‘ರೈತರಿಂದ ಖರೀದಿಸಿ ರೈತರನ್ನು ಪ್ರೋತ್ಸಾಹಿಸಿ’
‘Buy from farmers and encourage farmers’
ಕೊಪ್ಪಳ 12: ರೈತರಿಂದ ನೇರವಾಗಿ ಗ್ರಾಹಕರಿಗೆ, ರೈತರಿಂದ ಖರೀದಿಸಿ ರೈತರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೊಪ್ಪಳ ತೋಟಗಾರಿಕೆ ಇಲಾಖೆಯಿಂದ ಮಹಾ ಶಿವರಾತ್ರಿ ಪ್ರಯುಕ್ತ ಫೆಬ್ರವರಿ 12 ರಿಂದ ಫೆ. 16 ರವರೆಗೆ ನಗರದ ತೋಟಗಾರಿಕೆ ಜಂಟಿ ನಿರ್ದೇಶಕರ ಕಚೇರಿ ಆವರಣದಲ್ಲಿ ಏರಿ್ಡಸಲಾದ “ದ್ರಾಕ್ಷಿ, ದಾಳಿಂಬೆ, ಪೇರಲ, ಅಂಜೂರ, ಕಲ್ಲಂಗಡಿ, ಕರಬೂಜ, ಬಾಳೆ, ಪಪ್ಪಾಯ, ಹಲಸು, ಜೇನು ಹಾಗೂ ಅಣಬೆ” ಪ್ರದರ್ಶನ ಮತ್ತು ಮಾರಾಟ ಮೇಳ-2026 ಕ್ಕೆ ಕೊಪ್ಪಳ ಶಾಸಕರಾದ ಕೆ. ರಾಘವೇಂದ್ರ ಹಿಟ್ನಾಳ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ, ಜಿಲ್ಲಾಧಿಕಾರಿ ಡಾ.ಸುರೇಶ ಬಿ. ಇಟ್ನಾಳ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಮಂಜುನಾಥ ಗೊಂಡಬಾಳ ಹಾಗೂ ಕೊಪ್ಪಳ ತಾಲ್ಲೂಕು ಅಧ್ಯಕ್ಷರಾದ ಬಾಲಚಂದ್ರನ್, ತೋಟಗಾರಿಕೆ ಜಂಟಿ ನಿರ್ದೇಶಕರಾದ ಕೃಷ್ಣ ಸಿ.ಉಕ್ಕುಂದ ಸೇರಿದಂತೆ ಇತರೆ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳು, ರೈತ ಉತ್ಪಾದಕರ ಸಂಸ್ಥೆ, ತೋಟಗಾರಿಕೆ ರೈತ ಉತ್ಪಾದಕರ ಸಂಸ್ಥೆಗಳು ಪ್ರತಿನಿಧಿಗಳು, ರೈತರು, ತೋಟಗಾರಿಕೆ ಬೆಳೆಗಾರರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 