ಧಾರವಾಡದಲ್ಲಿ ‘ವಿಶ್ವ ಪರಿಸರ ದಿನಾಚರಣೆ 2026’ ಕಾರ್ಯಕ್ರಮ
‘World Environment Day 2026’ program in Dharwad
ಲೋಕದರ್ಶನ ವರದಿ
ಧಾರವಾಡ 01: ಜಲ ಮತ್ತು ನೆಲ ನಿರ್ವಹಣಾ ಸಂಸ್ಥೆ (ವಾಲ್ಮಿ), ಧಾರವಾಡದಲ್ಲಿ ‘ವಿಶ್ವ ಪರಿಸರ ದಿನಾಚರಣೆ 2026’ ಅನ್ನು ಪರಿಸರ ಸಂರಕ್ಷಣೆ ಹಾಗೂ ಸುಸ್ಥಿರ ಅಭಿವೃದ್ಧಿಯ ಕುರಿತ ಜಾಗೃತಿ ಮೂಡಿಸುವ ಉದ್ದೇಶದಿಂದ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮವನ್ನು ನಿವೃತ್ತ ಸಹಾಯಕ ಕೃಷಿ ನಿರ್ದೇಶಕರಾದ ಶ್ರೀ ಬಸವರಾಜ ಅವರು ಉದ್ಘಾಟಿಸಿ ಮಾತನಾಡಿದರು. ಪರಿಸರದ ಹವಾಮಾನದಲ್ಲಿ ಸಂಭವಿಸುತ್ತಿರುವ ಬದಲಾವಣೆಗಳು, ತೀವ್ರ ಉಷ್ಣತೆ ಹೆಚ್ಚಳ, ಪ್ರವಾಹಗಳ ಹೆಚ್ಚಳ ಹಾಗೂ ಸಮುದ್ರ ಮಟ್ಟ ಏರಿಕೆ ಇತ್ಯಾದಿಗಳ ಪರಿಣಾಮವಾಗಿ ಜೀವ ವೈವಿಧ್ಯತೆಗೆ ಅಪಾಯ ಉಂಟಾಗುತ್ತಿದೆ ಎಂದು ಅವರು ಹೇಳಿದರು. ಈ ಹಿನ್ನೆಲೆಯಲ್ಲಿ ಈಗಲೇ ಪರಿಸರ ಸಂರಕ್ಷಣಾ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯವೆಂದು ಅವರು ಒತ್ತಿ ಹೇಳಿದರು.
ಮಳೆ ನೀರಿನ ಸಂರಕ್ಷಣೆ, ಮಣ್ಣಿನ ಸಂರಕ್ಷಣೆ ಹಾಗೂ ಪರಿಸರ ಸ್ನೇಹಿ ಕೃಷಿ ಕ್ರಮಗಳನ್ನು ಅನುಸರಿಸುವುದು ಅತ್ಯಂತ ಮುಖ್ಯವಾಗಿದೆ ಎಂದು ಅವರು ತಿಳಿಸಿದರು. ರಾಸಾಯನಿಕ ಗೊಬ್ಬರ ಹಾಗೂ ಕೀಟನಾಶಕಗಳ ಅತಿಯಾದ ಬಳಕೆಯನ್ನು ಕಡಿಮೆ ಮಾಡಿ, ಜೈವಿಕ ಗೊಬ್ಬರ ಮತ್ತು ಜೈವಿಕ ಕೀಟನಾಶಕಗಳ ಬಳಕೆಯನ್ನು ಹೆಚ್ಚಿಸುವಂತೆ ರೈತರಿಗೆ ಸಲಹೆ ನೀಡಿದರು. ಇದರಿಂದ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಲು ಮತ್ತು ಆರೋಗ್ಯಕರ ಆಹಾರ ಉತ್ಪಾದನೆಗೆ ಸಹಕಾರಿಯಾಗುತ್ತದೆ ಎಂದು ಹೇಳಿದರು.
ವಾಲ್ಮಿ ಸಂಸ್ಥೆಯ ನಿರ್ದೇಶಕರಾದ ಡಾ. ಗೀರೀಶ್ ಎನ್. ಮಿರಜಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಪರಿಸರ ಸಂರಕ್ಷಣೆಯ ಕುರಿತು ವಾಲ್ಮಿ ಸಂಸ್ಥೆಯಲ್ಲಿ ಕೈಗೊಳ್ಳುತ್ತಿರುವ ವಿವಿಧ ಕಾರ್ಯಕ್ರಮಗಳು ಹಾಗೂ ಜಾಗೃತಿ ಚಟುವಟಿಕೆಗಳ ಬಗ್ಗೆ ವಿವರಿಸಿದರು. ಹವಾಮಾನ ಬದಲಾವಣೆಯಿಂದ ಉಂಟಾಗುವ ದುಷ್ಪರಿಣಾಮಗಳನ್ನು ಎದುರಿಸಲು ಸಮುದಾಯದ ಸಹಭಾಗಿತ್ವ ಅಗತ್ಯವಾಗಿದೆ ಎಂದು ಹೇಳಿದರು.
ಸಹ ಪ್ರಾಧ್ಯಾಪಕರಾದ ಶ್ರೀ ಇಂದೂಧರ ಹಿರೇಮಠ ಅವರು ಪರಿಸರ ಸಂರಕ್ಷಣೆಯ ಕುರಿತು ವಿಶೇಷ ಉಪನ್ಯಾಸ ನೀಡಿ ಹವಾಮಾನ ಬದಲಾವಣೆಯಿಂದ ಉಂಟಾಗುವ ಸಮಸ್ಯೆಗಳು ಹಾಗೂ ಅವುಗಳನ್ನು ತಡೆಗಟ್ಟುವ ಕ್ರಮಗಳ ಬಗ್ಗೆ ವಿವರಿಸಿದರು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಸಹಾಯಕ ಅಧಿಕಾರಿ ಶ್ರೀ ಸುನಿಲ್ ಪತ್ರಿ, ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಪರಿಸರ, ಜಲ ಮತ್ತು ನೆಲ ಸಂರಕ್ಷಣಾ ವಿಭಾಗದ ಅಧಿಕಾರಿಗಳು, ಏಖಖಖಿಅ ಅಧಿಕಾರಿಗಳು, ವಾಲ್ಮಿ ಸಿಬ್ಬಂದಿ ಹಾಗೂ ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ರೈತರು ಉಪಸ್ಥಿತರಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 