‘ಆಯುಷ್ ವೈದ್ಯಾಧಿಕಾರಿಗಳ ಮುಂಬಡ್ತಿಗೆ ವೃಂದ ಮತ್ತು ನೇಮಕಾತಿ ನಿಯಮಗಳ ಪರಿಷ್ಕರಣೆಗೆ ಕ್ರಮ’
‘Action to revise the cadre and recruitment rules for the advancement of AYUSH medical officers’
ಬೆಳಗಾವಿ, ಸುವರ್ಣ ವಿಧಾನಸೌಧ ಡಿ.18: ಆಯುಷ್ ಇಲಾಖೆಯಲ್ಲಿನ ವೈದ್ಯಾಧಿಕಾರಿಗಳ ಹುದ್ದೆಯಿಂದ ಹಿರಿಯ ವೈದ್ಯಾಧಿಕಾರಿಗಳ ಹುದ್ದೆಗೆ ಮುಂಬಡ್ತಿ ನೀಡುವುದಕ್ಕೆ ಸಂಬಂಧಿಸಿದಂತೆ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಪರಿಷ್ಕರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಕೃಷಿ ಸಚಿವ ಚಲುವರಾಯ ಸ್ವಾಮಿ ಹೇಳಿದರು.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಬಸವನಗುಡಿ ಶಾಸಕ ರವಿ ಸುಬ್ರಮಣ್ಯ ಎಲ್.ಎ. ಅವರ ಪ್ರಶ್ನೆಗೆ ಸದನದಲ್ಲಿ ಉತ್ತರಿಸಿದರು.
ಆಯುಷ್ ಇಲಾಖೆಯಲ್ಲಿ ವೈದ್ಯಾಧಿಕಾರಿಗಳ ಹುದ್ದೆಯಿಂದ ಹಿರಿಯ ವೈದ್ಯಾಧಿಕಾರಿಗಳ ಹುದ್ದೆಗೆ ಮುಂಬಡ್ತಿ ಮೂಲಕ ಒಟ್ಟು 95 ಹುದ್ದೆಗಳನ್ನು ಭರ್ತಿ ಮಾಡಬೇಕಿದೆ. ಇದರಲ್ಲಿ 65 ಆಯುರ್ವೇದ, 15-ಯುನಾನಿ, 12-ಹೋಮಿಯೋಪಥಿ ಹಾಗೂ ಪ್ರಕೃತಿ ಚಿಕಿತ್ಸೆ ಮತ್ತು ಯೋಗದ 03 ವೈದ್ಯರಿಗೆ ಮುಂಬಡ್ತಿ ನೀಡಬೇಕಿದೆ. ಇಲಾಖೆಯಲ್ಲಿ 116 ಹಿರಿಯ ವೈದ್ಯಾಧಿಕಾರಿಗಳ ಹುದ್ದೆಗಳು ಮಂಜೂರಾಗಿದ್ದು, ಕಳೆದ ಆರೇಳು ರ್ವುಗಳಿಂದ ಹಿರಿಯ ವೈದ್ಯಾಧಿಕಾರಿಗಳ ವೃಂದದಲ್ಲಿ ಹುದ್ದೆಗಳು ಖಾಲಿ ಇವೆ. ವೈದ್ಯಾಧಿಕಾರಿಗಳಿಗೆ ಸ್ಥಾನಪನ್ನ ಬಡ್ತಿ ನೀಡುವುದಕ್ಕೆ ಸಂಬಂಧಿಸಿದಂತೆ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಪರಿಷ್ಕರಿಸಲು ಕ್ರಮ ಕೈಗೊಳ್ಳಲಾಗಿದ್ದು, ಬಳಿಕ ಮುಂಬಡ್ತಿ ಪ್ರಕ್ರಿಯೆ ಕೈಗೊಳ್ಳಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 