ವಿಶ್ವ ಜನಸಂಖ್ಯಾ ದಿನಾಚರಣೆ: ಜಾಗೃತಿ ಜಾಥಾ

ಗದಗ 11:  ನಗರದ ಮುನ್ಸಿಪಲ್ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಜಿಲ್ಲಾ ಮಟ್ಟದ ವಿಶ್ವ ಜನಸಂಖ್ಯೆ ದಿನಾಚರಣೆ ಪ್ರಯುಕ್ತ ಜರುಗಿದ ಜನ ಜಾಗೃತಿ ಜಾಥಾಗೆ ಗದಗ ಜಿಲ್ಲಾ ಪಂಚಾಯತ ಅಧ್ಯಕ್ಷ ವಾಸಣ್ಣ ಕುರಡಗಿ ಅವರು ಚಾಲನೆ ನೀಡಿದರುದೀ ಸಂದರ್ಭದಲ್ಲಿ ಮಾತನಾಡಿದ ಅವರು ಇವತ್ತಿನ ದಿನಮಾನಗಳಲ್ಲಿ ಜನಸಂಖ್ಯೆ ಹೆಚ್ಚುವಿಕೆಯಿಂದ ಹಲವಾರು ಸಮಸ್ಯೆಗಳು ಉದ್ಭವಾಗುತ್ತಿವೆ. ಜನಸಂಖ್ಯೆ ನಿಯಂತ್ರಣವಾಗದೇ ಜೀವನ ಸಾಗಾಣೆಗೆ ಬೇಕಾದಂತಹ ಮೂಲಭೂತ ಸೌಕರ್ಯಗಳನ್ನು ವ್ಯವಸ್ಥಿತವಾಗಿ ನೀಡಲು ಸಾಧ್ಯವಾಗುವುದಿಲ್ಲಾ ಆದುದರಿಂದ ಹೆಚ್ಚುತ್ತಿರುವ ಜನಸಂಖ್ಯೆ ನಿಯಂತ್ರಿಣ ಕುರಿತಂತೆ ಹೆಚ್ಚಿನ ಜಾಗೃತಿ ಅಗತ್ಯವಾಗಿದೆ ಎಂದು ವಾಸಣ್ಣ ಕುರಡಗಿ ನುಡಿದರು.

  ಜಿ.ಪಂ. ಉಪಕಾರ್ಯದಶರ್ಿ ಎಸ್.ಸಿ.ಮಹೇಶ ಮಾತನಾಡಿ ಹೆಚ್ಚುತ್ತಿರುವ ಜನಸಂಖ್ಯೆ ದೇಶದ ಅಭಿವೃದ್ಧಿಗೆ ತಡೆ ಹಾಕುತ್ತಿದೆ. ಜನತೆಗೆ ಅಗತ್ಯದ  ಮೂಲಸೌಕರ್ಯಗಳ ಬಳಕೆಗೆ ಹೊರೆಯಾಗುತ್ತಿದೆ. ಹೆಚ್ಚುತ್ತಿರುವ ಜನಸಂಖ್ಯೆ ನಿಯಂತ್ರಣಕ್ಕೆ ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಕಾರ್ಯವಾಗಬೇಕಿದೆ ಎಂದು ನುಡಿದರು.

  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಂ.ಹೊನಕೇರಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಪಲ್ಲೇದ, ಡಾ. ಅರುಂಧತಿ ಕುಲಕಣರ್ಿ, ಕುಟುಂಬ ಕಲ್ಯಾಣಾಧಿಕಾರಿ ಡಾ. ವಾಯ.ಕೆ.ಭಜಂತ್ರಿ  ತಾಲೂಕು ಆರೋಗ್ಯಾಧಿಕಾರಿ ಡಾ. ಎಸ್.ಎಸ್.ನೀಲಗುಂದ,  ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಚ್.ಸುರೇಶ, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಆಶಾ ಕಾರ್ಯಕತರ್ೆಯರು, ಪ್ಯಾರಾ ಮೆಡಿಕಲ್ ಕಾಲೇಜಿನ ವಿಧ್ಯಾಥರ್ಿ ವಿದ್ಯಾಥರ್ಿನಿಯರು ಜಾಥಾದಲ್ಲಿ ಭಾಗವಹಿಸಿದ್ದರು.