“ಕನ್ನಡ ರತ್ನ ಪ್ರಶಸ್ತಿ” ಪ್ರದಾನ ಸಮಾರಂಭ
“Kannada Ratna Award” Presentation Ceremony
ಲೋಕದರ್ಶನ ವರದಿ
ಹರಪನಹಳ್ಳಿ 25: ಯಾವ ಪ್ರತಿಫಲ ಬಯಸದ ಸೇವೆಯೇ ನಿಜವಾದ ಸೇವೆ ಎಂದು ಕೊಟ್ಟೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ದೇವರುಮನಿ ಕೊಟ್ರೇಶ್ ಅಭಿಪ್ರಾಯಪಟ್ಟರು. ಪಟ್ಟಣದ ನವಜ್ಯೋತಿ ಸಾಂಸ್ಕೃತಿಕ ಸೇವಾ ಸಂಸ್ಥೆ ವತಿಯಿಂದ ಬಸಮ್ಮ ಕಲಾಮಂದಿರದಲ್ಲಿ 2025ಹಿ26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಕನ್ನಡ ವಿಷಯದಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ “ಕನ್ನಡ ರತ್ನ ಪ್ರಶಸ್ತಿ” ಪ್ರದಾನ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿ ಯಾವ ಪ್ರತಿಫಲ ಬಯಸದ ಸೇವೆಯೇ ನಿಜವಾದ ಸೇವೆ.
ಇಂತಹ ಈ ಸೇವೆಯನ್ನು ಉಪನ್ಯಾಸಕ ಹೆಚ್.ಮಲ್ಲಿಕಾರ್ಜುನ ಸಾಧಕ ವಿದ್ಯಾರ್ಥಿಗಳಿಗೆ, ಸೈನಿಕರಿಗೆ, ರೈತರಿಗೆ ಸಮಾಜಿಕವಾಗಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವ ಇವರ ಕಾರ್ಯ ಶ್ಲಾಘನೀಯವಾಗಿದೆ. “ಸಮಾಜ ನನಗೆ ಏನು ಕೊಟ್ಟಿದೆ ಎನ್ನುವುದಕ್ಕಿಂತ, ಸಮಾಜಕ್ಕೆ ನಾನೇನು ಕೊಡಬಹುದು ಎನ್ನುವ ತುಡಿತ ಇವರಲ್ಲಿದೆ” ಕಳೆದ 27 ವರ್ಷಗಳಿಂದ ಕಲೆ, ಸಾಹಿತ್ಯ, ಶಿಕ್ಷಣ, ನೃತ್ಯ, ಸಂಗೀತ ಕ್ಷೇತ್ರಗಳಲ್ಲಿ ಅನೇಕ ಕಾರ್ಯಕ್ರಮಗಳನ್ನು ಮಾಡುತ್ತಾ ಸಾಧಕರನ್ನು ಗುರುತಿಸಿ ಗೌರವಿಸುತ್ತಿರುವ ಇವರಿಗೆ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಬೇಕು ಎಂದು ಒತ್ತಾಯಿಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಡಾ. ರಮೇಶ್ ಕುಮಾರ್ ಮಾತನಾಡಿ, ಜೀವನದಲ್ಲಿ ಯಶಸ್ಸು ಅಂಕಗಳಿಂದ ಮಾತ್ರ ನಿರ್ಧಾರವಾಗುವುದಿಲ್ಲ. ಆದರೆ ಅಂಕಗಳು ನಿಮ್ಮ ಪರಿಶ್ರಮ, ಶಿಸ್ತು, ಗುರಿ ಮತ್ತು ಸಂಕಲ್ಪದ ಪ್ರತಿಬಿಂಬವಾಗಿವೆ. ನೀವು ಇಂದು ಪಡೆದಿರುವ ಈ ಗೌರವ ನಿಮ್ಮ ಶ್ರಮದ ಫಲವಾಗಿದೆ. ವಿದ್ಯಾರ್ಥಿಗಳು ಅಂಕಗಳ ಜೊತೆಗೆ ಉತ್ತಮ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಸಂಸ್ಥೆಯ ಅಧ್ಯಕ್ಷರಾದ ಸಪ್ನ ಮಲ್ಲಿಕಾರ್ಜುನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕನ್ನಡ ಭಾಷೆಯ ಅಭಿವೃದ್ಧಿ ಹಾಗೂ ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸುವ ಉದ್ದೇಶದಿಂದ ಸಂಸ್ಥೆ ಹಲವು ವರ್ಷಗಳಿಂದ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದೆ ಎಂದು ತಿಳಿಸಿದರು.
ಪ್ರಶಸ್ತಿ ಪ್ರಧಾನ ಮಾಡಿ ಕನ್ನಡ ಉಪನ್ಯಾಸಕರಾದ ಹೆಚ್.ಮಲ್ಲಿಕಾರ್ಜುನ ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಮಾತುಗಳನ್ನಾಡಿ “ಕನ್ನಡ ರತ್ನ” ಪ್ರಶಸ್ತಿ ಕೇವಲ ಗೌರವವಲ್ಲ_ ಇದು ನಿಮ್ಮ ಜೀವನದ ಹೊಸ ಅಧ್ಯಾಯ. ನಿಮ್ಮ ಸಾಧನೆಯ ಮೂಲಕ ತಾಯಿಹಿತಂದೆಗಳಿಗೆ ಗೌರವ ತಂದುಕೊಡಿ_ ಗುರುಗಳಿಗೆ ಹೆಮ್ಮೆ ತಂದುಕೊಡಿ_ ಸಮಾಜಕ್ಕೆ ಆದರ್ಶವಾಗಿರಿ_ ಕನ್ನಡದ ಕೀರ್ತಿಯನ್ನು ದೇಶದಾದ್ಯಂತ ಹಾಗೂ ಜಗತ್ತಿನಾದ್ಯಂತ ಹರಡಿ. ಪರಿಶ್ರಮ, ಆತ್ಮವಿಶ್ವಾಸ ಮತ್ತು ಗುರಿ ಸಾಧನೆಯ ಮಹತ್ವವನ್ನು ತಿಳಿಸಿದರು. ರವಿ ಮೆಡಿಕಲ್ಸ್‌ನ ಬಿ.ಎಸ್. ರವಿಶಂಕರ್ ಮಾತನಾಡಿ, ಗ್ರಾಮೀಣ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಇಂತಹ ಪ್ರಶಸ್ತಿ ಕಾರ್ಯಕ್ರಮಗಳು ಹೆಚ್ಚಿನ ಉತ್ತೇಜನ ನೀಡುತ್ತವೆ ಎಂದು ಅಭಿಪ್ರಾಯಪಟ್ಟರು.
ಶಿಕ್ಷಕರಾದ ವಿಠೋಬ ಮಾತನಾಡಿ, ಎಚ್. ಮಲ್ಲಿಕಾರ್ಜುನ ಅವರು ಹಲವು ವರ್ಷಗಳಿಂದ ಶೈಕ್ಷಣಿಕ ಹಾಗೂ ಸಮಾಜಮುಖಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದ್ದಾರೆ. ಇಂತಹ ಜನಪರ ಕಾರ್ಯಗಳಿಗೆ ಸಮಾಜದ ಪ್ರತಿಯೊಬ್ಬರೂ ಆರ್ಥಿಕ ನೆರವು ನೀಡಬೇಕು ಎಂದು ಕರೆ ನೀಡಿ ಸಹಾಯಧನ ನೀಡಿದರು. ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ ಅತ್ಯುತ್ತಮ ಅಂಕ ಗಳಿಸಿದ ಒಟ್ಟು 418 ವಿದ್ಯಾರ್ಥಿಗಳಿಗೆ “ಕನ್ನಡ ರತ್ನ ಪ್ರಶಸ್ತಿ” ಪ್ರದಾನ ಮಾಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್.ಮಕಬುಲ್ ಭಾಷಾ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮವು ಕನ್ನಡದ ಗೌರವ ಮತ್ತು ಶಿಕ್ಷಣ ಪ್ರೋತ್ಸಾಹದ ಸಾಂಸ್ಕೃತಿಕ ಹಬ್ಬವಾಗಿ ಗಮನ ಸೆಳೆಯಿತು.
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್ 