“ರಾಷ್ಟ್ರೀಯ ಯುವ ದಿನಾಚರಣೆ” ಕಾರ್ಯಕ್ರಮ
“National Youth Day” program
ಕೊಪ್ಪಳ 13: ತಾಲೂಕಿನ ಜಿ.ಟಿ.ಟಿ.ಸಿ. ಕಾಲೇಜು ದದೇಗಲ್-ಕೊಪ್ಪಳದಲ್ಲಿ ಶ್ರೀ ಸ್ವಾಮಿ ವಿವೇಕಾನಂದರ 164 ನೇ ಜಯಂತ್ಯೋತ್ಸವದ ಅಂಗವಾಗಿ “ರಾಷ್ಟ್ರೀಯ ಯುವ ದಿನಾಚರಣೆ” ಕಾರ್ಯಕ್ರವನ್ನು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ಕೊಪ್ಪಳದ ನಿರ್ದೇಶಕರಾದ ರಮೇಶ ತುಪ್ಪದ ಇವರು ಉದ್ಘಾಟಿಸಿ ಯುವಕರು ಹೆಚ್ಚು ಹೆಚ್ಚು ಸಾಮಾಜಿಕ ಸೇವೆಯಲ್ಲಿ ತೊಡಗಿಕೊಳ್ಳಬೇಕು. ಹಾಗೂ ಪಠ್ಯೇತರ ಚಟುವಟಿಕೆಗಳಲ್ಲದೇ ಸಮಾಜಮುಖಿ ಕಾರ್ಯಗಳಲ್ಲಿ ಯಶಸ್ಸನ್ನು ಕಾಣಬೇಕೆಂದು ತಿಳಿಸಿದರು. ಕೊಪ್ಪಳ ರಾಮಕೃಷ್ಣ ಆಶ್ರಮದ ಶ್ರೀಗಳಾದ ಪರಮ ಪೂಜ್ಯ ಶ್ರೀ ಚೈತನ್ಯಾನಂದ ಸ್ವಾಮಿಜಿಗಳು ವಿದ್ಯಾರ್ಥಿಗಳಿಗೆ ಸ್ವಾಮಿ ವಿವೇಕಾನಂದರ ತತ್ವಾದರ್ಶನಗಳನ್ನು ಬೋಧಿಸಿ ಆರ್ಶಿವಚನವನ್ನು ನೀಡಿದರು.
ಮುಖ್ಯ ಅತಿಥಿಗಳಾದ ಡಾಽಽಪರ್ವತಗೌಡ ಹಿರೇಗೌಡ್ರ ಜಿಲ್ಲಾ ಆಯುಷ್ ಅಧಿಕಾರಿಗಳು, ಕೊಪ್ಪಳ ಇವರು ವಿದ್ಯಾರ್ಥಿಗಳಿಗೆ ಯುವ ಜನತೆಯ ಕುರಿತು ಜಾಗೃತಿಯ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತಾಧಿಕಾರಿಗಳಾದ ಮೌನೇಶ ರಾಠೋಡ್ , ಪ್ರಾಂಶುಪಾಲರಾದ ಪ್ರಭುರಾಜ ಜಿ. , ರೆಡ್ ಕ್ರಾಸ್ ಸಂಸ್ಥೆಯ ಪಿ.ಆರ್.ಓ. ದೇವೆಂದ್ರ್ಪ ಹಿಟ್ನಾಳ, ಯುವ ರೆಡ್ ಕ್ರಾಸ್ ಸಂಯೋಜಕರಾದ ಗುದ್ನೇಶ ಭಾವಳ್ಳಿ, ಕಾಲೇಜಿನ ಬೋಧಕರು ಹಾಗೂ ವಿದ್ಯಾರ್ಥಿಗಳು, ಭಾಗವಹಿಸಿದ್ದರು. ದೇವೆಂದ್ರ್ಪ ಹಿಟ್ನಾಳ ಕಾರ್ಯಕ್ರಮವನ್ನು ನಿರೂಪಿಸಿದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 