ಶಿಕ್ಷಣ ಹಾಗೂ ಸಾಮಾಜಿಕ ಸೇವೆಗೆ ‘ಅಮ್ಮ’ ಸಂಸ್ಥೆ ಬದ್ಧ: ಜಿ.ಎಸ್. ನದಾಫ್
‘Amma’ Organization Committed to Education and Social Service: G.S. Nadaf
ಸವಣೂರು, ಆ. 08: ತಾಲ್ಲೂಕಿನ ಹತ್ತಿಮತ್ತೂರು ಹೋಬಳಿ ವ್ಯಾಪ್ತಿಯಲ್ಲಿ ‘ಅಮ್ಮ’ ಸಂಸ್ಥೆಯು ನಿರಂತರವಾಗಿ ಶೈಕ್ಷಣಿಕ ಹಾಗೂ ಸಾಮಾಜಿಕ ಸೇವಾ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿದೆ ಎಂದು ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕ ಜಿ.ಎಸ್. ನದಾಫ್ ಹೇಳಿದರು.
ತಾಲ್ಲೂಕಿನ ಅರಳಿಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಅಮ್ಮ’ ಸಂಸ್ಥೆಯ ಸಂಸ್ಥಾಪನಾ ದಿನದ ಅಂಗವಾಗಿ ಆಯೋಜಿಸಿದ್ದ ವಿದ್ಯಾರ್ಥಿಗಳಿಗೆ ನೋಟ್ಬುಕ್ ಹಾಗೂ ಕಲಿಕಾ ಸಾಮಗ್ರಿಗಳ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.
ಸಮಾಜದಲ್ಲಿ ಸೇವೆ ಸಲ್ಲಿಸಲು ಹಣಕ್ಕಿಂತ ಸೇವಾ ಮನೋಭಾವ ಮುಖ್ಯ. ಹಿರೇಮುಗ್ಗದೂರು ಗ್ರಾಮದ ‘ಅಮ್ಮ’ ಸಂಸ್ಥೆಯ ಪದಾಧಿಕಾರಿಗಳು ನಿಸ್ವಾರ್ಥವಾಗಿ ಶಿಕ್ಷಣ ಹಾಗೂ ಸಾಮಾಜಿಕ ಸೇವೆ ಮಾಡಲು ಬದ್ಧರಾಗಿದ್ದಾರೆ.
ಸಂಸ್ಥೆ ಸ್ಥಾಪನೆಯಾದ ದಿನದಿಂದಲೂ ಶಾಲಾ ವಿದ್ಯಾರ್ಥಿಗಳಿಗೆ ನೋಟ್ಬುಕ್, ಪೆನ್, ಪೆನ್ಸಿಲ್, ರಬ್ಬರ್ ಸೇರಿದಂತೆ ಅಗತ್ಯ ಕಲಿಕಾ ಸಾಮಗ್ರಿಗಳನ್ನು ವಿತರಿಸುತ್ತಾ ಬಂದಿದ್ದು, ಸಂಸ್ಥೆಯ ಸಾಮಾಜಿಕ ಕಾರ್ಯಗಳಿಗೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಹೇಳಿದರು.
ಶಾಲೆಯ ಶಿಕ್ಷಕ ಕೆ.ಆರ್. ಕರಿಬಸವರಾಜ್ ಮಾತನಾಡಿ, ‘ಅಮ್ಮ’ ಸಂಸ್ಥೆಯು ತಾಲ್ಲೂಕಿನ ವಿವಿಧ ಶಾಲೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿಗಳನ್ನು ವಿತರಿಸುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ. ಶಿಕ್ಷಣ ಕ್ಷೇತ್ರಕ್ಕೆ ಸಂಸ್ಥೆ ನೀಡುತ್ತಿರುವ ಕೊಡುಗೆಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ‘ಅಮ್ಮ’ ಸಂಸ್ಥೆಯ ಸಂಸ್ಥಾಪಕ ನಿಂಗಪ್ಪ ಆರೇರ, ಅಂಗನವಾಡಿ ಕೇಂದ್ರದ ಶಿಕ್ಷಕಿ ದೀಪಾ ಕುಲಕರ್ಣಿ, ಸಾವಕ್ಕ ಪುಟ್ಟಯ್ಯನವರ್, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 