‘ಅನುವಂಶಿಕ ಸಮಸ್ಯೆಗಳ ಕುರಿತ ಅರಿವು’ ಕಾರ್ಯಕ್ರಮ
‘Awareness about hereditary problems’ program
ಲೋಕದರ್ಶನ ವರದಿ
ವಿಜಯಪುರ 08 : ಪ್ರತಿಯೊಬ್ಬರೂ ಆನುವಂಶಿಕ ಸಮಸ್ಯೆಗಳ ಕುರಿತು ಜಾಗೃತಿ ಹೊಂದಿ, ಸರ್ಕಾರದ ಆರೋಗ್ಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಪಡೆದು ಅವುಗಳ ಸದುಪಯೋಗವನ್ನು ಪಡೆದುಕೊಳ್ಳುವುದು ಅಗತ್ಯ. ಎಂದು ವಿಜಯಪುರದ ಖ್ಯಾತ ವೈದ್ಯೆ ಕೊರಬು ವುಮೆನ್ಸ್ ಕೇರ್ ಆಸ್ಪತ್ರೆಯ ಡಾ.ಜ್ಯೋತಿ ಕೊರಬು ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿ ಕ್ಷೇಮಪಾಲನ ನಿರ್ದೇಶನಾಲಯ, ಸ್ನಾತಕ ಅಧ್ಯಯನ ವಿಭಾಗ ಹಾಗೂ ವಿಜಯಪುರದ ಕೊರಬು ವುಮೆನ್ಸ್ ಕೇರ್ ಆಸ್ಪತ್ರೆಯ ಸಹಯೋಗದೊಂದಿಗೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಭಾನುವಾರ ಆಯೋಜಿಸಿದ್ದ ‘ಅನುವಂಶಿಕ ಸಮಸ್ಯೆಗಳ ಕುರಿತ ಅರಿವು’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಆನುವಂಶಿಕ ಸಮಸ್ಯೆಗಳ ಬಗ್ಗೆ ನಿರ್ಲಕ್ಷ್ಯ ತೋರದೆ, ಆಸ್ಪತ್ರೆಗಳಲ್ಲಿ ಸಮಯಕ್ಕೆ ತಪಾಸಣೆ ಮಾಡಿಸಿ ವೈದ್ಯರಿಂದ ಅಗತ್ಯವಾದ ಸಲಹೆ ಹಾಗೂ ಸುರಕ್ಷತಾ ಕ್ರಮಗಳನ್ನು ಪಡೆದುಕೊಳ್ಳಬೇಕು ಎಂದರು. ಕಾರ್ಯಕ್ರಮದಲ್ಲಿ ಸಿಂಡಿಕೇಟ್ ಸದಸ್ಯೆ ಮಮತಾ ಎಸ್ ಮಾತನಾಡಿ, ದೇಹದ ರಚನೆ ಮತ್ತು ಕಾರ್ಯನಿರ್ವಹಣೆಯನ್ನು ನಿರ್ಧರಿಸುವ ಜೀನ್ಗಳು ಪೋಷಕರಿಂದ ಮಕ್ಕಳಿಗೆ ವರ್ಗವಾಗುತ್ತವೆ. ಈ ಜೀನ್ಗಳಲ್ಲಿ ಯಾವುದಾದರೂ ಬದಲಾವಣೆ ಸಂಭವಿಸಿದಾಗ ಅವು ವಿವಿಧ ಕಾಯಿಲೆಗಳಾಗಿ ಪರಿಣಮಿಸಬಹುದು. ಆದ್ದರಿಂದ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸುವುದು ಅಗತ್ಯ ಎಂದು ಅವರು ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, ಮಹಿಳೆಯರು ಮನಸ್ಸು ಮಾಡಿದರೆ ಏನನ್ನಾದರೂ ಸಾಧಿಸಬಹುದು. ಹೆಣ್ಣನ್ನು ಕೀಳಾಗಿ ಕಾಣದೆ ಅವರನ್ನು ಗೌರವಿಸಬೇಕು. ಮಹಿಳಾ ಸಬಲೀಕರಣಕ್ಕಾಗಿ ಪ್ರತಿಯೊಬ್ಬರೂ ಇನ್ನಷ್ಟು ಶ್ರಮಿಸಬೇಕು ಎಂದರು. ಇದೇ ಸಂದರ್ಭದಲ್ಲಿ ಸಾಮಾಜಿಕ ಸೇವೆಯ ಭಾಗವಾಗಿ ಡಾ.ಜ್ಯೋತಿ ಕೊರಬು ಅವರು ವ್ಹೀಲ್ಚೇರ್ ಅನ್ನು ದೇಣಿಗೆಯಾಗಿ ನೀಡಿದರು. ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್.ಲಕ್ಕಣ್ಣವರ್, ಆರ್ಥಿಕ ಅಧಿಕಾರಿ ರಾಮಣ್ಣ ಅಥಣಿ, ಶಿಕ್ಷಣ ನಿಕಾಯದ ಡೀನ್ ಪ್ರೊ. ಸಕ್ಪಾಲ್ ಹೂವಣ್ಣ, ಡಾ.ಜಿ. ಸೌಭಾಗ್ಯ, ಕೊರಬು ವುಮೆನ್ಸ್ ಆಸ್ಪತ್ರೆಯ ಆಡಳಿತಾಧಿಕಾರಿ ಈರಣ್ಣ ಸಿಂದಗಿ, ವಿದ್ಯಾರ್ಥಿ ಪ್ರತಿನಿಧಿ ಲಕ್ಷ್ಮೀ ಕನಾಳ ಮತ್ತಿತರರು ಉಪಸ್ಥಿತರಿದ್ದರು, ಕಾರ್ಯಕ್ರಮದಲ್ಲಿ ಪ್ರದರ್ಶಕ ಕಲೆಗಳ ಕೇಂದ್ರದ ವಿದ್ಯಾರ್ಥಿನಿಯರು ಪ್ರಾರ್ಥನಾ ಗೀತೆ ಹಾಡಿದರು. ವಿದ್ಯಾರ್ಥಿನಿ ಕ್ಷೇಮಪಾಲನ ನಿರ್ದೇಶನಾಲಯದ ನಿರ್ದೇಶಕಿ ಪ್ರೊ.ಜ್ಯೋತಿ ಎ. ಉಪಾಧ್ಯೆ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಡಾ.ಸುರೇಖಾ ರಾಠೋಡ ಅತಿಥಿಯರನ್ನು ಪರಿಚಯಿಸಿದರು. ಡಾ.ಜಕ್ಕವ್ವ ವಠಾರ ನಿರೂಪಿಸಿದರು. ಡಾ.ಕಾವೇರಿ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 