ಕೊಪ್ಪಳ 17: ರಾಷ್ಟ್ರೀಯ ಡೆಂಗ್ಯೂ ದಿನಾಚರಣೆಯ ಅಂಗವಾಗಿ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾದ ಜನ ಜಾಗೃತಿ ಜಾಥಕ್ಕೆ ಜಿಲ್ಲಾ ಆರ್.ಸಿ.ಹೆಚ್ ಡಾ.ಲಿಂಗರಾಜ್ರವರು ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿದರು.
ಕೊಪ್ಪಳ ಜಿಲ್ಲೆಯಲ್ಲಿ ಡೆಂಗ್ಯೂ ಜ್ವರದ ಹರಡುವಿಕೆ, ನಿಯಂತ್ರಣ ಹಾಗೂ ರೋಗಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಜನಸಮುದಾಯವನ್ನು ಜಾಗೃತಿಗೊಳಿಸಲು ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ-2019 ರ ಅಂಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಾಯರ್ಾಲಯದ ವತಿಯಿಂದ ನಗರದ ಹಳೆ ಜಿಲ್ಲಾ ಆಸ್ಪತ್ರೆ ಆವರಣದಿಂದ ಶುಕ್ರವಾರದಂದು "ಡೆಂಗ್ಯೂ ಜನ ಜಾಗೃತಿ ಜಾಥ" ಏರ್ಪಡಿಸಲಾಗಿತ್ತು.
ಜಾಥಕ್ಕೆ ಚಾಲನೆ ನೀಡಿದ ಜಿಲ್ಲಾ ಆರ್.ಸಿ.ಹೆಚ್ ಡಾ.ಲಿಂಗರಾಜ್ರವರು ಮಾತನಾಡಿ, ಜಿಲ್ಲೆಯಲ್ಲಿ ಡೆಂಗ್ಯೂ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು ಡೆಂಗ್ಯೂ ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯಿಂದ ಎಲ್ಲಾ ಸೂಕ್ತ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗಿದೆ. ಡೆಂಗ್ಯೂ ಜ್ವರಕ್ಕೆ ಯಾವುದೇ ನಿಧರ್ಿಷ್ಟ ಚಿಕಿತ್ಸೆ ಇಲ್ಲದಿದ್ದರೂ ಜನರೂ ಭಯಪಡುವ ಅವಶ್ಯಕತೆ ಇಲ್ಲ, ಲಕ್ಷಣಗಳನ್ನಾಧರಿಸಿ ಚಿಕಿತ್ಸೆ ನೀಡಲಾಗುವುದು. ಹಾಗೂ ಸಕರ್ಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ಮತ್ತು ಪ್ರಯೋಗಾಲಯ ಪರೀಕ್ಷೆಗಳನ್ನು ಮಾಡಲಾಗುತ್ತಿದ್ದು ಜನರು ಅನಗತ್ಯ ಭಯಕ್ಕೆ ಒಳಗಾಗದೆ ಸಕರ್ಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬೇಕು ಎಂದರು.
ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ (ಪ್ರ) ಡಾ.ಜಂಬಯ್ಯ..ಬಿ. ರವರು ಮಾತನಾಡಿ ಡೆಂಗ್ಯೂ ಜ್ವರವು ಈಡಿಸ್ ಜಾತಿಯ ಸೊಳ್ಳೆಗಳ ಕಚ್ಚುವಿಕೆಯಿಂದ ಹರಡುತ್ತದೆ ಹಾಗೂ ಇದು ಹಗಲು ಹೊತ್ತಿನಲ್ಲಿಯೇ ಕಚ್ಚುತ್ತವೆ ಎಂದರು. ಮುಂದುವರೆದು, ಈಡಿಸ್ ಸೊಳ್ಳೆಗಳು ನೀರು ಶೇಖರಣೆ ಸಲಕರಣೆಗಳಲ್ಲಿ ಶುದ್ದ ನೀರಿನಲ್ಲಿಯೇ ಸಂತಾನಾಭಿವೃದ್ದಿ ಮಾಡುತ್ತವೆ ಆದ್ದರಿಂದ ನೀರು ಶೇಖರಣೆ ಸಲಕರಣೆಗಳನ್ನು ಸದಕಾಲ ಮುಚ್ಚಿಡಬೇಕು ಹಾಗೂ ಮನೆಯ ಒಳಗೆ ಮತ್ತು ಹೊರಗೆ ನೀರು ನಿಲ್ಲದಂತೆ ಎಚ್ಚರವಹಿಸಿ ಸೊಳ್ಳೆ ಉತ್ಪತ್ತಿಯನ್ನು ತಡೆಗಟ್ಟಲು, ಮನೆಗಳ ಸುತ್ತಮುತ್ತ ಸ್ವಚ್ಚತೆ ಕಾಪಾಡಲು ಜನಸಮುದಾಯಕ್ಕೆ ತಿಳಿಸಿದರು.
ಜಿಲ್ಲಾ ಕೀಟಜನ್ಯ ರೋಗಗಳ ಸಲಹೆಗಾರ ರಮೇಶ್. ಕೆ. ರವರು ಮಾತನಾಡಿ, ಯಾವುದೇ ಜ್ವರವಿರಲಿ ಶೀಘ್ರವೇ ಹತ್ತಿರದ ಸಕರ್ಾರಿ ಆರೋಗ್ಯ ಕೇಂದ್ರದಲ್ಲಿ ರಕ್ತ ಪರೀಕ್ಷೆ ಮಾಡಿಸಿ ಉಚಿತ ಚಿಕಿತ್ಸೆ ಪಡೆಯಲು ಹಾಗೂ ಮಲಗುವಾಗ ಸೊಳ್ಳೆಪರದೆಗಳನ್ನು ಬಳಸಲು ಹಾಗೂ ವಾರಕ್ಕೊಮ್ಮೆ ನೀರು ಶೇಖರಣ ಸಲಕರಣೆಗಳನ್ನು ಖಾಲಿಮಾಡಿ ಸ್ವಚ್ಚಗೊಳಿಸಿ ನೀರು ತುಂಬಿ ಮುಚ್ಚಿಡಲು ಜನಸಮುದಾಯಕ್ಕೆ ಮನವಿ ಮಾಡಿದರು. ಮತ್ತು ಡೆಂಗ್ಯೂ ಜ್ವರ ನಿಯಂತ್ರಣಕ್ಕೆ ಸೊಳ್ಳೆ ಉತ್ಪತ್ತಿ ತಾಣಗಳ ನಿಮರ್ೂಲನೆ ಹಾಗೂ ಜನಜಾಗೃತಿಯೊಂದೆ ಪರಿಹಾರ ಮಾರ್ಗ ಎಂದರು.
ಕೊಪ್ಪಳ ತಾಲೂಕ ಆರೋಗ್ಯಾಧಿಕಾರಿ ಡಾ. ರಾಮಾಂಜನೆಯಲು, ರಸಾಯನಿಕ ಪರೀಕ್ಷಕ ಡಾ. ಪ್ರಶಾಂತ್, ಉಪ ಜಿಲ್ಲಾ ಆರೋಗ್ಯ ಶಿಕ್ಣಣಾಧಿಕಾರಿ ಶಿವಾನಂದ ಪೂಜಾರ ಸೇರಿದಂತೆ ಜಿಲ್ಲಾ ಆರೋಗ್ಯ ಇಲಾಖೆಯ ಸಿಬ್ಬಂದಿಯವರು, ಕಿರಿಯ ಮಹಿಳಾ ತರಬೇತಿ ಕೇಂದ್ರದ ವಿದ್ಯಾಥರ್ಿನಿಯರು ಹಾಗೂ ಸಿಬ್ಬಂದಿ ಮತ್ತು ಆಶಾ ಕಾರ್ಯಕತರ್ೆಯರು, ಕೊಪ್ಪಳ ತಾಲೂಕ ಆರೋಗ್ಯಾಧಿಕಾರಿ ಕಚೇರಿಯ ಹಾಗೂ ನಗರ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.