“ಅತ್ಯುತ್ತಮ ಪುಸ್ತಕಗಳಿಂದ ಜೀವನ ರೂಪಿಸಿಕೊಳ್ಳಿ”: ಬಸವರಾಜ್ ಶಿವಣ್ಣನವರ್

“ಅತ್ಯುತ್ತಮ ಪುಸ್ತಕಗಳಿಂದ ಜೀವನ ರೂಪಿಸಿಕೊಳ್ಳಿ”: ಬಸವರಾಜ್ ಶಿವಣ್ಣನವರ್  “Shape your life with the best books”: Basavaraj Shivannanavar

ಬ್ಯಾಡಗಿ   12: ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸರ್ವಾಂಗೀಣ ಅಭಿವೃದ್ಧಿಗೆ ಪೂರಕ ಸಂಸ್ಕಾರ ಮತ್ತು ಸಮನ್ವಯತೆ ರೂಢಿಸಿಕೊಂಡು ಜೀವನ ರೂಪಿಸಿಕೊಳ್ಳಬೇಕು ಎಂದು ಶಾಸಕ ಬಸವರಾಜ್ ಶಿವಣ್ಣನವರ್ ಹೇಳಿದರು.ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2026- 27ನೇ ಸಾಲಿನ ಪಠ್ಯೇತರ ಚಟುವಟಿಕೆಗಳ ಸಮಾರೋಪ ಸಮಾರಂಭ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬಿಳ್ಕೊಡುಗೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಯುವಜನತೆ ದೇಶದ ಸಂಸ್ಕೃತಿ ಮತ್ತು ಆಚಾರ ವಿಚಾರಗಳನ್ನು ಮೈಗೂಡಿಸಿಕೊಂಡು ಅತ್ಯುತ್ತಮ ಆಕರ ಗ್ರಂಥಗಳನ್ನು ಓದುವುದರ ಮೂಲಕ ಅದರಲ್ಲಿ ಇರುವ ಸಾರಾಂಶಗಳನ್ನು ತಮ್ಮ ಬದುಕಿಗೆ ಅಳವಡಿಸಿಕೊಳ್ಳಬೇಕು ಮತ್ತು ಶಿಕ್ಷಣ ಸಂಸ್ಥೆಗಳ ಕಾಲೇಜಿನಲ್ಲಿರುವ ವಿದ್ಯಾರ್ಥಿಗಳಿಗೆ ಸಂಸ್ಕೃತಿ, ಸಂಸ್ಕಾರ ಪ್ರಾಪಂಚಿಕ ಜ್ಞಾನ ಮತ್ತು ಕೌಶಲ್ಯಗಳನ್ನು ರೂಢಿಸಿಕೊಳ್ಳುವ ಮೂಲಕ ದೇಶ ಕಟ್ಟುವ ಕೆಲಸದಲ್ಲಿ ಮಾತ್ರ ವಿದ್ಯಾರ್ಥಿಗಳು ಪಡೆದಂತಹ ಪದವಿಗಳಿಗೆ ಇನ್ನೂ ಹೆಚ್ಚಿನ ಮೆರಗು ಸಿಗಲಿದೆ ಈ ನಿಟ್ಟಿನಲ್ಲಿ ಶಿಕ್ಷಣದ ನಂತರ ಒಳ್ಳೆಯ ಅವಕಾಶಗಳಿದ್ದು ಅವುಗಳನ್ನು ಪಡೆದುಕೊಂಡು ಸುಂದರ ಬದುಕು ಕಟ್ಟಿಕೊಳ್ಳುವಂತೆ ಕರೆ ನೀಡಿದರು. 

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮೊಟೆಬೆನ್ನೂರು ಸರ್ಕಾರಿ ಪ್ರಥಮ ದರ್ಜೆ ಯ ಕಾಲೇಜಿನ ಪ್ರಾಂಶುಪಾಲ ಸತೀಶ್ ಬೇವಿನಹಳ್ಳಿ ಮಾತನಾಡಿ, ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ವಿಷಯಗಳಿಗೂ ಒತ್ತು ನೀಡಬೇಕು ಎಂದರು.ಕಾಲೇಜಿನ ಪ್ರಾಂಶುಪಾಲ ಡಾ. ಮಲ್ಲಿಕಾರ್ಜುನ್ ಕಡ್ಡಿಪುಡಿ ಮಾತನಾಡಿ ವಿದ್ಯಾರ್ಥಿಗಳು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಸೂಕ್ತ ಪ್ರತಿಭೆ ಹೊರಹೊಮ್ಮುತ್ತದೆ ಪ್ರಾಧ್ಯಾಪಕರಲ್ಲಿ ಅಡಗಿರುವ ವಿದ್ವತ್ತನ್ನು ಸದುಪಯೋಗ ಪಡಿಸಿಕೊಂಡು ಜೀವನದ ಗುರಿ ತಲುಪಬೇಕು.

ನಿಮ್ಮ ಓದಿನ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ ನಿಮ್ಮ ವ್ಯಕ್ತಿತ್ವ ನಿರ್ಮಾಣ ಮಾಡಿಕೊಳ್ಳಬೇಕೆಂದು ಹೇಳಿದರು. ಕಾರ್ಯಕ್ರಮದಲ್ಲಿ ಆಶ್ರಯ ಸಮಿತಿ ಅಧ್ಯಕ್ಷ ಅಬ್ದುಲ್ ಮುನಾಫ್ ಎರೆಸೀಮಿ. ಕಾಲೇಜಿನ ಪ್ರಾಚಾರ್ಯರಾದ ಡಾ. ಸತೀಶ್‌. ಡಾ. ದೇವೇಂದ್ರ​‍್ಪ ಬಿ ಎಸ್‌. ಡಿ ಶಿವಪ್ಪ. ಎಚ್ ಜಿ ಸಣ್ಣ ಗೌಡ್ರ. ಮತ್ತು ಎಲ್ಲ ಬೋಧಕ ಬೋಧಕ್ಕೆ ತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿ ವೃಂದದವರು ಉಪಸ್ಥಿತರಿದ್ದರು.