ಅಕ್ರಮವಾಗಿ ಸಂಗ್ರಹಿಸಿದ ರೂ.2.41 ಲಕ್ಷ ಮೌಲ್ಯದ ಪಡಿತರ ಅಕ್ಕಿ ವಶ
ಹಾವೇರಿ:.22: ಅಕ್ರಮವಾಗಿ ಸಂಗ್ರಹಿಸಿದ 107 ಕ್ವಿಂಟಲ್ ಪಡಿತರ ಅಕ್ಕಿಯನ್ನು ಜಿಲ್ಲಾ ಚುನಾವಣಾ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ಗುರುವಾರ ರಾತ್ರಿ ಹಾನಗಲ್ ತಾಲೂಕು ಅಕ್ಕಿ ಆಲೂರಿನಲ್ಲಿ ವಶಪಡಿಸಿಕೊಂಡು ದೂರು ದಾಖಲಿಸಿಕೊಳ್ಳಲಾಗಿದೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳ ತಂಡ ಶಿರಸಿ ರಸ್ತೆಯ ನಾಲ್ಕರ ಕ್ರಾಸ್ನಿಂದ ಅಕ್ಕಿಆಲೂರು ಕಡೆಗೆ ಹೋಗುವ ರಸ್ತೆಯಲ್ಲಿ ಶಿವಯೊಗೆಪ್ಪ ಉಪ್ಪಿನ ಇವರಿಗೆ ಸೇರಿದ ಜಮೀನಿನಲ್ಲಿನ ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿದ 2,41,425/- ರೂ. ಮೌಲ್ಯದ ಅಂದಾಜು 107.30 ಕ್ವಿಂಟಲ್ ಪಡಿತರ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ ಹಾಗೂ ಸಾಗಾಣಿಕೆಗೆ ಬಳಸುತ್ತಿದ್ದ ರೂ.5 ಲಕ್ಷ ಒಂದು ಲಾರಿ ಜಪ್ತಿಮಾಡಲಾಗಿದೆ.
ಆರೋಪಿತರಾದ ಶಿವಯೋಗೆಪ್ಪ ಉಪ್ಪಿನ, ಪಾಂಡುರಂಗ ಸೋನಾವಾನೆ ಹಾಗೂ ಬೈಜನಾಥ ಸೋನಾವಾನೆ ಇವರ ವಿರುದ್ಧ ದೂರು ದಾಖಲಿಸಲಾಗಿದೆ. ದಾಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿದರ್ೆಶಕರಾದ ವಿನೋದ ಹೆಗ್ಗಳಗಿ, ಹಾನಗಲ್ ತಹಶೀಲ್ದಾರ ಗಂಗಣ್ಣ ಹಾಗೂ ಇತರ ಅಧಿಕಾರಿಗಳು ಭಾಗವಹಿಸಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 