“ಹೊಸ ದೃಷ್ಟಿಕೋನದತ್ತ: ಮಹಿಳೆ ಸಬಲೀಕರಣ ಮತ್ತು ಉದ್ಯಮಶೀಲತೆ” ಉದ್ಘಾಟನೆ
“Towards a New Perspective: Women Empowerment and Entrepreneurship” inaugurated
“ಹೊಸ ದೃಷ್ಟಿಕೋನದತ್ತ: ಮಹಿಳೆ ಸಬಲೀಕರಣ ಮತ್ತು ಉದ್ಯಮಶೀಲತೆ” ಉದ್ಘಾಟನೆ
ವಿಜಯಪುರ 31: ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸರ್ಕಾರದ ಯೋಜನೆಗಳು ಲಭಿಸಿದಾಗ ಸಬಲೀಕರಣ ಹೊಂದಲು ಸಾಧ್ಯ ಎಂದು ಮಹಿಳಾ ವಿವಿಯ ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್. ಲಕ್ಕಣ್ಣವರ ಹೇಳಿದರು. ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗ ಹಾಗೂ ಬಿ.ಎಲ್.ಡಿ.ಇ ಸಂಸ್ಥೆಯ ಬಂಗಾರಮ್ಮ ಸಜ್ಜನ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಿಳಾ ಮಹಾವಿದ್ಯಾಲಯದ ಐ.ಕ್ಯೂ.ಎ.ಸಿ ಇವರ ಸಂಯುಕ್ತಾಶ್ರಯದಲ್ಲಿ ಗುರುವಾರ ಆಯೋಜಿಸಿದ್ದ “ಹೊಸ ದೃಷ್ಟಿಕೋನದತ್ತ: ಮಹಿಳೆ ಸಬಲೀಕರಣ ಮತ್ತು ಉದ್ಯಮಶೀಲತೆ” ಎಂಬ ವಿಷಯದ ಕುರಿತ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಆರ್ಥಿಕ ಸ್ವಾತಂತ್ರ್ಯವನ್ನು ಗುರಿಯಾಗಿಟ್ಟುಕೊಂಡು ಮಹಿಳೆಯರಿಗೆ ಸ್ವ ಉದ್ಯೋಗಕ್ಕಾಗಿ ಆರ್ಥಿಕ ಬೆಂಬಲ ಮತ್ತು ತರಬೇತಿಯನ್ನು ನೀಡುವ ಯೋಜನೆಗಳು ಸಾಕಷ್ಟಿವೆ. ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು. ಇದೇ ಸಂದರ್ಭದಲ್ಲಿ ಮಹಿಳಾ ವಿವಿಯ ಸಮಾಜ ವಿಜ್ಞಾನ ನಿಕಾಯದ ಡೀನ ಪ್ರೊ.ಆರ್.ವ್ಹಿ.ಗಂಗಶೆಟ್ಟಿ ಮಾತನಾಡಿ, ಮಹಿಳೆ ಸಬಲೀಕರಣ ಮತ್ತು ಉದ್ಯಮಶೀಲತೆಯಲ್ಲಿ ಯಶಸ್ಸು ಸಾಧಿಸಬೇಕಾದರೆ ಶಿಕ್ಷಣ ಅತ್ಯಾವಶ್ಯಕ. ಉದ್ಯಮಶೀಲತೆ ಮತ್ತು ಮಹಿಳಾ ಸಬಲೀಕರಣವು ಒಂದೇ ನಾಣ್ಯದ ಎರಡು ಮುಖಗಳಂತಿವೆ ಎಂದರು. ಕಾರ್ಯಾಗಾರದಲ್ಲಿ ಪ್ರಾಚಾರ್ಯ ಡಾ.ವೈ.ತಮ್ಮಣ್ಣ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಹಿಳೆಯರು ಸ್ವಯಂ ಉದ್ಯೋಗಗಳನ್ನು ಪ್ರಾರಂಭಿಸಲು ಮತ್ತು ಯಶಸ್ವಿಯಾಗಿ ನಿರ್ವಹಿಸಲು ಅಗತ್ಯವಾದ ತರಬೇತಿ ಹಾಗೂ ಕೌಶಲ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಹಲವು ಸರ್ಕಾರದ ಯೋಜನೆಗಳು ಸಹಕಾರ ನೀಡುತ್ತವೆ. ಟೇಲರಿಂಗ್, ಕರಕುಶಲ ಮತ್ತು ಕುಶಲಕರ್ಮಿಗಳಂತಹ ಕೆಲಸಗಳನ್ನು ಮಹಿಳೆಯರು ಸ್ವಾವಲಂಬಿಯಾಗಿ ನಿರ್ವಹಿಸಿ ಆರ್ಥಿಕವಾಗಿ ಸದೃಢರಾಗಬಹುದು ಎಂದರು. ಈ ಕಾರ್ಯಾಗಾರದಲ್ಲಿ ಒಟ್ಟು ಮೂರು ವಿಚಾರಗೋಷ್ಠಿಗಳು ನಡೆದವು. ಸಂಪನ್ಮೂಲ ವ್ಯಕ್ತಿಗಳಾಗಿ ಎಸ್.ಬಿ.ಬಳ್ಳಾರಿ. ನೀತೀನ ರುಣವಾಲ ಮತ್ತು ಪಲ್ಲವಿ ವೈದಾಂಡೆ ಮಾತನಾಡಿದರು. ಕಾರ್ಯಕ್ರಮದಲ್ಲಿ ಪ್ರೊ.ಕೆ.ಪಿ.ಸುರೇಶ ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಶ್ರೀಸುಧಾ ಕಟ್ಟಿ ಪ್ರಾರ್ಥಿಸಿದರು. ಮಹಿಳಾ ವಿವಿಯ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಡಿ.ಎಮ್.ಮದರಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಐ.ಕ್ಯೂ.ಎ.ಸಿ ಸಂಯೋಜಕ ಡಾ.ಭಕ್ತಿ ಮಹೀಂದ್ರಕರ ಸ್ವಾಗತಿಸಿ ಪರಿಚಯಿಸಿದರು. ಪ್ರೊ.ಮಲ್ಲಿಕಾರ್ಜುನ ಕೆಂಗನಾಳ ನಿರೂಪಿಸಿದರು. ಪ್ರೊ. ಹೆಚ್.ಎಸ್.ದೇಸಾಯಿ ವಂದಿಸಿದರು. ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗ ಹಾಗೂ ಬಿ.ಎಲ್.ಡಿ.ಇ ಸಂಸ್ಥೆಯ ಬಂಗಾರಮ್ಮ ಸಜ್ಜನ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಿಳಾ ಮಹಾವಿದ್ಯಾಲಯದ ಐ.ಕ್ಯೂ.ಎ.ಸಿ ಇವರ ಸಂಯುಕ್ತಾಶ್ರಯದಲ್ಲಿ ಗುರುವಾರ ಆಯೋಜಿಸಿದ್ದ “ಹೊಸ ದೃಷ್ಟಿಕೋನದತ್ತ: ಮಹಿಳೆ ಸಬಲೀಕರಣ ಮತ್ತು ಉದ್ಯಮಶೀಲತೆ” ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿದ ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್. ಲಕ್ಕಣ್ಣವರ ಮಾತನಾಡಿದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 