ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ‘ಸರ್ವ ಸದಸ್ಯರ ಮಹಾಸಭೆ’
‘General Body Meeting’ of the Karnataka State Government Employees’ Association
ಲೋಕದರ್ಶನ ವರದಿ
ಹೊಸಪೇಟೆ 06; ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ‘ಸರ್ವ ಸದಸ್ಯರ ಮಹಾಸಭೆ’ಯನ್ನು ದಿನಾಂಕ 08.07.2026 ರಂದು ಬುಧವಾರ ಸಂಜೆ 6:00 ಗಂಟೆಗೆ ಹೊಸಪೇಟೆಯ ರೋಟರಿ ಕ್ಲಬ್ ಸ್ಟೇಷನ್ ರಸ್ತೆಯಲ್ಲಿ ಆಯೋಜಿಸಲಾಗಿದೆ. ಈ ಮಹಾಸಭೆ ಜಿಲ್ಲಾ ನೌಕರರ ಸಂಘದ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಗೌಡ ಜಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸಂಘದ ಮುಂದಿನ ಕಾರ್ಯಕ್ರಮಗಳು ಹಾಗೂ ಸಂಘಟನೆಯ ಬಲವರ್ಧನೆ ಸಂಬಂಧಿತ ಪ್ರಮುಖ ವಿಷಯಗಳನ್ನು ಈ ಸಭೆಯಲ್ಲಿ ಚರ್ಚಿಸಲಾಗುವುದು. ಜೊತೆಗೆ, ದಿನಾಂಕ 11.07.2026 ರಂದು ಅರಣ್ಯ ಮೈದಾನ, ಬೆಂಗಳೂರುನಲ್ಲಿ ನಡೆಯಲಿರುವ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ‘ನಮ್ಮ ಅಭಿಮಾನದ ಅಭಿನಂದನೆ’ ಕಾರ್ಯಕ್ರಮದ ಕುರಿತು ಮಾಹಿತಿ ನೀಡಲಾಗುತ್ತದೆ. ಈ ಸಂದರ್ಭದಲ್ಲಿ ಸರ್ಕಾರಿ ನೌಕರರಿಗಾಗಿ ಜಾರಿಯಲ್ಲಿರುವ ಓಕಖ ರದ್ದುಪಡಿಸಿ ಓಕಖ ಜಾರಿಗೆ ಒತ್ತಾಯಿಸುವ ನಿರ್ಣಯವನ್ನೂ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಸಂಘದ ಮೂಲಗಳು ತಿಳಿಸಿವೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 