ನೀಡಲಾಗುತ್ತದೆ.  ಆ ಅವಧಿಯೊಳಗೆ ಅವರಿಗೆ ಸೌಲಭ್ಯ ಕಲ್ಪಿಸುವಂತಾಗಬೇಕು.  ಸಕಾಲದಲ್ಲಿ ಅಜರ್ಿಯ ಸ್ಥಿತಿಗತಿ ಪರಿಶೀಲನೆ ನಂತರ ಹಾಗೂ ತಿರಸ್ಕೃತವಾದ ಅಜರ್ಿ ಅಥವಾ ಸೇವೆಯನ್ನು ನಿಗದಿತ ಕಾಲದೊಳಗೆ ಒದಗಿಸದಿದ್ದಲ್ಲಿ ಕುಂದು ಕೊರತೆಗಳ ಪರಿಹಾರಕ್ಕಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ಸಾರ್ವಜನಿಕರಿಂದ ಬರುವ ಮನವಿಗಳಿಗೆ ಮೊದಲು ಸ್ಪಂಧಿಸಬೇಕು.  ನಂತರ ಪರಿಶೀಲಿಸಿ ನಿದರ್ಿಷ್ಟ ಪಡಿಸಿದ ದಿನಗಳೊಳಗಾಗಿ ಸೇವೆಯನ್ನು ನೀಡಬೇಕು ಎಂದರು. 

ನರೇಗಾದಡಿ ಕೈಗೊಂಡ ಕೆರೆ ಹೂಳೆತ್ತುವ ಕಾಮಗಾರಿಗಳಲ್ಲಿ ಜಿಲ್ಲೆಯಲ್ಲಿ ಪೂರ್ಣಗೊಂಡ ಕಾಮಗಾರಿಗಳಲ್ಲಿ ನೀರು ಸಂಗ್ರಹವಾಗುತ್ತಿದೆಯೇ.  ಎಲ್ಲಾ ಗ್ರಾಮೀಣ ಪ್ರದೇಶದಲ್ಲಿ ನರೇಗಾ ಕಾಮಗಾರಿಗಳನ್ನು ಕೈಳ್ಳಲಾಗಿದೆಯೇ.  ಉದ್ಯೋಗ ಕಾತ್ರಿಯಡಿ ಪ್ರಸಕ್ತ ಸಾಲಿನಲ್ಲಿ ಕೈಗೊಂಡ ಎಲ್ಲಾ ಕಾಮಗಾರಿಗಳ ಚಿತ್ರೀಕರಣ ಮಾಡಿ ವರದಿ ಸಲ್ಲಿಸಬೇಕು ಎಂದು ಜಿಲ್ಲಾ ಪಂಚಾಯತ್ ಅಧಿಕಾರಿಗಳಿಗೆ ಸೂಚನೆ ನೀಡಿದರು.  

ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರನ್ನು ಒದಗಿಸಬೇಕು.  ಈ ನಿಟ್ಟಿನಲ್ಲಿ ಸಂಬಂಧಿಸಿದ ನಗರ ಸ್ಥಳೀಯ ಸಂಸ್ಥೆಗಳು ಮತ್ತು ಪಂಚಾಯತ್ಗಳು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ಎಂದರು.  ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ರವರು ಮಾತನಾಡಿ, ಕುಡಿಯುವ ನೀರಿನ ಸಮಸ್ಯೆಗಳ ಇರುವ ಕಡೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ.  ಅಲ್ಲದೇ ಖಾಸಗಿ ಬೋರ್ವೆಲ್ಗಳ ಮೂಲಕವು ಸಹ ಕೆಲ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.   

ಪ್ರಾದೇಶಿಕ ಆಯುಕ್ತರು ಮಾತನಾಡಿ, ಈಗಾಗಲೇ ಮುಂಗಾರು ಹಂಗಾಮಿನಲ್ಲಿ ಫಸಲ್ ಭಿಮಾ ಯೋಜನೆಯಡಿ ಬೆಳೆ ವಿಮೆ ಮಾಡಿಕೊಳ್ಳುವಂತೆ ರೈತರಿಗೆ ಅರಿವು ಮೂಡಿಸಬೇಕು.  ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಆಹಾರ ಮತ್ತು ಆಹಾರೇತರ ಬೆಳೆಗಳ ಸರಾಸರಿ ಇಳುವರಿ ಭಿತ್ತನೆಗೆ ಬೆಳೆಗಳ ಆದ್ಯತೆ, ಬೆಳೆಗೆ ಬರುವ ಕೀಟ, ರೋಗ ಬಾಧೆಗಳು, ಬೆಳೆ ನಷ್ಟ ಮುಂತಾದವುಗಳನ್ನು ತಿಳಿಯಲು ಸಕರ್ಾರವು ಬೆಳೆ ಸಮೀಕ್ಷೆಯನ್ನು ಆರಂಭಿಸಿದೆ.  ಇದಕ್ಕಾಗಿ ಕಾರ್ಯಕರ್ತರನ್ನು ನೇಮಿಸಬೇಕು.  ಸಮೀಕ್ಷೆ ಕಾರ್ಯವು ರೈತರಿಗೆ ಬೆಳೆ ವಿಮೆ ಸೇರಿದಂತೆ ಸಕರ್ಾರದ ಇತರೆ ಯೋಜನೆಗಳಿಗೆ ಪೂರಕವಾಗಿರಬೇಕು ಎಂದು ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.  

ಕೊಪ್ಪಳ ಕೃಷಿ ಇಲಾಖೆ ಜಂಟಿ ಕೃಷಿ ನಿದೇಶಕಿ ಶಬಾನ ಎಂ. ಶೇಖ್ರವರು ಮಾತನಾಡಿ, ಮುಂಗಾರು ಹಂಗಾಮಿನಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಬೆಳೆ ಸಮೀಕ್ಷೆ ಕೈಗೊಳ್ಳಲು ಮೂಲ ಕಾರ್ಯಕರ್ತರನ್ನು ಈಗಾಗಲೇ ನೇಮಕ ಮಾಡಲಾಗಿದೆ.  ಬೆಳೆ ಸಮೀಕ್ಷಾ ಮೂಲ ಕಾರ್ಯಕರ್ತರಿಗೆ ತರಬೇತಿ ಕಾಯರ್ಾಗಾರಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.  

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ರಘುನಂದನ್ ಮೂತರ್ಿ, ಪ್ರೊಬೇಷನರಿ ಐಎಎಸ್ ಅಧಿಕಾರಿ ನೇಹಾ ಜೈನ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಯಶಪಾಲ್ ಕ್ಷಿರಸಾಗರ, ಅಪರ ಜಿಲ್ಲಧಿಕಾರಿ ಸೈಯಿದಾ ಅಯಿಷಾ, ಉಪವಿಭಾಗಾಧಿಕಾರಿ ಸಿ.ಡಿ. ಗೀತಾ, ಜಿಲ್ಲಾ ಪಂಚಾಯತ್ ಉಪ ಕಾರ್ಯದಶರ್ಿ ಎನ್.ಕೆ ತೊರವಿ, ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳ ತಹಶೀಲ್ದಾರರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.