ಮುರುಘರಾಜ ದೇಶಾಯಿ ವಸತಿ ಶಾಲೆಯಲ್ಲಿ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮ
‘Swasthya Sankalpa’ program at Murugharaja Desai Residential School
ಬೈಲಹೊಂಗಲ 06 : ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ (ಬಿಸಿ ಟ್ರಸ್ಟ್) ಹಾಗೂ ಮುರುಘರಾಜ ದೇಶಾಯಿ ವಸತಿ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಪ್ರಾಂಶುಪಾಲ ಪಿ. ಎನ್. ಲಕ್ಕನಗೌಡರ್ ವಹಿಸಿದ್ದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಎಸ್.ಡಿ.ಎಂ.ಸಿ. ಅಧ್ಯಕ್ಷ ನಾರಾಯಣ ನಲವಡೆ ಮಾತನಾಡಿ, ಸದೃಢ ಭಾರತ ನಿರ್ಮಾಣಕ್ಕೆ ಯುವಜನತೆ ವ್ಯಸನಮುಕ್ತರಾಗುವುದು ಅತ್ಯಗತ್ಯ ಎಂದರು. ವ್ಯಸನಮುಕ್ತ ಸಮಾಜ ನಿರ್ಮಾಣಕ್ಕಾಗಿ ಯುವಕರು ಸಂಕಲ್ಪ ತೊಟ್ಟು ಜಾಗೃತಿ ಮೂಡಿಸಬೇಕೆಂದು ಕರೆ ನೀಡಿದರು. ಇದೇ ವೇಳೆ ವಿದ್ಯಾರ್ಥಿಗಳಿಗೆ ವ್ಯಸನಮುಕ್ತ ಜೀವನದ ಕುರಿತು ಪ್ರತಿಜ್ಞಾ ಬೋಧನೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಬೈಲಹೊಂಗಲ ತಾಲೂಕು ಸಂಯೋಜಕ ವಿಜಯಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಲಯದ ಮೇಲ್ವಿಚಾರಕ ಜಗದೀಶ್ ಕುಂಬಾರ, ಗ್ರಾಮ ಸೇವಾ ಪ್ರತಿನಿಧಿಗಳಾದ ಭಾರತಿ ದವಳೆ ಹಾಗೂ ರೇಣುಕಾ ಜಾವೂರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಬಸಪ್ಪ ಹಕ್ಕರಕಿ ಸ್ವಾಗತಿಸಿದರು. ಎಸ್.ಪಿ. ಕುಲಕರ್ಣಿ ಕಾರ್ಯಕ್ರಮವನ್ನು ನಿರೂಪಿಸಿದರು. ವಿಜಯ ಮಠದ ವಂದನಾರೆ್ಣ ಸಲ್ಲಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 