‘ಎಂ.ಆರ್.ಹಿರೇಮಠ ಅವರ ಕಾರ್ಯ ಶ್ಲಾಘನೀಯ’
‘M.R. Hiremath’s work is commendable’
ಉಗರಗೋಳ 18: ಜಂಗಮ ಸಮುದಾಯದ ಮಕ್ಕಳಿಗಾಗಿ ಸಂಸ್ಕೃತ ಪಾಠಶಾಲೆ ತೆರೆದು ಉಚಿತವಾಗಿ ಶಿಕ್ಷಣ ನೀಡಿ ಸಮಾಜಮುಖಿಯಾಗಿ ಕೆಲಸ ಮಾಡುತ್ತಿರುವ ಎಂ.ಆರ್.ಹಿರೇಮಠ ಅವರ ಕಾರ್ಯ ಶ್ಲಾಘನೀಯ ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು. ಸವದತ್ತಿ ತಾಲೂಕಿನ ಉಗರಗೋಳ ಗ್ರಾಮದ ಗುರು ಶಿವಪ್ಪಯ್ಯ ಶಿವಯೋಗಿಗಳ ಮಠದಲ್ಲಿ ವಾರ್ಷಿಕ ಜಾತ್ರೆ ಪ್ರಯುಕ್ತ, ಸೋಮವಾರ ಸಂಜೆ ಹಮ್ಮಿಕೊಂಡಿದ್ದ ಲಕ್ಷದೀಪೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸುಸಂಸ್ಕೃತ ಸಮಾಜ ನಿರ್ಮಾಣಕ್ಕಾಗಿ ಶ್ರಮಿಸುತ್ತಿರುವ ಮಠ ಹಾಗೂ ಸಂಸ್ಕೃತ ಪಾಠಶಾಲೆಗೆ ಮುಂದಿನ ದಿನಗಳಲ್ಲಿ ಅಗತ್ಯ ಸಹಾಯ, ಸಹಕಾರ ಮಾಡುತ್ತೇನೆ ಎಂದು ಭರವಸೆ ಕೊಟ್ಟರು. ಬಿಜೆಪಿ ಮುಖಂಡ ವಿರುಪಾಕ್ಷ ಮಾಮನಿ ಮಾತನಾಡಿ ತಮ್ಮ ನಿವೃತ್ತಿ ಜೀವನವನ್ನು ಸಮಾಜಕ್ಕಾಗಿ ಮೀಸಲಿಟ್ಟಿರುವ, ಜಂಗಮ ಸಮುದಾಯದ ಮಕ್ಕಳಿಗಾಗಿ ಹಗಲಿರುಳು ಶ್ರಮಿಸುತ್ತಿರುವ ಕಾರ್ಯ ಪ್ರಶಂಸನೀಯ ಎಂದರು.
ಉಪನ್ಯಾಸಕ ಉಮೇಶ ನರಗುಂದ, ಇಂದು ಯುವಕರು ದುಶ್ಚಟಗಳಿಂದ ದೂರವಿದ್ದು, ಅಧ್ಯಯನಕ್ಕೆ ಆದ್ಯತೆ ಕೊಡಬೇಕು. ಅನಗತ್ಯವಾಗಿ ಮೊಬೈಲ್ ಬಳಸಬಾರದು. ಮಹಾತ್ಮರ ವಾಣಿಗಳನ್ನು ಆಲಿಸಿ, ನಿಸ್ವಾರ್ಥ ಬದುಕು ಕಟ್ಟಿಕೊಳ್ಳಬೇಕು ಎಂದು ಕರೆಕೊಟ್ಟರು. ಶೈಕ್ಷಣಿಕ ಸಾಧನೆ ಮೆರೆದ ಪ್ರತಿಭಾವಂತ ವಿದ್ಯಾರ್ಥಿಗಳು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ತೋರಿದ ಸಾಧಕರನ್ನು ಸನ್ಮಾನಿಸಲಾಯಿತು.
ನಿವೃತ್ತ ವಿಶೇಷ ಜಿಲ್ಲಾಧಿಕಾರಿ ಎಂ.ಆರ್.ಹಿರೇಮಠ, ನಿರ್ವಾಣೇಶ್ವರಮಠದ ಮಹಾಂತ ಶ್ರಿಗಳು, ರಾಮಾರೂಢಮಠದ ಬ್ರಹ್ಮಾರೂಢ ಶ್ರೀಗಳು, ಜಗದೀಶ ಕೌಜಗೇರಿ, ಶಿದ್ದನಗೌಡ ಗೂಡರಾಶಿ, ಅಲ್ಲಮಪ್ರಭು ಪ್ರಭುನವರ, ಪುಂಡಲೀಕ ಬಾಳೋಜಿ, ಮಂಜುನಾಥಯ್ಯ ಕಂಬಿ, ಗುರುಶಿದ್ದಯ್ಯ ಹಿರೇಮಠ, ಉಮೇಶ ನರಗುಂದ, ಶರಣಗೌಡ ಪಾಟೀಲ, ಏಕನಗೌಡ ತಿಪರಾಶಿ, ಚಂದ್ರಣ್ಣಾ ಶ್ಯಾಮರಾಯನವರ, ದೇವರಡ್ಡಿ ಬಿಜಗುಪ್ಪಿ, ಮಂಜುನಾಥ ಯಕ್ಕುಂಡಿ, ಧರ್ಮಪ್ಪ ಚಂದರಗಿ, ಜಗದೀಶ ಬೂದಣ್ಣವರ, ಆನಂದ ಭೋವಿ, ಮುತ್ತಯ್ಯ ತೋರಗಲ್ಲ್‌ಮಠ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 