“ಧ್ವನಿ ನನ್ನದೇ, ಆದರೆ ಲೋಕಾಯುಕ್ತ ದಾಳಿಗೆ ಸಂಬಂಧವಿಲ್ಲ” ಹಿ ಕುಮಾರ ಮಹಾರಾಜ ಸ್ವಾಮೀಜಿ
“The voice is mine, but it has nothing to do with the Lokayukta attack” Hi Kumara Maharaja Swamiji
ಶಿರಹಟ್ಟಿ 23 : ಶಾಸಕ ಡಾ. ಚಂದ್ರು ಲಮಾಣಿ ವಿರುದ್ಧದ ಲಂಚ ಪ್ರಕರಣದ ಹಿನ್ನಲೆಯಲ್ಲಿ ಜಾಲತಾಣದಲ್ಲಿ ವೈರಲ್ ಆಗಿರುವ ಆಡಿಯೊ ಕ್ಲಿಪ್ಗಳು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿವೆ. ಈ ಸಂಬಂಧ ಆದರಹಳ್ಳಿ ಗವಿಮಠದ ಕುಮಾರ ಮಹಾರಾಜ ಸ್ವಾಮೀಜಿಅವರು ಇಂದು ಪ್ರತಿಕಾಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದರು.
ವೈರಲ್ ಆಗಿರುವ ಆಡಿಯೊದಲ್ಲಿ “ಮುಂದಿನ ಚುನಾವಣೆಯಲ್ಲಿ ಚಂದ್ರು ಲಮಾಣಿ ಅವರಿಗೆ ಟಿಕೆಟ್ ತಪ್ಪಿಸಬೇಕು”, “ಬೆಂಗಳೂರಿನಲ್ಲಿ ಒಂದು ತಂಡ ಇದೆ”, “ನೋಟಿಗೆ ಪೌಡರ್ ಹಚ್ಚಿ ಐಟಿಗೆ ಒಗಿಸಿಬಿಡುತ್ತಾರೆ” ಎಂಬ ಮಾತುಗಳು ಕೇಳಿಬಂದಿದ್ದವು. ಈ ಸಂಭಾಷಣೆ ಸ್ವಾಮೀಜಿ ಮತ್ತು ಅನಾಮಿಕ ವ್ಯಕ್ತಿಯ ನಡುವೆ ನಡೆದದ್ದು ಎನ್ನಲಾಗಿದೆ.
“ಸಿಟ್ಟಿನಲ್ಲಿ ಮಾತನಾಡಿದ್ದೆ, ಷಡ್ಯಂತ್ರದಲ್ಲಿ ಕೈವಾಡ ಇಲ್ಲ”
ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಸ್ವಾಮೀಜಿ, “ಆಡಿಯೊದಲ್ಲಿರುವ ಧ್ವನಿ ನನ್ನದೇ ಎಂಬುದನ್ನು ನಾನು ಒಪ್ಪುತ್ತೇನೆ. ಆದರೆ ಅದು ಸುಮಾರು ಒಂದು ವರ್ಷದ ಹಿಂದಿನದ್ದು. ಲಕ್ಷ್ಮೇಶ್ವರ ತಾಲ್ಲೂಕಿನಲ್ಲಿ ಅಕ್ರಮ ಗಣಿಗಾರಿಕೆ ವಿರುದ್ಧ ಹೋರಾಟ ನಡೆಸುತ್ತಿದ್ದ ವೇಳೆ ಉಂಟಾದ ವೈಮನಸ್ಸಿನ ಹಿನ್ನೆಲೆ ಸಿಟ್ಟಿನಲ್ಲಿ ಮಾತನಾಡಿದ್ದೆ. ಲೋಕಾಯುಕ್ತ ದಾಳಿ ಅಥವಾ ಲಂಚ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ” ಎಂದು ಹೇಳಿದರು.
“ಶಾಸಕರ ವಿರುದ್ಧ ದೂರು ನೀಡಿರುವ ಗುತ್ತಿಗೆದಾರನಿಗೂ ನನಗೂ ಪರಿಚಯವಿಲ್ಲ. ನನ್ನ ಮೇಲೆ ಅನುಮಾನ ಇದ್ದರೆ, ನನ್ನ ಎರಡೂ ಮೊಬೈಲ್ಗಳನ್ನು ಪೊಲೀಸರು ಪರೀಶೀಲಿಸಬಹುದು. ತನಿಖೆಗೆ ಸಂಪೂರ್ಣ ಸಹಕಾರ ನೀಡಲು ಸಿದ್ಧನಿದ್ದೇನೆ” ಎಂದು ಸ್ವಾಮೀಜಿ ತಿಳಿಸಿದರು.
ರಾಜಕೀಯ ವಲಯದಲ್ಲಿ ಚರ್ಚೆ ತೀವ್ರ
ಆಡಿಯೊ ಬಹಿರಂಗಗೊಂಡ ಬಳಿಕ, ಶಾಸಕ ಪ್ರಕರಣಕ್ಕೆ ಸಂಬಂಧಿಸಿದಂತೆ ಷಡ್ಯಂತ್ರ ನಡೆದಿದೆ ಎಂಬ ಆರೋಪಗಳು ಕೇಳಿಬಂದಿವೆ. ಬಿಜೆಪಿ ಕಾರ್ಯಕರ್ತರು ಪ್ರಕರಣದ ಹಿಂದೆ ರಾಜಕೀಯ ಕೈವಾಡವಿದೆ ಎಂದು ಆರೋಪಿಸುತ್ತಿದ್ದರೆ, ಕಾಂಗ್ರೆಸ್ ನಾಯಕರು ಕಾನೂನು ಕ್ರಮವನ್ನು ಸಮರ್ಥಿಸಿದ್ದಾರೆ. ಸ್ವಾಮೀಜಿ, “ಲೋಕಾಯುಕ್ತ ಸಂಸ್ಥೆ ಸ್ವತಂತ್ರವಾಗಿ ತನಿಖೆ ನಡೆಸುತ್ತಿದೆ. ನಾವು ಯಾವುದೇ ಹಸ್ತಕ್ಷೇಪ ಮಾಡಿಲ್ಲ. ಭಕ್ತರು ಆತಂಕಪಡುವ ಅಗತ್ಯವಿಲ್ಲ” ಎಂದು ಮನವಿ ಮಾಡಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 