ದೇವಿಹೊಸೂರಿನಲ್ಲಿ ‘ಸಸ್ಯ ಸಂತೆ-2026’ಕ್ಕೆ ಚಾಲನೆ
‘Plant Fair-2026’ launched at Devihosuru
ಲೋಕದರ್ಶನ ವರದಿ
ಹಾವೇರಿ 01: ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ದೇವಿಹೊಸೂರು ತೋಟಗಾರಿಕಾ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ ಹಾಗೂ ದಾನವೀರ ಶ್ರೀ ಸಿರಸಂಗಿ ಲಿಂಗರಾಜ ದೇಸಾಯಿ ತೋಟಗಾರಿಕಾ ಅಭಿಯಾಂತ್ರಿಕ ಮತ್ತು ಆಹಾರ ತಂತ್ರಜ್ಞಾನ ಮಹಾವಿದ್ಯಾಲಯದ ಸಹಯೋಗದಲ್ಲಿ ‘ಸಸ್ಯ ಸಂತೆ-2026’ ಕಾರ್ಯಕ್ರಮ ದೇವಿಹೊಸೂರು ಆವರಣದಲ್ಲಿ ನಡೆಯಿತು. ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯದ ವ್ಯವಸ್ಥಾಪನಾ ಮಂಡಳಿ ಸದಸ್ಯ ಎಂ.ಬಿ. ಪಾಟೀಲ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಸಸ್ಯ ಸಂತೆಯಲ್ಲಿ ವಿವಿಧ ಹಣ್ಣಿನ ಸಸಿಗಳು, ಹೂವಿನ ಸಸಿಗಳು, ಅಲಂಕಾರಿಕ ಸಸಿಗಳು, ಸಂಬಾರು ಸಸಿಗಳು, ತೋಟಪಟ್ಟಿ ಸಸಿಗಳು, ಅರಣ್ಯ ಸಸಿಗಳು, ತರಕಾರಿ ಬೀಜಗಳು, ವಿವಿಧ ಬಗೆಯ ಬೀಜಗಳು, ಎರೆಹುಳು ಗೊಬ್ಬರ, ಜೈವಿಕ ಗೊಬ್ಬರ, ಜೈವಿಕ ಕೀಟನಾಶಕಗಳು ಸೇರಿದಂತೆ ತೋಟಗಾರಿಕಾ ಮೌಲ್ಯವರ್ಧಿತ ಉತ್ಪನ್ನಗಳನ್ನು ಮಾರಾಟಕ್ಕೆ ಇಡಲಾಗಿತ್ತು.
ಇದರ ಜೊತೆಗೆ ಜೇನು ಕೃಷಿ, ಜೇನು ಉಪ ಉತ್ಪನ್ನಗಳು, ಕೀಟ ಪ್ರಪಂಚ ಹಾಗೂ ಮೈಕ್ರೋ ಗ್ರೀನ್ಸ್‌ಗಳ ಪ್ರದರ್ಶನವೂ ಆಯೋಜಿಸಲಾಗಿತ್ತು. ರೈತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಅಗತ್ಯ ಸಸಿಗಳು, ಬೀಜಗಳು ಮತ್ತು ಉತ್ಪನ್ನಗಳನ್ನು ಖರೀದಿಸಿದರು. ತೋಟಗಾರಿಕಾ ತಜ್ಞರಿಂದ ತಾಂತ್ರಿಕ ಸಲಹೆಗಳನ್ನೂ ಪಡೆದರು.
ಕಾರ್ಯಕ್ರಮದಲ್ಲಿ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಚಂದ್ರಶೇಖರ ಪಾಟೀಲ, ಜಂಟಿ ತೋಟಗಾರಿಕಾ ನಿರ್ದೇಶಕ ಸಂತೋಷ ಸಪ್ಪಂಡಿ, ಮಹಾವಿದ್ಯಾಲಯದ ವಿದ್ಯಾಧಿಕಾರಿ ಡಾ. ಲಕ್ಷ್ಮಣ ಕುಕನೂರ, ಸಹ ಸಂಶೋಧನಾ ಮತ್ತು ವಿಸ್ತರಣಾ ನಿರ್ದೇಶಕ ಡಾ. ಜೆ.ಬಿ. ಗೋಪಾಲ, ನಿವೃತ್ತ ಡೀನ್ ಡಾ. ಲಕ್ಷ್ಮೀನಾರಾಯಣ ಹೆಗಡೆ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ 