ಸತತ 5ನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

 

ನವದೆಹಲಿ; ಪೆಟ್ರೋಲ್ ಮತ್ತು ಡೀಸೆಲ್ ದರ ಗಗನಕ್ಕೇರುತ್ತಿದ್ದು, ಸತತ ಐದನೇ ದಿನ ಪ್ರತೀ ಲೀಟರ್ ತೈಲ ಬೆಲೆಯಲ್ಲಿ ಏರಿಕೆಯಾಗಿದೆ.  

ರಾಜಧಾನಿ ದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ರೂ.76.36 ಇದ್ದು, ಮುಂಬೈ, ಚೆನ್ನೈ ಮತ್ತು ಕೋಲ್ಕತಾದಲ್ಲಿ ಕ್ರಮವಾಗಿ ರೂ. 83.75, ರೂ. 79.25, ರೂ. 79.03 ಆಗಿದೆ.  

ಇದರಂತೆ ಡೀಸೆಲ್ ದರ ಕೂಡ ಏರಿಕೆಯಾಗಿದ್ದು, ದೆಹಲಿಯಲ್ಲಿ ಇಂದಿನ ಡೀಸೆಲ್ ಬೆಲೆ ರೂ. 68.07 ಆಗಿದೆ. ಮುಂಬೈನಲ್ಲಿ ರೂ. 72.23, ಕೋಲ್ಕತಾದಲ್ಲಿ ರೂ. 70.62, ಚೆನ್ನೈನಲ್ಲಿ ರೂ.71.85 ಆಗಿದೆ.  

ಇನ್ನು ಬೆಂಗಳೂರಿನಲ್ಲಿಯೂ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಹೆಚ್ಚಳವಾಗಿದ್ದು, ಪ್ರತಿ ಲೀಟರ್ ಪೆಟ್ರೋಲ್ ಬೆಗೆ 15 ಪೈಸೆ ಏರಿಕೆಯಾಗಿದೆ. ಬೆಲೆ ಏರಿಕೆಯಿಂದಾಗಿ ಇಂದಿನ ಪೆಟ್ರೋಲ್ ದರ ರೂ.77.36 ಆಗಿದ್ದು, ಡೀಸೆಲ್ ದರ ರೂ.68.84 ಆಗಿದೆ. ನೂತನ ದರಗಳು ಇಂದು ಬೆಳಿಗ್ಗೆ 6 ಗಂಟೆಯಿಂದಲೇ ಜಾರಿಯಾಗಿದೆ.  (ಫೋಟೊ 1)

ಪ್ರಧಾನಿ ಮೋದಿ, ದಕ್ಷಿಣ ಕೊರಿಯಾ ಅಧ್ಯಕ್ಷರಿಂದ ಸ್ಯಾಮ್ಸಂಗ್ ಮೊಬೈಲ್ ಉತ್ಪಾದನಾ ಘಟಕ ಉದ್ಘಾಟನೆ 

ನೋಯ್ಡಾ:  ನೋಯ್ಡಾದಲ್ಲಿನ ವಿಶ್ವದ ಅತಿ ದೊಡ್ಡ ಮೊಬೈಲ್ ಫ್ಯಾಕ್ಟರಿಯನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ದಕ್ಷಿಣ ಕೊರಿಯಾದ ಅಧ್ಯಕ್ಷ ಮೂನ್-ಜೆ-ಇನ್ ಜಂಟಿಯಾಗಿ ಉದ್ಘಾಟಿಸಿದ್ದಾರೆ.  

ಸುಮಾರು 35 ಎಕರೆಯ ಪ್ರದೇಶದಲ್ಲಿ ನಿಮರ್ಾಣವಾಗಿರುವ ಸ್ಯಾಮ್ ಸಂಗ್ ಎಲೆಕ್ಟ್ರಾನಿಕ್ಸ್, ಮೊಬೈಲ್ ಫ್ಯಾಕ್ಟರಿ ವಿಶ್ವದ ಅತಿ ದೊಡ್ಡ ಮೊಬೈಲ್ ಫ್ಯಾಕ್ಟರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು,  2020 ರ ವೇಳೆಗೆ ಪ್ರತಿ ತಿಂಗಳಿಗೆ 10 ಮಿಲಿಯನ್ ಯುನಿಟ್ ಗಳಷ್ಟು ಮೊಬೈಲ್ ಗಳು ಈ ಉತ್ಪಾದನಾ ಘಟಕದಲ್ಲಿ ಉತ್ಪಾದನೆಯಾಗಲಿವೆ.  

ನೋಯ್ಡಾದಲ್ಲಿ ಉದ್ಘಾಟನೆಯಾಗಿರುವ ಮೊಬೈಲ್ ಉತ್ಪಾದನಾ ಘಟಕ ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಮೇಕ್ ಇನ್ ಇಂಡಿಯಾ ಯೋಜನೆಯನ್ನು ಮತ್ತಷ್ಟು ಬಲಿಷ್ಠಗೊಳಿಸಲಿದೆ.  ನೋಯ್ಡಾದ ಸೆಕ್ಟರ್ 81 ರಲ್ಲಿ 1990 ರಲ್ಲಿ ಸ್ಯಾಮ್ ಸಂಗ್ ಎಲೆಕ್ಟ್ರಾನಿಕ್ಸ್ ಉಪಕರಣಗಳ ಉತ್ಪಾದನಾ ಘಟಕವನ್ನು ಪ್ರಾರಂಭಿಸಲಾಗಿತ್ತು ಈ ಬಳಿಕ 1997 ರಲ್ಲಿ ಸ್ಯಾಮ್ ಸಂಗ್ ಟಿವಿ ಉತ್ಪಾದನೆಯನ್ನೂ ಪ್ರಾರಂಭಿಸಲಾಯಿತು.

ಈಗಿರುವ ಮೊಬೈಲ್ ಉತ್ಪಾದನಾ ಘಟಕವನ್ನು 2005 ರಲ್ಲಿ ಪ್ರಾರಂಭಿಲಾಗಿದ್ದು, ಮತ್ತಷ್ಟು ಅಭಿವೃದ್ಧಿಗೊಳಿಸಲಾಗಿದೆ.  ಕಳೆದ ವರ್ಷ ಸ್ಯಾಮ್ ಸಂಗ್ ಸಂಸ್ಥೆ ನೋಯ್ಡಾದ ಉತ್ಪಾದನಾ ಘಟಕದಲ್ಲಿ 4,915 ಕೋಟಿ ರೂಪಾಯಿ ಹೂಡಿಕೆ ಮಾಡಿ ಉತ್ಪಾದನೆಯನ್ನು ದ್ವಿಗುಣಗೊಳಿಸಲು ತೀಮರ್ಾನಿಸಿತ್ತು, ಅದಂತೆಯೇ ಈಗ ಹೊಸ ಉತ್ಪಾದನಾ ಘಟಕವನ್ನೂ ಪ್ರಾರಂಭಿಸಲಾಗಿದ್ದು ವಿಶ್ವದ ಅತಿ ದೊಡ್ಡ ಮೊಬೈಲ್ ಉತ್ಪಾದನಾ ಘಟಕ ಎಂಬ ಹೆಗ್ಗಳಿಕೆಗೆ 

ಪಾತ್ರವಾಗಿದೆ.