“ವ್ಯಕ್ತಿ ಮತ್ತು ಪುಸ್ತಕಗಳು” ಕೇಂದ್ರ ಸಾಹಿತ್ಯ ಅಕಾಡೆಮಿ ಕಾರ್ಯಕ್ರಮ
“Person and Books” Central Sahitya Academy Program
“ವ್ಯಕ್ತಿ ಮತ್ತು ಪುಸ್ತಕಗಳು” ಕೇಂದ್ರ ಸಾಹಿತ್ಯ ಅಕಾಡೆಮಿ ಕಾರ್ಯಕ್ರಮ
ಧಾರವಾಡ 09: ವ್ಯಕ್ತಿ ಎಷ್ಟೇ ದೊಡ್ಡವನಾಗಿ ಬೆಳೆದರೂ ತಾನು ಬೆಳೆದು ಬಂದ ಪರಿಸರವನ್ನು ಎಂದೂ ಮರೆಯಬಾರದು ಹಾಗೂ ತನ್ನನ್ನು ರೂಪಿಸಿದ ತಂದೆ-ತಾಯಿಗಳು, ಗುರು-ಹಿರಿಯರು, ಬಂಧು-ಸ್ನೇಹಿತರನ್ನು ಯಾವ ಕಾಲಕ್ಕೂ ಕಡೆಗಣಿಸಬಾರದು ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾದ ಎನ್.ಶಶಿಕುಮಾರ ಅವರು ಹೇಳಿದರು.
ಅವರು ಕೇಂದ್ರ ಸಾಹಿತ್ಯ ಅಕಾಡೆಮಿ ಹೊಸದಿಲ್ಲಿ ಮತ್ತು ಕೃಷಿ ತಂತ್ರಜ್ಞರ ಸಂಸ್ಥೆ ಬೆಂಗಳೂರು-ಧಾರವಾಡ ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ, “ವ್ಯಕ್ತಿ ಮತ್ತು ಪುಸ್ತಕಗಳು” ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡುತ್ತಿದ್ದರು.
ಪುಸ್ತಕವನ್ನು ಜ್ಞಾನಕ್ಕಾಗಿ ಆಶ್ರಯಿಸಿದ ವ್ಯಕ್ತಿ ಬದುಕಿನಲ್ಲಿ ಸಾರ್ಥಕತೆಯನ್ನು ಕಂಡುಕೊಳ್ಳುತ್ತಾನೆ. ಅಷ್ಟೇ ಅಲ್ಲ ಜೀವನದಲ್ಲಿ ಎದುರಾಗುವ ಸವಾಲುಗಳನ್ನು ಧೈರ್ಯದಿಂದ ಮತ್ತು ಆತ್ಮವಿಶ್ವಾಸದಿಂದ ಎದುರಿಸುತ್ತಾನೆ. ಬಾಲ್ಯದಿಂದಲೂ ಪುಸ್ತಕವನ್ನು ಓದುವ ವ್ಯಕ್ತಿ ತನ್ನನ್ನು ತಾನು ಪರಿಪೂರ್ಣತೆಯೆಡೆಗೆ ಕೊಂಡೊಯ್ಯುತ್ತಾನೆ ಎಂದು ಕೂಡ ಹೇಳಿದರು. ತಮ್ಮ ಇದುವರೆಗಿನ ಸಾಧನೆಯ ಹಿಂದೆ ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಯ ದಟ್ಟ ಪ್ರಭಾವವಿದೆಯೆಂದು ಹೇಳಿದರು.
ಕೇಂದ್ರ ಸಾಹಿತ್ಯ ಅಕಾಡೆಮಿ ಈ ರೀತಿ ವಿಭಿನ್ನ ಆಲೋಚನೆಯ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಸಾಹಿತ್ಯ ಸಂಸ್ಕೃತಿ ಮತ್ತು ಪುಸ್ತಕ ಸಂಸ್ಕಾರಗಳನ್ನು ಜನರಲ್ಲಿ ಬಿತ್ತುತ್ತಿರುವುದು ಸ್ತುತ್ಯಾರ್ಹ ಎಂದವರು ಈ ಸಂದರ್ಭದಲ್ಲಿ ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿದ್ದ ಕೃಷಿ ತಂತ್ರಜ್ಞರ ಸಂಸ್ಥೆಯ ರಾಜ್ಯ ಅಧ್ಯಕ್ಷರಾದ ಡಾ.ಎ.ಬಿ. ಪಾಟೀಲ ಅವರು ಕೃಷಿ ಮತ್ತು ಸಾಹಿತ್ಯಕ್ಕೆ ಅವಿನಾಭಾವ ಸಂಬಂಧವಿದೆ, ಸಾಹಿತ್ಯದ ಒಲವು ಮೂಡಿಸಿಕೊಳ್ಳುವ ಮೂಲಕ ಕೃಷಿ ಸಂಬಂಧಿ ಸವಾಲುಗಳನ್ನು ಸಮರ್ಥವಾಗಿ ಎದುರಿಸಬಹುದಾಗಿದೆ ಎಂದರು. ಕೃಷಿ ತಂತ್ರಜ್ಞರ ಸಂಸ್ಥೆ ಆಧುನಿಕ ತಾಂತ್ರಿಕತೆಗಳನ್ನು ರೈತ ಸಮುದಾಯಕ್ಕೆ ತಲುಪಿಸಲು ನಿರಂತರವಾಗಿ ಶ್ರಮಿಸುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಕೇಂದ್ರ ಸಾಹಿತ್ಯ ಅಕಾಡೆಮಿಯ ಕನ್ನಡ ಸಲಹಾ ಮಂಡಳಿ ಸದಸ್ಯರಾದ ಚನ್ನಪ್ಪ ಅಂಗಡಿ, ಅಕಾಡೆಮಿಯ ಕಾರ್ಯಚಟುವಟಿಕೆಗಳು ಮತ್ತು ‘ವ್ಯಕ್ತಿ ಮತ್ತು ಪುಸ್ತಕಗಳು’ ಕಾರ್ಯಕ್ರಮದ ಉದ್ದೇಶ ಕುರಿತಾಗಿ ವಿವರಿಸಿದರು.
ಕೃಷಿ ತಂತ್ರಜ್ಞರ ಸಂಸ್ಥೆಯ ಉಪಾಧ್ಯಕ್ಷರಾದ ಡಾ.ವಿ.ಐ.ಬೆಣಗಿ, ಸದಸ್ಯರಾದ ಎಫ್.ಆರ್. ನಿಡಗುಂದಿ, ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸದಸ್ಯರಾದ ಡಾ. ಪ್ರಭಾಕರ ಶೆಟ್ಟಿ, ಡಾ. ಬಸು ಬೇವಿನಗಿಡದ, ಸುರಕೋಡ, ಸಾತವೀರ ರೊಟ್ಟಿ, ಡಾ. ಚಿದಾನಂದ ಮಾಸನಕಟ್ಟಿ, ಮಂಜುನಾಥ, ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳು, ರೋಟರಿ ಸಂಸ್ಥೆಯ ಪದಾಧಿಕಾರಿಗಳು, ಕೃಷಿ ವಿಜ್ಞಾನಿಗಳು, ತಜ್ಞರು, ಕೆಎಎಸ್ ಅಧಿಕಾರಿಗಳು, ಸಾಹಿತಿಗಳು, ವಿದ್ಯಾರ್ಥಿಗಳು, ನಿವೃತ್ತ ನೌಕರರು ಸೇರಿದಂತೆ ಅಪಾರ ಸಂಖ್ಯೆಯ ಸಭಿಕರು ಪಾಲ್ಗೊಂಡಿದ್ದರು.
ಇದೇ ಸಂದರ್ಭದಲ್ಲಿ ಕೃಷಿ ವಿಜ್ಞಾನಿಗಳಾದ ಡಾ. ಬಿ.ಎಂ.ಚಿತ್ತಾಪೂರ ಇವರು ಪ್ರಕಟಿಸಿದ ‘ಬದುಕಿನ ಕಿಡಕಿಯಿಂದ’ ಕವನ ಸಂಕಲನವನ್ನು ಬಿಡುಗಡೆಗೊಳಿಸಲಾಯಿತು. ಮಾಲತೇಶ ಪುಟ್ಟಣ್ಣವರ ಸ್ವಾಗತಿಸಿದರು, ಯಾಸ್ಮಿನ ಮೊಕಾಶಿ ನಿರೂಪಿಸಿ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 