“ಸ್ವಯಂ ಉದ್ಯೋಗ ಕೌಶಲ್ಯಗಳಿಗೆ ಮಾಹಿತಿ ಸಾಕ್ಷರತೆ ಅಗತ್ಯ” ಹಿ ಪ್ರೊ. ಪಿ. ಜಿ. ತಡಸದ
“Information literacy is essential for self-employment skills” says Prof. P. G. Thadasa
ವಿಜಯಪುರ 18: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿನಿಯರು ಮಾಹಿತಿ ಸಾಕ್ಷರತೆಯ ಕೌಶಲ್ಯಗಳನ್ನು ಬೆಳೆಸಿಕೊಂಡು ಸ್ವಯಂ ಉದ್ಯೋಗ ಕೌಶಲ್ಯಗಳನ್ನು ರೂಢಿಸಿಕೊಳ್ಳುವುದು ಅಗತ್ಯವೆಂದು ಮಹಿಳಾ ವಿಶ್ವವಿದ್ಯಾಲಯದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ. ಪಿ. ಜಿ. ತಡಸದ ಹೇಳಿದರು. ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗ ಹಾಗೂ ಇಂಗ್ಲೀಷ್ ಅಧ್ಯಯನ ವಿಭಾಗಗಳ ಸಹಯೋಗದೊಂದಿಗೆ ಭಾರತ ಸರ್ಕಾರದ ಉನ್ನತ ಶಿಕ್ಷಣ ಸಚಿವಾಲಯದ ಪ್ರಧಾನ ಮಂತ್ರಿ ಉಚ್ಚತರ ಶಿಕ್ಷಾ ಅಭಿಯಾನ ಪಿಎಂ ಉಷಾ ಮತ್ತು ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಪರಿಷತ್ತಿನ ಅಡಿಯಲ್ಲಿ ಇತ್ತೀಚಿಗೆ ಹಮ್ಮಿಕೊಂಡಿದ್ದ “ಮಹಿಳಾ ಸಬಲೀಕರಣ ಹಾಗೂ ಸ್ವಯಂ ಉದ್ಯೋಗ” ಕುರಿತ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿನಿಯರು ಸ್ವಯಂ ಕಲಿಕೆ, ಜೀವಮಾನ ಕಲಿಕೆ ಹಾಗೂ ಸ್ವತಂತ್ರ ಕಲಿಕೆಗಳನ್ನು ತಮ್ಮ ದಿನನಿತ್ಯದ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಪರಿಪೂರ್ಣ ಜ್ಞಾನವನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ. ಮಾಹಿತಿ ತಂತ್ರಜ್ಞಾನ ಯುಗದಲ್ಲಿ ಮಾಹಿತಿ ಸಾಕ್ಷರತೆ ಅತ್ಯಂತ ಪ್ರಮುಖವಾಗಿದ್ದು, ಇದರಿಂದ ವಿದ್ಯಾರ್ಥಿನಿಯರು ತಮ್ಮ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳುವುದರ ಜೊತೆಗೆ ಸ್ವಯಂ ಉದ್ಯೋಗದತ್ತ ಮುನ್ನಡೆಯಲು ಸಹಕಾರಿಯಾಗುತ್ತದೆ ಎಂದರು.
ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಪ್ರೊ. ರಮೇಶ ನಾಯಕ್ ಮಾತನಾಡಿ, ರಾಷ್ಟ್ರವು ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಬೆಳೆಯಲು ಮಾಹಿತಿ ಸಾಕ್ಷರತೆ ಮತ್ತು ಡಿಜಿಟಲ್ ಸಾಕ್ಷರತೆ ಕೌಶಲ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಇಂದಿನ ಸ್ಪರ್ಧಾತ್ಮಕ ಜಗತ್ತನ್ನು ಎದುರಿಸಲು ವಿದ್ಯಾರ್ಥಿನಿಯರು ಮಾಹಿತಿ ಸಾಕ್ಷರತೆ ಕೌಶಲ್ಯಗಳನ್ನು ಅಳವಡಿಸಿಕೊಂಡು ತಮ್ಮ ಶೈಕ್ಷಣಿಕ ಮಟ್ಟವನ್ನು ಉನ್ನತಗೊಳಿಸಬೇಕೆಂದು ಹೇಳಿದರು.
ಇದೇ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಗ್ರಂಥಪಾಲಕಿ ಡಾ. ಅನುಪಮಾ ಜೋಶಿ ಮಾತನಾಡಿ, ಗ್ರಂಥಾಲಯದ ಕೌಶಲ್ಯಗಳು, ಮಾಹಿತಿ ಸಂಪನ್ಮೂಲಗಳು ಹಾಗೂ ಸೇವೆಗಳನ್ನು ಸಮರ್ಕವಾಗಿ ಉಪಯೋಗಿಸಿಕೊಂಡು ವಿದ್ಯಾರ್ಥಿನಿಯರು ಹೇಗೆ ಸ್ವಯಂ ಉದ್ಯೋಗಿಗಳಾಗಬಹುದು ಎಂಬುದನ್ನು ವಿವರಿಸಿದರು.
ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಕುವೆಂಪು ವಿಶ್ವವಿದ್ಯಾಲಯದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಪ್ರೊ. ಕೆ. ಟಿ. ಸಂಪತ್ತಕುಮಾರ ಮಾತನಾಡಿ, ಇಂದಿನ ದಿನಮಾನಗಳಲ್ಲಿ ಡಿಜಿಟಲ್ ಮಾಹಿತಿ ಸಾಕ್ಷರತೆಯ ಪ್ರಾಮುಖ್ಯತೆ ಹಾಗೂ ಅದರ ಅವಶ್ಯಕತೆ ಕುರಿತು ತಮ್ಮ ವಿಶೇಷ ಉಪನ್ಯಾಸದಲ್ಲಿ ವಿದ್ಯಾರ್ಥಿನಿಯರಿಗೆ ವಿವರವಾಗಿ ತಿಳಿಸಿದರು.
ಕಾರ್ಯಾಗಾರಲ್ಲಿ ಇಂಗ್ಲೀಷ್ ಅಧ್ಯಯನ ವಿಭಾಗದ ವಿದ್ಯಾರ್ಥಿನಿಯರು, ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ಮತ್ತಿತರಿದ್ದರು. ಕಾರ್ಯಾಗಾರದ ಸಂಯೋಜಕ ಪ್ರೊ. ಗವಿಸಿದ್ದಪ್ಪ ಆನಂದಳ್ಳಿ ಪ್ರಾಸ್ತಾವಿಕ ನುಡಿಗಳನ್ನಾಡಿ, ಅತಿಥಿಗಳನ್ನು ಪರಿಚಯಿಸಿದರು. ಪ್ರೊ. ಶಾಂತಾದೇವಿ ಟಿ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 