‘ವಾತ್ಸಲ್ಯ’ ಮನೆ ಹಸ್ತಾಂತರ ಕಾರ್ಯಕ್ರಮ
‘Vatsalya’ house handover program
‘ವಾತ್ಸಲ್ಯ’ ಮನೆ ಹಸ್ತಾಂತರ ಕಾರ್ಯಕ್ರಮ
ಯರಗಟ್ಟಿ 05: ಅಸಹಾಯಕರಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ನೆರವಾಗುತ್ತಿದೆ ಎಂದು ಸಂಸ್ಥೆಯ ಧಾರವಾಡ ಪ್ರಾದೇಶಿಕ ವಿಭಾಗದ ನಿರ್ದೇಶಕಿ ದಯಾಶೀಲ ಹೇಳಿದರು.
ಸಮೀಪದ ಚಂದರಗಿ ಗ್ರಾಮದ ನಿವಾಸಿ ಶಾಂತವ್ವ ಬಿಜಲಿ ಅವರಿಗಾಗಿ ಗ್ರಾಮಾಭಿವೃದ್ಧಿ ಸಂಸ್ಥೆಯ ಜ್ಞಾನ ವಿಕಾಸ ಯೋಜನೆ ನಿರ್ಮಿಸಿದ್ದ ‘ವಾತ್ಸಲ್ಯ’ ಮನೆ ಹಸ್ತಾಂತರ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಚಂದರಗಿ ಗ್ರಾಮ ಪಂಚಾಯತಿ ಅಧ್ಯಕ್ಷ ಸಂಜೀವ ಹಳ್ಳಿ ಅಧ್ಯಕ್ಷತೆಯನ್ನು ವಹಿಸಿದ್ದರು. ಮಾತನಾಡಿದ ಅವರು ಧರ್ಮಸ್ಥಳ ಯೋಜನೆ ಯಿಂದ ಅಶಕ್ತರಿಗೆ ಇನ್ನೂ ಹೆಚ್ಚಿನ ಸಹಕಾರ ಸಿಗುವಂತಾಗಲಿ ಎಂದರು.ಪಂಚಾಯಿತಿ ಸದಸ್ಯೆ ಮಾರುತಿ ಜಾದವ, ಮಾಜಿ ಸೈನಿಕ ಬಸವಲಿಂಗಯ್ಯ ಹಿರೇಮಠ, ಯೋಜನೆಯ ಜಿಲ್ಲಾ ನಿರ್ದೇಶಕ ಲವಕುಮಾರ, ತಾಲೂಕಾ ಯೋಜನಾಧಿಕಾರಿ ಶ್ರೀಕಾಂತ ಎಮ್, ಬಾಳನಗೌಡ ಪಾಟೀಲ, ಸ್ಥಳೀಯ ಮೇಲ್ವಿಚಾರಕ ರಾಕೇಶ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ನಿಶಾ ನಾಯ್ಕ, ಸೇವಾ ಪ್ರತಿನಿಧಿ ಸವಿತಾ, ಸೇವಾ ಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 