ಕೂಡ್ಲಿಗಿ: ನೀರಾವರಿ ಹೋರಾಟ: ರಾಷ್ಟ್ರೀಯ ಹೆದ್ದಾರಿ ಬಂದ್ಗೆ ನಿರ್ಣಯ
ಲೋಕದರ್ಶನ ವರದಿ
ಕೂಡ್ಲಿಗಿ 09: ತಾಲ್ಲೂಕಿಗೆ ಸಮಗ್ರ ನೀರಾವರಿ ಕಲ್ಪಿಸಲು ನಡೆಸುತ್ತಿರುವ ಹೋರಾಟವನ್ನು ತೀವ್ರಗೊಳಿಸಲು ಚಿಂತನೆ ನಡೆಸಲಾಗಿದ್ದು, ಈ ದಿಶೆಯಲ್ಲಿ ಇದೇ 24ರಂದು ಕೂಡ್ಲಿಗಿ ಪಟ್ಟಣ ಹಾಗೂ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲು ಶನಿವಾರ ಬಡ ವಿದ್ಯಾರ್ಥಿ ನಿಲಯದಲ್ಲಿ ನಡೆದ ತಾಲ್ಲೂಕು ಸಮಗ್ರ ನೀರಾವರಿ ಹೋರಾಟ ಸಮಿತಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.
ಸಭೆಯ ನೇತೃತ್ವ ವಹಿಸಿದ್ದ ಕೂಡ್ಲಿಗಿ ಹಿರೇಮಠದ ಪ್ರಶಾಂತ ಸ್ವಾಮಿ ಮಾತನಾಡಿ, 15 ವರ್ಷಗಳಿಂದಲೂ ತಾಲ್ಲೂಕಿಗೆ ಸಮಗ್ರ ನೀರಾವರಿ ಕಲ್ಪಿಸಬೇಕು ಎಂದು ಅನೇಕ ಹೋರಾಟಗನ್ನು ನಡೆಸುತ್ತ ಬರಲಾಗಿದೆ. ಆದರೆ ಇದುವರೆಗೂ ಯಾವುದೇ ಪ್ರತಿಫಲ ಸಿಕ್ಕಿಲ್ಲ. ಈಗ ನಡೆಯುತ್ತಿರುವ ಹೋರಾಟಕ್ಕೆ ಸ್ಥಳೀಯ ಜನ ಪ್ರತಿನಿಧಿಗಳು ಬೆಂಬಲ ಹಾಗೂ ಹೆಚ್ಚಿನ ಸಹಕಾರ ನೀಡಬೇಕು ಎಂದು ಹೇಳಿದರು.
ಬಿಡಿಸಿಸಿ ಬ್ಯಾಂಕ್ ನಿದರ್ೇಶಕ ಎಂ. ಗುರುಸಿದ್ದನಗೌಡ ಮಾತನಾಡಿ, ಭದ ಮೇಲ್ದಂಡೆ ಯೋಜನೆ ಜಾರಿ ವಿಷಯವಾಗಿ ಈಗಾಗಲೇ ನ್ಯಾಯಾಲಯದಲ್ಲಿ ಎರಡು ರಿಟ್ ಅಜರ್ಿಗಳನ್ನು ಹಾಕಲಾಗಿದೆ. ಭದ್ರ ಮೇಲ್ದಂಡೆ ಯೋಜನೆಯಲ್ಲಿ ಸದ್ಯದ ಸ್ಥಿತಿಯಲ್ಲಿ ತಾಲ್ಲೂಕಿಗೆ ನೀರಿನ ಲಭ್ಯತೆ ಇಲ್ಲ ಎಂದು ತಿಳಿದು ಬಂದಿದೆ. ಅದ್ದರಿಂದ ಇದಕ್ಕೆ ಪರ್ಯಾಯವಾಗಿ ಗರ್ಭಗುಡಿ ಯೋಜನೆಯಿಂದಲಾದರೂ ತಾಲ್ಲೂಕಿಗೆ ನೀರಾವರಿ ಕಲ್ಪಿಸಬಹುದಾಗಿದೆ. ಈ ವಿಷಯದಲ್ಲಿ ಸ್ಥಳೀಯ ಶಾಸಕರು ಸರ್ಕಾರ ಮಟ್ಟದಲ್ಲಿ ಒತ್ತಾಯ ಹಾಕಿದಲ್ಲಿ ಹೆಚ್ಚಿನ ಅನುಕೂಲವಾಗುತ್ತದೆ ಎಂದು ತಿಳಿಸಿದರು.
ಕಾನಾಮಡುಗು ದಾಸೋಹಮಠದ ಶರಣಾರ್ಯರು ಸಭೆಯ ಸಾನ್ನಿಧ್ಯ ವಹಿಸಿದ್ದರು. ಕನ್ನಡ ಸೇನೆ ಕರ್ನಾಟಕ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಗುನ್ನಳ್ಳಿ ರಾಘವೇಂದ್ರ, ಪಟ್ಟಣ ಪಂಚಾಯ್ತಿ ಅಧ್ಯಕ್ಷ ಪಿ. ರಜನಿಕಾಂತ್, ಹೋರಾಟ ಸಮಿತಿಯ ಕಕ್ಕುಪ್ಪಿ ಬಸವರಾಜ, ವಕೀಲ ಡಿ.ಹೆಚ್. ದುರುಗೇಶ, ಸಾಲುಮನಿ ರಾಘವೇಂದ್ರ, ಟಿ.ಜಿ.ಮಲ್ಲಿಕಾರ್ಜುನ , ಕೆ.ಹೆಚ್. ಎಂ.ಸಚಿನ್, ಮಾಳಗಿ ಗುರುರಾಜ, ಕೆ.ಜಿ. ಬಸವರಾಜ, ರೈತ ಸಂಘದ ವಿ. ನಾಗರಾಜ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 