“ಅವಳ ಆರೋಗ್ಯ ಹಿ ಅವಳ ಶಕ್ತಿ” : ಅಂತಾರಾಷ್ಟ್ರೀಯ ಮುಟ್ಟಿನ ನೈರ್ಮಲ್ಯ ದಿನಾಚರಣೆ ಅಂಗವಾಗಿ ಮಹಿಳಾ ಆರೋಗ್ಯ ಜಾಗೃತಿ ಕಾರ್ಯಕ್ರಮ
“Her Health is Her Strength”: Women's Health Awareness Program as part of International Menstrual Hy
ಬಳ್ಳಾರಿ 29: ಅಂತಾರಾಷ್ಟ್ರೀಯ ಮುಟ್ಟಿನ ನೈರ್ಮಲ್ಯ ದಿನಾಚರಣೆ ಅಂಗವಾಗಿ ಕಿಷ್ಕಿಂದಾ ಯೂನಿವರ್ಸಿಟಿ ಸಿಂದಿಗೇರಿ ಹಾಗೂ ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಆಫ್ ಇಂಡಿಯಾ ಬಳ್ಳಾರಿ ಶಾಖೆಯ ಸಹಯೋಗದಲ್ಲಿ ಮಹಿಳೆಯರ ಆರೋಗ್ಯ ಮತ್ತು ಮುಟ್ಟಿನ ನೈರ್ಮಲ್ಯ ಕುರಿತು ವಿಶೇಷ ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಕಿಷ್ಕಿಂದಾ ಯೂನಿವರ್ಸಿಟಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹಿಳೆಯರ ಆರೋಗ್ಯ, ತಿಂಗಳ ಮುಟ್ಟಿನ ಸಮಯದಲ್ಲಿ ಪಾಲಿಸಬೇಕಾದ ನೈರ್ಮಲ್ಯ ಕ್ರಮಗಳು, ಪೌಷ್ಟಿಕ ಆಹಾರ ಹಾಗೂ ಆರೋಗ್ಯಕರ ಜೀವನಶೈಲಿಯ ಕುರಿತು ವಿದ್ಯಾರ್ಥಿನಿಯರು ಮತ್ತು ಮಹಿಳಾ ಸಿಬ್ಬಂದಿಗಳಿಗೆ ಸಮಗ್ರ ಮಾಹಿತಿ ನೀಡಲಾಯಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಎಫ್ಪಿಎಐ ಬಳ್ಳಾರಿ ಶಾಖೆಯ ವ್ಯವಸ್ಥಾಪಕರಾದ ಶ್ರೀಮತಿ ಎಸ್. ವಿಜಯಲಕ್ಷ್ಮಿ ಅವರು ಮಹಿಳೆಯರ ಆರೋಗ್ಯದ ಮಹತ್ವದ ಕುರಿತು ವಿವರವಾಗಿ ಮಾತನಾಡಿದರು. ಮುಟ್ಟಿನ ಸಮಯದಲ್ಲಿ ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಳ್ಳುವುದು ಆರೋಗ್ಯದ ದೃಷ್ಟಿಯಿಂದ ಅತ್ಯಂತ ಅಗತ್ಯವಾಗಿದ್ದು, ಸರಿಯಾದ ಆರೈಕೆಯ ಮೂಲಕ ಅನೇಕ ಆರೋಗ್ಯ ಸಮಸ್ಯೆಗಳನ್ನು ತಡೆಯಬಹುದು ಎಂದು ತಿಳಿಸಿದರು.ಇದೇ ವೇಳೆ ಗರ್ಭಕೋಶದ ಕ್ಯಾನ್ಸರ್, ಮುಟ್ಟಿನ ಸಮಯದಲ್ಲಿ ಉಂಟಾಗುವ ಆರೋಗ್ಯ ಸಮಸ್ಯೆಗಳು ಹಾಗೂ ಅವುಗಳ ತಡೆಗಟ್ಟುವಿಕೆ ಕುರಿತು ವಿದ್ಯಾರ್ಥಿನಿಯರಿಗೆ ಅರಿವು ಮೂಡಿಸಿದರು.
ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿ ತಮ್ಮ ಆರೋಗ್ಯ ಸಂಬಂಧಿತ ಸಂದೇಹಗಳಿಗೆ ಉತ್ತರಗಳನ್ನು ಪಡೆದುಕೊಂಡರು.ಕಾರ್ಯಕ್ರಮದಲ್ಲಿ ಕಾಮರ್ಸ್ ವಿಭಾಗದ ಡೀನ್ ಡಾ. ಅರುಣ್ ಮುದೋಳ, ಕೋ-ಆರ್ಡಿನೇಟರ್ ಶ್ರೀಮತಿ ಸಾವಿತ್ರಿ ಹಾಗೂ ಕಾಮರ್ಸ್ ವಿಭಾಗದ ಮುಖ್ಯಸ್ಥ ವಿಜಯ ಭಾಸ್ಕರ್ ಉಪಸ್ಥಿತರಿದ್ದರು.ಅಧ್ಯಕ್ಷೀಯ ಭಾಷಣ ಮಾಡಿದ ಡಾ. ಅರುಣ್ ಮುದೋಳ ಅವರು, ಇಂತಹ ಆರೋಗ್ಯ ಜಾಗೃತಿ ಕಾರ್ಯಕ್ರಮಗಳು ವಿದ್ಯಾರ್ಥಿನಿಯರಲ್ಲಿ ಆತ್ಮವಿಶ್ವಾಸ ಮತ್ತು ಆರೋಗ್ಯ ಅರಿವು ಹೆಚ್ಚಿಸಲು ಸಹಕಾರಿಯಾಗುತ್ತವೆ ಎಂದು ಹೇಳಿದರು.
ಮಹಿಳೆಯರ ಆರೋಗ್ಯದ ಕುರಿತು ಸಮಾಜದಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ನಿರಂತರವಾಗಿ ಕೈಗೊಳ್ಳುತ್ತಿರುವ ಎಫ್ಪಿಎಐ ಸಂಸ್ಥೆಯ ಸೇವೆಯನ್ನು ಶ್ಲಾಘಿಸಿ ಅಭಿನಂದನೆ ಸಲ್ಲಿಸಿದರು.ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿಯರು ಹಾಗೂ ಮಹಿಳಾ ಸಿಬ್ಬಂದಿಗಳು ಕಾರ್ಯಕ್ರಮವನ್ನು ಆಸಕ್ತಿಯಿಂದ ಆಲಿಸಿ, ಮಹಿಳಾ ಆರೋಗ್ಯದ ಕುರಿತು ಮಹತ್ವದ ಮಾಹಿತಿಯನ್ನು ಪಡೆದುಕೊಂಡರು. ಆರೋಗ್ಯಕರ ಜೀವನಶೈಲಿ ಮತ್ತು ಮುಟ್ಟಿನ ನೈರ್ಮಲ್ಯದ ಮಹತ್ವವನ್ನು ತಿಳಿಸುವ ಮೂಲಕ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ
ಕೆಪಿಸಿಸಿ ಮಾಜಿ ಸದಸ್ಯ, ವೈದ್ಯ ಡಾ. ಡಿ.ಎಚ್.ಮಾಲದಾರ ವಿಧಿವಶ
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು 