ನವದೆಹಲಿ: ಕಾಂಗ್ರೆಸ್ ಮುಸ್ಲಿಮರ ಪಕ್ಷ ಮತ್ತು ಧರ್ಮದ ಆಧಾರದ ಮೇಲೆ ಮತ ವಿಭಜನೆ ಮಾಡುವ ಮೂಲಕ 2019 ಲೋಕಸಭೆ ಚುನಾವಣೆ ಗೆಲ್ಲಲು ಸಿದ್ಧತೆ ನಡೆಸಿದೆ ಎಂಬ ವರದಿಯ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಸ್ಪಷ್ಟನೆ ನೀಡಬೇಕು ಎಂದು ಬಿಜೆಪಿ ಶುಕ್ರವಾರ ಒತ್ತಾಯಿಸಿದೆ.
ಧಾಮರ್ಿಕ ವಿಭಜನೆ ಮಾಡುವ ಮೂಲಕ ಕಾಂಗ್ರೆಸ್ ಮುಂದಿನ ಲೋಕಸಭೆ ಚುನಾವಣೆ ಎದುರಿಸಲು ಮುಂದಾಗಿದೆ ಎಂದು ರಕ್ಷಣಾ ಸಚಿವೆ ನಿಮರ್ಾಲಾ ಸೀತಾರಾಮನ್ ಅವರು ಆರೋಪಿಸಿದ್ದಾರೆ.
ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನ ಕೆಲ ನಾಯಕರ ಹೇಳಿಕೆ ಮತ್ತು ವರದಿಗಳನ್ನು ಗಮನಿಸಿದರೆ ದೇಶದ ಅತ್ಯಂತ ಹಳೆಯ ಪಕ್ಷ ಕಾಂಗ್ರೆಸ್ ಮತ್ತೆ ತನ್ನ ಭಾರತ ವಿಭಜನೆ ಮನಸ್ಥಿತಿಗೆ ಮರಳುತ್ತಿದೆ ಎಂಬುದು ಸ್ಪಷ್ಟವಾಗುತ್ತದೆ ಎಂದರು.
ಇತ್ತೀಚಿಗೆ ದೆಹಲಿಯ ಮುಸ್ಲಿಂ ಬುದ್ಧಿಜೀವಿಗಳೊಂದಿಗೆ ನಡೆದ ಸಭೆಯಲ್ಲಿ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಮುಸ್ಲಿಮರ ಪಕ್ಷ ಎಂದು ಹೇಳಿರುವ ಮಾಧ್ಯಮ ವರದಿಯೊಂದನ್ನು ಪ್ರದಶರ್ಿಸಿದ ರಕ್ಷಣಾ ಸಚಿವೆ, ಕಾಂಗ್ರೆಸ್ ಮುಸ್ಲಿಮರ ಪಕ್ಷವೇ ಎಂಬುದನ್ನು ರಾಹುಲ್ ಗಾಂಧಿ ಸ್ಪಷ್ಟಪಡಿಸಬೇಕು ಎಂದರು.
ಇದುವರೆಗೆ ಬೇರೆ ರೀತಿಯಲ್ಲಿ ಮುಸ್ಲಿಮರನ್ನು ಓಲೈಕೆ ಮಾಡಲಾಗುತ್ತಿತ್ತು. ಈಗ ಪಕ್ಷದ ಹೆಸರಿನಿಂದಲೇ ಓಲೈಕೆ ಮಾಡಲಾಗುತ್ತಿದೆ ಎಂದು ಸೀತಾರಾಮನ್ ಅವರು ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ನಾಯಕ ಶಶಿ ತರೂರ್ ಅವರ ಹಿಂದೂ ಪಾಕಿಸ್ತಾನ ಹೇಳಿಕೆ ಮತ್ತು ರಾಹುಲ್ ಗಾಂಧಿ ಹೇಳಿಕೆಯಿಂದ ಜನರಲ್ಲಿ ಗೊಂದಲ ಉಂಟಾಗಿದ್ದು, ಕಾಂಗ್ರೆಸ್ ಈ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದರು.