ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ನ.20ರೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸಿವಿಸಿಗೆ ಸುಪ್ರೀಂ ಸೂಚನೆ

ನವದೆಹಲಿ: ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ವಿರುದ್ಧದ ಆರೋಪಗಳಿಗೆ ಕೇಂದ್ರ ಜಾಗೃತ ಆಯೋಗದ ವರದಿಯನ್ನು(ಸಿವಿಸಿ) ಮುಚ್ಚಿದ ಲಕೋಟೆಯಲ್ಲಿ ನವೆಂಬರ್ 19ರ ಒಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ನ್ಯಾಯಪೀಠ, ಕೇಂದ್ರ ಜಾಗೃತ ಆಯೋಗದ ವರದಿಯನ್ನು ಅಟೊರ್ನಿ ಜನರಲ್ ಕೆ ಕೆ ವೇಣುಗೋಪಾಲ್ ಮತ್ತು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ನೀಡಬೇಕೆಂದು ಹೇಳಿದೆ.

ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ನ ನ್ಯಾಯಾಧೀಶರು, ಅಲೋಕ್ ವರ್ಮಾ ಮೇಲೆ ಕೇಳಿಬರುತ್ತಿರುವ ಆರೋಪಗಳ ಕುರಿತು ನೀಡಿರುವ ಸಿವಿಸಿ ವರದಿ ತುಂಬಾ ಪ್ರಶಂಸಾತ್ಮಕವಾಗಿಲ್ಲ, ಹೀಗಾಗಿ ಕೆಲವು ವಿಷಯಗಳಿಗೆ ಸಂಬಂಧಪಟ್ಟಂತೆ ಹೆಚ್ಚಿನ ತನಿಖೆಯ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ಮುಚ್ಚಿದ ಲಕೋಟೆಯಲ್ಲಿ ಸೋಮವಾರದೊಳಗೆ ವರದಿ ನೀಡಬೇಕು. ನ.20ರಂದು ವಿಚಾರಣೆ ಕೈಗೆತ್ತಿಕೊಳ್ಳಲಾಗುವುದು ಎಂದರು.