ವಿಜಯಪುರದಲ್ಲಿ ‘ಎಂಬಿಪಿ ಉತ್ಸವ’: ವಿವಿಧ ಸ್ಪರ್ಧೆಗಳಿಗೆ ಚಾಲನೆ
‘MBP Utsava’ in Vijayapura: Various competitions kick off
ವಿಜಯಪುರ. 7: ವಿಜಯಪುರ ಜಿಲ್ಲೆಯಲ್ಲಿ ಆರಂಭವಾಗಿರುವ ಕೈಗಾರಿಕಾ ಕ್ರಾಂತಿಯ ಪರಿಣಾಮವಾಗಿ ಮುಂದಿನ ದಿನಗಳಲ್ಲಿ ಉದ್ಯೋಗಕ್ಕಾಗಿ ಬೆಂಗಳೂರಿನವರು ವಿಜಯಪುರಕ್ಕೆ ಬರುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಬಿಎಲ್ಡಿಇ ವಿಶ್ವವಿದ್ಯಾಲಯದ ಕುಲಪತಿ ಬಸನಗೌಡ ಎಂ. ಪಾಟೀಲ ಹೇಳಿದರು.
ಬಬಲೇಶ್ವರ-ತಿಕೋಟಾ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಒಂದು ತಿಂಗಳ ಕಾಲ ನಡೆಯಲಿರುವ ‘ಎಂಬಿಪಿ ಉತ್ಸವ’ದ ಅಂಗವಾಗಿ ಅರಕೇರಿ ಗ್ರಾಮದಲ್ಲಿ ಮಹಿಳೆಯರು ಮತ್ತು ಹೆಣ್ಣುಮಕ್ಕಳಿಗಾಗಿ ಆಯೋಜಿಸಿದ್ದ ರಂಗೋಲಿ ಸ್ಪರ್ಧೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಬರಗಾಲದ ಸಂದರ್ಭದಲ್ಲಿ ಈ ಭಾಗದ ಜನರು ಉದ್ಯೋಗಕ್ಕಾಗಿ ಹೆಚ್ಚಿನ ಸಂಖ್ಯೆಯಲ್ಲಿ ಗುಳೆ ಹೋಗುತ್ತಿದ್ದರು. ಅಲ್ಲದೆ, ಉನ್ನತ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳು ಬೇರೆ ಜಿಲ್ಲೆಗಳನ್ನು ಅವಲಂಬಿಸಬೇಕಾದ ಪರಿಸ್ಥಿತಿ ಇತ್ತು. ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದರು ಎಂದು ಅವರು ಹೇಳಿದರು.
ತಮ್ಮ ತಂದೆ ಎಂ.ಬಿ. ಪಾಟೀಲರು ನೀರಾವರಿ ಸಚಿವರಾದ ನಂತರ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸಲು ಹಾಗೂ ಕೈಗಾರಿಕಾ ಸಚಿವರಾದ ಬಳಿಕ ಯುವಕರಿಗೆ ಉದ್ಯೋಗಾವಕಾಶ ಸೃಷ್ಟಿಸಲು ಹೆಚ್ಚಿನ ಕಂಪನಿಗಳನ್ನು ವಿಜಯಪುರಕ್ಕೆ ತರಲು ಪ್ರಯತ್ನಿಸಿದ್ದಾರೆ. ಇದರ ಫಲವಾಗಿ ಮುಂದಿನ ದಿನಗಳಲ್ಲಿ ಉದ್ಯೋಗ ಅರಸಿ ಬೆಂಗಳೂರಿನವರು ವಿಜಯಪುರಕ್ಕೆ ಬರುವಂತಾಗಲಿದೆ ಎಂದರು.
ರಂಗೋಲಿ ಸ್ಪರ್ಧೆಯಲ್ಲಿ 50ಕ್ಕೂ ಹೆಚ್ಚು ಮಹಿಳೆಯರು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಕನವಾಡಿ ಗ್ರಾಮದಲ್ಲಿ ದೇಶಿ ಕ್ರೀಡೆ ಕಬಡ್ಡಿ ಹಾಗೂ ಕ್ರಿಕೆಟ್ ಪಂದ್ಯಗಳಿಗೆ ಚಾಲನೆ ನೀಡಲಾಯಿತು. ನಿಡೋಣಿ ಗ್ರಾಮದಲ್ಲಿ ಜಾನಪದ ಮತ್ತು ದೇವರಗುಣಗುಡಿ ಗ್ರಾಮದಲ್ಲಿ ಭಜನಾ ಸ್ಪರ್ಧೆಗಳಿಗೆ ಚಾಲನೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಅಶೋಕ ದಳವಾಯಿ, ಪಿರ್ಪಟೇಲ ಪಾಟೀಲ, ಲಿಂಗು ಬೆಳ್ಳುಬ್ಬಿ, ಶಿವು ಇಂಚಗೇರಿ, ಸುರೇಶ ಭಂಡಾರಿ, ಪಾಂಡು ಲೋಣಾರಿ, ಗೋವಿಂದ ರಾಠೋಡ, ರಂಗಾ ಬರಕಡೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕನವಾಡಿ ಗ್ರಾಮದ ಮುಖಂಡರಾದ ಪ್ರಶಾಂತ ಪಾಟೀಲ, ಪ್ರಕಾಶ ಬಿರಾದಾರ, ಸಿದ್ದು ಗೌಡನವರ, ಗುರು ಮಾಳಿ, ಶಂಕರ ಹ್ಯಾಮಗೋಳ, ಸುರೇಶ ಬಾಬಾನಗರ, ವೀರೇಶ ಸಿಂಧೂರ, ಈಶ್ವರ ಯಳಜರಿ, ಚಂದು ಕೋಳಿ, ಚನ್ನಯ್ಯ ಮಠಪತಿ ಸೇರಿದಂತೆ ಹಲವರು ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 