“ಕಾಂಪಿಟೇಷನಲ್ ಬಯಾಲಜಿ ಮತ್ತು ಮಾಲಿಕ್ಯುಲರ್ ಬಯಾಲಜಿ ಟೆಕ್ನಿಕ್ಸ್”
“Competative Biology and Molecular Biology Techniques”
ವಿಜಯಪುರ 06: ವಿದ್ಯಾರ್ಥಿಗಳಿಗೆ ಹೊಸ ತಂತ್ರಜ್ಞಾನಗಳ ಅವಿಷ್ಕಾರಗಳ ಬಗ್ಗೆ ತಿಳಿಸುವುದು ಬಹು ಮುಖ್ಯವಾಗಿರುತ್ತದೆ. “ಕಾಂಪಿಟೇಷನಲ್ ಬಯಾಲಜಿ ಮತ್ತು ಮಾಲಿಕ್ಯುಲರ್ ಬಯಾಲಜಿ ಟೆಕ್ನಿಕ್ಸ್” ಈ ತಂತ್ರಜ್ಞಾನಗಳು ಕೃಷಿ ಸಂಶೋಧನೆ, ವೈದ್ಯಕಿಯ ಸಂಶೋಧನೆಯಲ್ಲಿ ಬಹು ಮುಖ್ಯವಾಗಿರುತ್ತದೆ ಎಂದು ಬಿ.ಎಲ್.ಡಿ.ಇ, ವಿಶ್ವವಿದ್ಯಾಲಯದ, ಕುಲಪತಿ ಪ್ರೊ.ಅರುಣಸಿ. ಇನಾಮದಾರ ಹೇಳಿದರು.
ಇಲ್ಲಿಯ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ, ಜೈವಿಕ ಮಾಹಿತಿ ಅಧ್ಯಯನ ಹಾಗೂ ಜೈವಿಕ ತಂತ್ರಜ್ಞಾನ ಅಧ್ಯಯನ ವಿಭಾಗದ ಸಹಯೋಗದಲ್ಲಿ ವಿಷನ್ ಗ್ರೂಪ್ ಆಪ್ ವಿಜ್ಞಾನ ಮತ್ತು ತಂತ್ರಜ್ಞಾ ದಾರ್ಶನಿಕ ಇವರ ಪ್ರಾಯೋಜತ್ವ ಅಡಿಯಲ್ಲಿ 5 ದಿನಗಳ “ಫ್ಯಾಕಲ್ಟಿ ಡೆವಲಪ್ಮೆಂಟ್ ಪ್ರೊಗ್ರಾಮ್ ಇನ್ ಕಾಂಪಿಟೇಷನಲ್ ಬಯಾಲಜಿ ಮತ್ತು ಮಾಲಿಕ್ಯುಲರ್ ಬಯಾಲಜಿ ಟೆಕ್ನಿಕ್ಸ್” ಎಂಬ ವಿಷಯದ ಮೇಲೆ ಆಯೋಜಿಸಲಾಗಿದ್ದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದ ಅವರು ಶಿಬಿರಾರ್ಥಿಗಳಿಗೆ ಎಫ್‌ಡಿಪಿ ಕಾರ್ಯಕ್ರಮದ ಅನುಕೂಲತೆಗಳು ಮತ್ತು ವುಗಳನ್ನು ಹೇಗೆ ಸಮರ್ಕವಾಗಿ ಉಪಯೋಗಿಸಿಕೊಳ್ಳಬೇಕು ಎಂದು ವಿವರಿಸಿದರು.
ಕಾರ್ಯಕ್ರಮದಲ್ಲಿ ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, ಇವತ್ತಿನ ಎಐ ತಂತ್ರಜ್ಞಾನದ ಯುಗದಲ್ಲಿ ಶಿಕ್ಷಕರು ವಿವಿಧ ರೀತಿಯಲ್ಲಿ ವಿಷಯಗಳನ್ನು ವಿಶ್ಲೇಷಣೆ ಮಾಡಿ ವಿದ್ಯಾರ್ಥಿಗಳಿಗೆ ತಿಳಿಸಲು ಪ್ರಯತ್ನಿಸಬೇಕು. ಶಿಕ್ಷಕರು ದಿನನಿತ್ಯ ಹೊಸತನವನ್ನು ಕಲಿಯಲು ಪ್ರಯತ್ನಿಸಬೇಕು ಹಾಗೂ ವೃತ್ತಿಪರತೆಯನ್ನು ಮರೆಯಬಾರದು ಎಂದು ಸಲಹೆ ಮಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಲಪತಿ ಪ್ರೊ.ವಿಜಯಾ ಬಿ. ಕೋರಿಶೆಟ್ಟಿ ಅವರು ಮಾತನಾಡಿ, ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಕರು ಹೊಸ ಅವಿಷ್ಕಾರಗಳ ಬಗ್ಗೆ ತಿಳಿದುಕೊಳ್ಳುವುದು ಅತ್ಯಅವಶ್ಯವಾಗಿರುತ್ತದೆ ಶಿಕ್ಷಕರು ವಿದ್ಯಾರ್ಥಿಗಳಿಗೆ ಸಂಶೋಧನೆಯಲ್ಲಿ ತೊಡಗಿಸಿಕೋಳ್ಳಲು ಪ್ರೋತ್ಸಾಹಿಸಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಸಂಯೋಜಕ ಡಾ.ಬಾಬು ಆರ್. ಎಲ್. ಸ್ವಾಗತಿದರು, ಡಾ.ಜಾಯ್ ಹೊಸಕೇರಿ ವಂದಿಸಿದರು. ವಿದ್ಯಾರ್ಥಿನಿ ಸೂರ್ಯವಂಶಿ ನಿರೂಪಿಸಿದರು. ಹಾಗೂ ವಿವಿ ಪ್ರಾಧ್ಯಾಪಕರು ಹಾಗೂ ಸಂಪನ್ಮೂಲ ವ್ಯಕ್ತಿಗಳು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 