ನಾಳೆ ವಿಶ್ವ ಜಲ ದಿನಾಚರಣೆ
ಹಾವೇರಿ20: ತಾಲೂಕ ಎಲ್ಲಾ ಸರಕಾರಿ ಕಚೇರಿಗಳಲ್ಲಿ, 33 ಗ್ರಾಮ ಪಂಚಾಯತಿ, ಹಳ್ಳಿಗಳಲ್ಲಿ, ಶಾಲೆಗಳು, ಅಂಗನವಾಡಿಗಳಲ್ಲಿ, ಮಾ 22 ರಂದು ವಿಶ್ವಜಲದಿನ ಆಚರಿಸಬೇಕು. ಜಲ ಸಂರಕ್ಷಣೆಗೆ ಪ್ರತಿಜ್ಞೆ ಸ್ವೀಕರಿಸಿ, ಪ್ರತಿಯೊಬ್ಬರೂ ಒಂದೊಂದು ಸಸಿ ನೆಟ್ಟು ಪೋಷಿಸಬೇಕೆಂದು ತಾಲೂಕ ಪಂಚಾಯಿತಿ ಕಾರ್ಯನಿವರ್ಾಹಕಾ ಅಧಿಕಾರಿ ಅನ್ನಪೂರ್ಣ ಮುದುಕಣ್ಣನವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕರ್ನಾಟಕ ಸರ್ಕಾರ 2019ನೇ ವರ್ಷವನ್ನು ಜಲವರ್ಷ ಎಂಬುದಾಗಿ ಘೋಷಿಸಿದೆ. ಜಲವರ್ಷದ ಆಚರಣೆಗಾಗಿ ರಾಜ್ಯಾದ್ಯಂತ ವಿವಿಧ ಚಟುವಟಿಕೆಗಳ ಮೂಲಕ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸುತ್ತಾ ಮಾ. 22ರಂದು ವಿಶ್ವ ಜಲ ದಿನ ಆಚರಿಸಿಲಾಗುವುದು. ಅಂದು ಎಲ್ಲಾ ಸಕರ್ಾರಿ ಕಚೇರಿಗಳಲ್ಲಿ, ಗ್ರಾಮ ಪಂಚಾಯತಿಗಳಲ್ಲಿ, ಹಳ್ಳಿಗಳಲ್ಲಿ, ಶಾಲೆಗಳಲ್ಲಿ, ಅಂಗನವಾಡಿಗಳಲ್ಲಿ, ವಿಶ್ವ ಜಲದಿನ, ಆಚರಿಸಬೇಕು ಎಂದರು. ಜಲಾಮೃತ ಕಾರ್ಯಕ್ರಮದ ಅಂಗವಾಗಿ ಜನರಿಗೆ ನೀರಿನ ಬಗ್ಗೆ ಅರಿವು ಮೂಡಿಸಲು ಜಲ ಸಾಕ್ಷರತೆ, ಜಲ ಸಂರಕ್ಷಣೆ, ಜಲ ಪ್ರಜ್ಞೆ ಹಾಗೂ ಹಸಿರೀಕರಣ ಎಂಬ ನಾಲ್ಕು ಅಂಶ ಪರಿಚಯಿಸಲಾಗುತ್ತಿದೆ.
ನೀರನ್ನು ಮಿತವಾಗಿ ಬಳಸಿ ನಾಳೆಗೂ ಉಳಿಸಿ, ನೀರು ಅಮೃತ, ನೀರಿನ ಜವ್ಬಾರಿ ನನ್ನದು, ಸರ್ವರಿಗೂ ಜಲ ಸದಾಕಾಲ ಎಂಬ ಘೋಷವಾಕ್ಯಗಳ ಮೂಲಕ ಜನರಿಗೆ ನೀರಿನ ಬಳಕೆ ಮತ್ತು ಮಹತ್ವ ಹಾಗೂ ಮುಂದಿನ ಪೀಳಿಗೆಗೆ ನೀರು ಉಳಿಸಬೇಕು ಎನ್ನುವುದರ ಮಾಹಿತಿ ನೀಡಲಾಗುವುದು ಎಂದು ಅವರು ತಿಳಿಸಿದರು.ವಿಶ್ವ ಜಲ ದಿನಾಚರಣೆಗೂ ಮುನ್ನ ಜಿಲ್ಲೆಯ ಪ್ರಮುಖ ಸ್ಥಳಗಳಲ್ಲಿ ಕಿರು ನೀರು ಸರಬರಾಜು ಟ್ಯಾಂಕರ್ ಗಳು, ಶಾಲೆಗಳು, ಅಂಗನವಾಡಿ, ಡೈರಿಗಳು,ಸಕರ್ಾರಿ ಕಟ್ಟಡಗಳ ಕಂಪೌಂಡ್ ಗೋಡೆಗಳ ಮೇಲೆ ಜಲಸಂರಕ್ಷಣಾ ಸಂದೇಶ ಮತ್ತು ಚಿತ್ರ ಪ್ರದಶರ್ಿಸಲು ಅವರು ಸೂಚಿಸಿದರು.
ಕೃಷಿ, ತೋಟಗಾರಿಕೆ, ಅರಣ್ಯ, ನೀರಾವರಿ ಇಲಾಖೆಗಳು ಜಲಮೂಲಗಳ ಪುನಶ್ಚೇತನಕ್ಕಾಗಿ ಕೈಗೊಳ್ಳುವ ಕಾರ್ಯಕ್ರಮ ಮತ್ತು ನೀರಿಗೆ ಸಂಬಂಧಿಸಿದ ಇತರೆ ಯೋಜನೆಗಳಿಗೆ ಹೆಚ್ಚು ಗಮನ ನೀಡಬೇಕು.ಕಳೆದ ಹದಿನೇಳು ವರ್ಷಗಳಲ್ಲಿ ಹದಿನಾಲ್ಕು ವರ್ಷ ನಮ್ಮ ರಾಜ್ಯ ಬರಪೀಡಿತವಾಗಿದೆ. ಇದಕ್ಕೆ ಕಾರಣ ರಾಜ್ಯದಲ್ಲಿ ಹಸಿರು ಕಡಿಮೆಯಾಗಿರುವುದು. ಪ್ರಸಕ್ತ ವರ್ಷವನ್ನು ವಿಶ್ವಜಲವರ್ಷವನ್ನಾಗಿಸಿ ಜಲ ಮರುಪೂರಣ ಯೋಜನೆ ಮತ್ತು ತಾಲೂಕಿನ ಎಲ್ಲ ಗ್ರಾಮ ಪಂಚಾಯತಿಯ ಮತ್ತು ಹಳ್ಳಿಗಳಲ್ಲಿ ಸಸಿ ನೆಡಲಾಗುವುದುಎಂದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 