“ಅಂತರಾಷ್ಟ್ರೀಯ ಹಾವು ಕಡಿತದ ಜಾಗೃತಿ ದಿನ-2025”
“International Snakebite Awareness Day-2025”
ಧಾರವಾಡ 20; ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಜಿಲ್ಲಾ ಮಾಹಿತಿ ಶಿಕ್ಷಣ ಸಂವಹನ ವಿಭಾಗ, ಸರ್ಕಾರಿ ಪ್ರಥಮ ದರ್ಜೆ ಕಾಲೇಜ್, ಯುವ ರೆಡ್‌ಕ್ರಾಸ್ ಘಟಕ, ಎನ್.ಎಸ್.ಎಸ್ ಘಟಕಗಳು ಇವುಗಳ ಸಂಯುಕ್ತ ಆಶ್ರಯದಲ್ಲಿ “ಅಂತರಾಷ್ಟ್ರೀಯ ಹಾವು ಕಡಿತ ದಿನ”ದ ಅಂಗವಾಗಿ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಯಿತು.
ಧಾರವಾಡ ಜಿಲ್ಲಾ ಆರೋಗ್ಯ ್ಘ ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಎಸ್.ಎಮ್ ಹೊನಕೇರಿ ಸಸಿಗೆ ನೀರುಣಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಹಾವು ಕಡಿತದ ಸಂದರ್ಭದಲ್ಲಿ ಜನರು ಸಾಮಾನ್ಯವಾಗಿ ಮಾಡುವ ಕೆಲ ತಪ್ಪುಗಳು ಜೀವಕ್ಕೆ ಅಪಾಯಕಾರಿಯಾಗುತ್ತವೆ. ಕಡಿದ ಭಾಗವನ್ನು ಬಲವಾಗಿ ಕಟ್ಟಿ ರಕ್ತ ಹರಿವನ್ನು ನಿಲ್ಲಿಸುವುದು, ಕತ್ತರಿಸಿ ವಿಷವನ್ನು ಹೊರ ತೆಗೆದು ಹಾಕಲು ಯತ್ನಿಸುವುದು ಅಥವಾ ಮಂತ್ರ ಹಿ ತಂತ್ರಗಳಿಂದ ಚಿಕಿತ್ಸೆ ಪಡೆಯುವುದು ಸುರಕ್ಷಿತವಲ್ಲ, ತಕ್ಷಣವೇ ಬಾಧಿತ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆ ತರಬೇಕೆಂದು ಹೇಳುತ್ತಾ ವಿಶ್ವ ಆರೋಗ್ಯ ಸಂಸ್ಥೆ ವರದಿ ಅನುಸಾರ ವಿಶ್ವದಾದ್ಯಂತ ಪ್ರತಿ ವರ್ಷ ಸುಮಾರು 54 ಲಕ್ಷ ಜನರು ಹಾವು ಕಡಿತಕ್ಕೆ ಒಳಗಾಗುತ್ತಾರೆ. 80 ಸಾವಿರಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಳ್ಳುತ್ತಾರೆ ಮತ್ತು ಬದುಕುಳಿದ ಅನೇಕರು ಜೀವನ ಪರ್ಯಂತ ಸವಾಲುಗಳನ್ನು ಎದುರಿಸುತ್ತಾರೆ ಎಂದು ತಿಳಿಸಿದರು.
ಡಾ. ಕಿರಣ ಕುಲಕರ್ಣಿ ಎಸ್.ಬಿ.ಸಿ.ಸಿ ನೂಡಲ್ ಅಧಿಕಾರಿಗಳು ಜಿಲ್ಲಾ ಆಸ್ಪತ್ರೆ, ಧಾರವಾಡ ಇವರು ಮಾತನಾಡಿ ಹಾವು ಕಡಿದಾಗ ಮೊದಲಿಗೆ ಮಾಡಬೇಕಾದದ್ದು - ಬಾಧಿತನನ್ನು ಸಮಾಧಾನ ಪಡಿಸಿ, ಅವನ ಚಲನೆ ಕಡಿಮೆ ಮಾಡಿ, ಕಡಿತದ ಭಾಗವನ್ನು ಸ್ವಚ್ಛ ಬಟ್ಟೆಯಿಂದ ಸಡಿಲವಾಗಿ ಕಟ್ಟಿ, ತಕ್ಷಣವೇ ಸಮೀಪದ ಆಸ್ಪತ್ರೆಗೆ ಸಾಗಿಸುವುದಾಗಿದೆ. ಮುಖ್ಯವಾಗಿ ಹಾವುಗಳ ಬಗ್ಗೆ ಇರುವ ಅನೇಕ ಅಂಧಶ್ರದ್ದೆಗಳನ್ನು ದೂರವಿಡಬೇಕು, ಮಂತ್ರೋಪಚಾರಣೆ ಮಾಡುವುದು, ಧಾರ್ಮಿಕ ಸ್ಥಳಗಳಿಗೆ ಕರೆದೊಯ್ಯುವುದು ಇತ್ಯಾದಿ ಕ್ರಮಗಳು ಯಾವುದೇ ಪ್ರಯೋಜನಕಾರಿಯಾಗುವುದಿಲ್ಲ. ಹಾವು ಕಡಿತಕ್ಕೆ ಪರಿಣಾಮಕಾರಿ ಚಿಕಿತ್ಸೆ ಎಂದರೆ, ಆಂಟಿವೆನಮ್ (ವಿಷ ನಿರೋಧಕ) ಮಾತ್ರ. ಇದು ಸರಿಯಾದ ಸಮಯದಲ್ಲಿ ದೊರಕಿದರೆ ಜೀವ ಉಳಿಯುವುದು ಖಚಿತ. ಆದ್ದರಿಂದ ಎಲ್ಲರೂ ಜಾಗೃತರಾಗಿರಬೇಕು, ಅಂಧ ನಂಬಿಕೆಗಳನ್ನು ಬಿಟ್ಟು ಸರಿಯಾದ ವೈಧ್ಯಕೀಯ ಚಿಕಿತ್ಸೆಯ ಕಡೆಗೆ ಒತ್ತು ಕೊಡಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ, ಪ್ರಾಂಶುಪಾಲರಾದ ಡಾ. ಜಿ.ಕೆ. ಬಡಿಗೇರ ಮಾತನಾಡಿ ಸರ್ಕಾರಿ ಆಸ್ಪತ್ರೆಗಳಲ್ಲಿ ನೀಡುವ ಚಿಕಿತ್ಸೆಯ ಸದುಪಯೋಗಪಡಿಸಿಕೊಳ್ಳಬೇಕು. ಹಾವು ಕಚ್ಚಿದಾಗ ಏನೆಲ್ಲಾ ಮುಂಜಾಗೃತಾ ಕ್ರಮಗಳನ್ನು ಅನುಸರಿಸಬೇಕು ಎನ್ನುವ ಕುರಿತು ವೈದ್ಯಾಧಿಕಾರಿಗಳು ನೀಡಿದ ಮಾಹಿತಿಯನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕಾರ್ಯಕ್ರಮದ ಮಹತ್ವ ಕುರಿತು ಎನ್.ಎಸ್.ಎಸ್ ಘಟಕ -01 ರ ಕಾರ್ಯಕ್ರಮ ಅಧಿಕಾರಿ ಡಾ. ಡಿ.ಜಿ.ತಾಪಸ್, ಪ್ರಾಸ್ತಾವಿಕ ಮಾತುಗಳನ್ನು ಆಡಿದರು.
ಯುವ ರೆಡ್ ಕ್ರಾಸ್ ಘಟಕದ ಸಂಚಾಲಕರಾದ ಡಾ. ಲತಾ ಎನ್. ಕಿಲ್ಲೆದಾರ ಸ್ವಾಗತಿಸಿದರು. ಎನ್.ಎಸ್.ಎಸ್. ಘಟಕ-02 ರ ಕಾರ್ಯಕ್ರಮ ಅಧಿಕಾರಿ ಡಾ. ಜಯಾನಂದ ವ್ಹಿ. ಹಟ್ಟಿ ನಿರೂಪಿಸಿದರು.
ಎನ್.ಎಸ್.ಎಸ್. ಘಟಕ-03 ರ ಕಾರ್ಯಕ್ರಮ ಅಧಿಕಾರಿ ಡಾ. ವಿಜಯಲಕ್ಷ್ಮೀ ದಾನರೆಡ್ಡಿ ವಂದಿಸಿದರು. ಅಕ್ಷತಾ ಮಡಿವಾಳ ಪ್ರಾರ್ಥನೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಾದ ಡಾ. ಮಂಜುನಾಥ ಎಸ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಶ್ರೀ. ಬಿ.ಆರ್. ಪಾತ್ರೋಟ, ಉಪಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಎಮ್.ಎನ್ ಅಗಡಿ, ಡಾ. ಇಬ್ರಾಹಿಮ್ ಸೌದಾಗರ, ಡಾ. ಬಸವರಾಜೇಶ್ವರಿ ಪಾಟೀಲ, ಶ್ರೀ ಶಿವಾನಂದ ನರಹಟ್ಟಿ, ಶ್ರೀ ಪ್ರಕಾಶ ಮಹೀಂದ್ರಕರ, ಡಾ. ಸರಸ್ವತಿ ಪಾಟೀಲ, ಶ್ರೀ.ಎ.ಎಸ್. ಮಜ್ಜಗಿ, ಶ್ರೀಮತಿ ರೇಖಾ ಬಾಡಗಿ, ಡಾ. ಶ್ವೇತಾ ಚುಳಕಿ, ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 