“ಜಾಗೃತಿ ಮತ್ತು ಅನುಷ್ಠಾನ” ಕಾರ್ಯಕ್ರಮ
“Awareness and Implementation” Program
ಲೋಕದರ್ಶನ ವರದಿ
ಹಾವೇರಿ 13 : ಹಾವೇರಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜನಲ್ಲಿ “ಋಖ: ಜಾಗೃತಿ ಮತ್ತು ಅನುಷ್ಠಾನ” ವಿಷಯದ ಮೇಲೆ ಒಂದು ದಿನದ ಕಾರ್ಯಕ್ರಮ ಶುಕ್ರವಾರ ಜರುಗಿತು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಬೆಂಗಳೂರಿನ ಡೈರೆಕ್ಟರ್ ಡಾ. ಶ್ರೀನಿವಾಸರಾವ ಅವರು ಮಾತನಾಡಿ, ಬೌದ್ಧಿಕ ಸ್ವತ್ತಿನ ಹಕ್ಕುಗಳು ಪೇಟೆಂಟ್ ಸಲ್ಲಿಕೆ ಪ್ರಕ್ರಿಯೆ, ಅದರ ಮಹತ್ವ ಹಾಗೂ ಅನುಷ್ಠಾನದ ಕುರಿತು ವಿವರವಾಗಿ ಮಾಹಿತಿ ನೀಡಿದರು ಹಾಗೂ ವಿದ್ಯಾರ್ಥಿಗಳು ಮತ್ತು ಸಂಶೋಧಕರಿಗೆ ಸಂಶೋಧನಾ ಆವಿಷ್ಕಾರಗಳನ್ನು ಪೇಟೆಂಟ್ ಮೂಲಕ ರಕ್ಷಿಸುವ ಅಗತ್ಯತೆಯನ್ನು ವಿವರಿಸಿದರು. ಪ್ರಾಂಶುಪಾಲ ಡಾ. ಮುನಿರಾಜು ಎಂ. ಅಧ್ಯಕ್ಷತೆ ವಹಿಸಿದ್ದರು. ಕಾರ್ಯಾಗಾರದ ಸಂಯೋಜಕರಾಗಿ ಡಾ. ಹರೀಶ್ ಎಚ್. ಎಂ. ಕಾರ್ಯನಿರ್ವಹಿಸಿದರು. ಈ ಕಾರ್ಯಾಗಾರದಲ್ಲಿ ಕಾಲೇಜಿನ ಎಲ್ಲಾ ವಿಭಾಗಗಳ ಮೂರನೇ ವರ್ಷದ ವಿದ್ಯಾರ್ಥಿಗಳು, ವಿವಿಧ ವಿಭಾಗಗಳ ಸಂಶೋಧನಾ ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರು ಭಾಗವಹಿಸಿ ಋಖ ಕುರಿತು ಮಹತ್ವದ ಮಾಹಿತಿ ಪಡೆದುಕೊಂಡರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 