‘ಅತಿಯಾದ ಗ್ಯಾಸ್ಟ್ರಿಕ್ ಸಮಸ್ಯೆ ಜಠರದ ಕ್ಯಾನ್ಸರ್ ಗೆ ಕಾರಣವಾಗಬಹುದು’
‘Excessive gastric problems can lead to stomach cancer’
ವಿಜಯಪುರ 28: ಅತಿಯಾದ ಆಮ್ಲೀಯತೆ ಅಥವಾ ಗ್ಯಾಸ್ಟ್ರಿಕ್ ಸಮಸ್ಯೆ ಜಠರದ ಕ್ಯಾನ್ಸರ್ ಗೆ ಕಾರಣವಾಗಬಹುದು ಎಂದು ಹುಬ್ಬಳ್ಳಿ ಎಚ್.ಸಿ.ಜಿ ಕ್ಯಾನ್ಸರ್ ಆಸ್ಪತ್ರೆಯ ಸಂದರ್ಶಕ ತಜ್ಞವೈದ್ಯ ಡಾ. ಶ್ರೀಕಾಂತ ರವಿಚಂದ್ರನ್ ಹೇಳಿದ್ದಾರೆ.
ಮಂಗಳವಾರ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ. ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರ ಚಿಕಿತ್ಸೆ ವಿಭಾಗ ಆಯೋಜಿಸಿದ್ದ ಜಠರದ ಕ್ಯಾನ್ಸರ್ ಕುರಿತು ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
40 ವರ್ಷ ದಾಟಿದ ವಯಸ್ಕರು ಗ್ಯಾಸ್ಟ್ರಿಕ್ ಸಮಸ್ಯೆಯನ್ನು ನಿರ್ಲಕ್ಷಿಸಬಾರದರು. ಓಷಧ ಅಂಗಡಿಗಳಲ್ಲಿ ಸ್ವಚಿಕಿತ್ಸೆಯನ್ನು ಪಡೆಯದೆ ಉದರದರ್ಶಕ ಯಂತ್ರದ (ಎಂಡೊಸ್ಕೋಪಿ) ತಪಾಸಣೆ ಮಾಡಿಸಿಕೊಂಡರೆ ಜಠರದ ಕ್ಯಾನ್ಸರ್ ನ್ನು ಆರಂಭಿಕ ಹಂತದಲ್ಲಿಯೇ ಪತ್ತೆ ಮಾಡಿ ಸೂಕ್ತ ಚಿಕಿತ್ಸೆಯ ಮೂಲಕ ಸಂಪೂರ್ಣವಾಗಿ ಗುಣಪಡಿಸಲು ಸಾಧ್ಯವಿದೆ ಎಂದು ಅವರು ಹೇಳಿದರು.
ಜಠರದ ಕ್ಯಾನ್ಸರ್ ರೋಗದ ನಾನಾ ಗುಣಲಕ್ಷಣಗಳು ಮತ್ತು ತಪಾಸಣೆ ವಿಧಾನಗಳು ಹಾಗೂ ಲಭ್ಯವಿರುವ ಚಿಕಿತ್ಸೆ ಕ್ರಮಗಳನ್ನು ಅವರು ಪ್ರಾತ್ಯಕ್ಷಿಕೆ ಮೂಲಕ ಸವಿಸ್ತಾರವಾಗಿ ಮಾಹಿತಿ ನೀಡಿದರು.
ಬಿ.ಎಲ್.ಡಿ.ಇ ಆಸ್ಪತ್ರೆಯ ಶಸ್ತ್ರಚಿಕಿತ್ಸೆ ವಿಭಾಗದ ಮುಖ್ಯಸ್ಥ ಡಾ. ಮಂಜುನಾಥ.ಕೋಟೆಣ್ಣವರ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ಎಲ್ಲ ಕ್ಯಾನ್ಸರ್ ಗಳಂತೆ ಜಠರದ ಕ್ಯಾನ್ಸರ್ ಸಹ ತಂಬಾಕು,ಸಿಗರೇಟು, ಸಾರಾಯಿ ಸೇವನೆಯಂಥ ದುಶ್ಟಟಗಳು, ಹೆಚ್ಚು ಹೊತ್ತಿಸಿದ ಎಣ್ಣೆ, ಮಸಾಲೆ ಆಹಾರ ಸೇವನೆ ಹಾಗೂ ಅನುವಂಶಿಕವಾಗಿಯೂ ಬರಬಹುದು. ದೀರ್ಘಕಾಲದ ಗ್ಯಾಸ್ಟ್ರಿಕ್ ಸಮಸ್ಯೆಯೆಂದು ಸುಮ್ಮನಿರದೆ,ತಜ್ಞ ವೈದ್ಯರನ್ನು ಸಂಪರ್ಕಿಸಿ ಸೂಕ್ತ ತಪಾಸಣೆ ಮಾಡಿಸಿಕೊಂಡು ಚಿಕಿತ್ಸೆ ಪಡೆಯಬೇಕು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ವಿಜಯಪುರ ಜಿಲ್ಲಾ ಶಸ್ತ್ರ ಚಿಕಿತ್ಸಕರ ಸಂಘದ ಕಾರ್ಯದರ್ಶಿ ಮತ್ತು ಪ್ರಾಧ್ಯಾಪಕ ಡಾ. ರಮಾಕಾಂತ ಬಳೂರಕರ ಮಾತನಾಡಿ, ಜಠರದ ಕ್ಯಾನ್ಸರ್ ರೋಗಿಗಳಿಗೆ ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ ಎಲ್ಲ ಬಗೆಯ ಚಿಕಿತ್ಸೆಗಳಿವೆ. ಅಲ್ಲದೇ, ತಜ್ಞ ವೈದ್ಯರು ಲಭ್ಯರಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಸ್ತ್ರಚಿಕಿತ್ಸೆ ವಿಭಾಗದ ಪ್ರಾಧ್ಯಾಪಕರಾದ ಡಾ. ವಿಜಯಾ ಪಾಟೀಲ, ಡಾ. ಗೀರೀಶ ಕುಲ್ಲೊಳ್ಳಿ, ಡಾ. ವಿಕ್ರಂ ಸಿಂದಗಿಕರ,ಡಾ. ದೀಪಕ ಚವ್ಹಾಣ,ಡಾ. ದಯಾನಂದ ಬಿರಾದಾರ,ಡಾ. ಪ್ರದೀಪ ಜಾಜು ಸೇರಿದಂತೆ ಬೋಧಕ ಸಿಬ್ಬಂದಿ ಹಾಗೂ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 