“ಕೆಎಲ್‌ಇ ಹೇಲ್ತ್‌ ಗೈಡ್‌” ನೇರ ಫೋನ್‌-ಇನ್ ಕಾರ್ಯಕ್ರಮ

“KLE Health Guide” direct phone-in program

ಬೆಳಗಾವಿ 09: ಕೆಎಲ್‌ಇ ವೇಣುಧ್ವನಿ 90.4 ಎಫ್‌. ಎಮ್‌. ಸಮುದಾಯ ಬಾನುಲಿ ಕೇಂದ್ರ ಬೆಳಗಾವಿ, ಕೆಎಲ್‌ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಬೆಳಗಾವಿ ಹಾಗೂ ಕೆಎಲ್‌ಇ ಜವಾಹರಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯ ಬೆಳಗಾವಿ ಇವರ ಸಹಯೋಗದಲ್ಲಿ “ಕೆಎಲ್‌ಇ ಹೇಲ್ತ್‌ ಗೈಡ್‌” ನೇರ ಫೋನ್‌-ಇನ್ ಪ್ರಸಾರ ಕಾರ್ಯಕ್ರಮ ಆಯೋಜಿಸಲಾಗಿತ್ತು.  

ಗುರುವಾರ ದಿನಾಂಕ 09ನೇ ಜನವರಿ 2025 ರಂದು ಬೆಳಗ್ಗೆ 10 ರಿಂದ 11 ಗಂಟೆ ವರೆಗೆ ನಡೆದ ಕಾರ್ಯಕ್ರಮದಲ್ಲಿ ಕೀಲು ನೋವು: ವಿಧಗಳು, ಕಾರಣಗಳು, ತಡೆಗಟ್ಟುವಿಕ ಮತ್ತು ಚಿಕಿತ್ಸೆ ಕುರಿತು ಕುರಿತು ಪ್ರಶ್ನೋತ್ತರ ಮೂಲಕ ಜನಜಾಗೃತಿ ಮೂಡಿಸಲಾಯಿತು.  

ಕಾರ್ಯಕ್ರಮದಲ್ಲಿ ಕೆಎಲ್‌ಇ ಜವಾಹರಲಾಲ ನೆಹರು ವೈದ್ಯಕೀಯ ಮಹಾವಿದ್ಯಾಲಯದ ಪ್ರಾಧ್ಯಾಪಕ ಹಾಗೂ  ಕೆಎಲ್‌ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆಯ ಮೂಳೆ ಶಸ್ತ್ರ ಚಿಕಿತ್ಸಕ ಮತ್ತು ಜಂಟಿ ಬದಲಿ ಶಸ್ತ್ರಚಿಕಿತ್ಸಕ ಡಾ. ರಾಜೇಂದ್ರ ಭಾಂಡಣಕರ್ ಅವರು ಭಾಗವಹಿಸಿ ಮಾಹಿತಿ ಹಂಚಿಕೊಂಡರು ಹಾಗೂ ಕೇಳುಗರ ಪ್ರಶ್ನೆಗಳಿಗೆ ಉತ್ತರಿಸಿದರು. ವೇಣುಧ್ವನಿಯ ಕಾರ್ಯಕ್ರಮ ನಿರ್ವಾಹಕರಾದ ಮನಿಷ ಪಿ. ಎಸ್‌. ಮತ್ತು ಮಂಜುನಾಥ ಪೈ ಕಾರ್ಯಕ್ರಮ ನಡೆಸಿಕೊಟ್ಟರು.