“ಮಹಿಳೆಯರು ಸ್ವಾವಲಂಬಿಗಳಾಗುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಬನ್ನಿ” ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ
“Women should become self-reliant and come into the mainstream of society” Zilla Panchayat Deputy Se
ಗದಗ 12: ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯಡಿ ಬರುವ ಸಂಜೀವಿನಿ-ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ ಹಾಗೂ ಜಿಲ್ಲಾಡಳಿತ ಮತ್ತು ಜಿಲ್ಲಾಪಂಚಾಯತ, ಗದಗ ಇವರ ಸಹಭಾಗಿತ್ವದಲ್ಲಿ ಲಖಪತಿ ದೀದಿಗಳ ಕುರಿತು ಕೃಷಿ ಸಖಿ, ಪಶು ಸಖಿ ಹಾಗೂ ವಿವಿಧ ಸಮುದಾಯ ಸಂಪನ್ಮೂಲ ವ್ಯಕ್ತಿಗಳಿಗೆ ಒಂದು ದಿನದ ಕಾರ್ಯಾಗಾರವನ್ನು ದಿನಾಂಕ:11.02.2026 ರಂದು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಾಗಾರದಲ್ಲಿ ಸ್ವ-ಸಹಾಯ ಸಂಘದ ಮಹಿಳೆಯರಿಗೆ ವಿವಿಧ ಜೀವನೋಪಾಯ ಚಟುವಟಿಕೆಗಳನ್ನು ಕಲ್ಪಿಸುವ ಮೂಲಕ ಆದಾಯವನ್ನು ಹೆಚ್ಚಿಸಿ, ಅವರನ್ನು ಲಖಪತಿ ದೀದಿಗಳಾಗಿ ಹೇಗೆ ಅಭಿವೃದ್ಧಿ ಹೊಂದಬಹುದು ಎನ್ನುವುದರ ತರಬೇತಿ ನೀಡಲಾಯಿತು. ಗ್ರಾಮೀಣ ಪ್ರದೇಶದ ಸ್ವ-ಸಹಾಯ ಗುಂಪಿನ ಮಹಿಳೆಯರು ಕೃಷಿ ಹಾಗೂ ಕೃಷಿಯೇತರ ಜಿವನೋಪಾಯ ಕ್ಷೇತ್ರಗಳಲ್ಲಿ ಇರುವ ಅವಕಾಶಗಳು ಹಾಗೂ ಈ ಅವಕಾಶಗಳಿಗೆ ಪೂರಕವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಸೌಲಭ್ಯಗಳನ್ನು ಪಡೆದುಕೊಳ್ಳುವ ಕುರಿತಂತೆ ಸಹ ತರಬೇತಿಯಲ್ಲಿ ತಿಳಿಸಿಕೊಡಲಾಯಿತು.
ತರಬೇತಿ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತನ ಉಪಕಾರ್ಯದರ್ಶಿಗಳಾದ ಶ್ರೀ ಸಿ.ಆರ್.ಮುಂಡರಗಿ ಉದ್ಘಾಟಿಸಿ “ಈ ಹಿಂದೆ ಮಹಿಳೆಯರು ಸ್ವಸಹಾಯ ಗುಂಪುಗಳನ್ನು ಸೇರಲು ಮತ್ತು ಸಭೆ ಸಮಾರಂಭಗಳಲ್ಲಿ ಭಾಗವಹಿಸಲು ಹಿಂದೇಟು ಹಾಕುವ ಕಾಲ ಇತ್ತು. ಆದರೆ ಈಗ ಕಾಲ ಬದಲಾಗಿದ್ದು, ಸ್ವ-ಸಹಾಯಗುಂಪುಗಳಲ್ಲಿ ಸಕ್ರಿಯವಾಗಿ ಮಹಿಳೆಯರು ಪಾಲ್ಗೊಂಡು ವಿವಿಧ ಸಾಲ ಸೌಲಭ್ಯಳನ್ನು ಪಡೆದುಕೊಳ್ಳುವ ಮೂಲಕ ಕುಟುಂಬದ ಆದಾಯ ವೃದ್ಧಿಗೆ ತನ್ನದೇ ಆದ ಕೊಡುಗೆ ನೀಡುತ್ತಿದ್ದಾಳೆ. ಇಂದಿನ ತರಬೇತಿಯಲ್ಲಿ ನೀಡುವ ಮಾಹಿತಿ ಪಡೆದುಕೊಂಡು ಗ್ರಾಮೀಣ ಮಹಿಳೆಯರನ್ನು ಮುಖ್ಯವಾಹಿನಿಗೆ ತರಲು ಶ್ರಮಿಸಬೇಕು ” ಎಂದು ಕರೆ ನೀಡಿದರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತನ ಮುಖ್ಯ ಯೋಜನಾಧಿಕಾರಿಗಳಾದ ಶ್ರೀ ಎ.ಎ. ಕಂಬಾಳಿಮಠ ಮಾತನಾಡಿ “ಗ್ರಾಮೀಣ ಸಮುದಾಯಗಳ ಅಭಿವೃದ್ಧಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ತಂದಿರುವ ಹಲವಾರು ಕಾರ್ಯಕ್ರಮಗಳಲ್ಲಿ ಎನ್.ಆರ್.ಎಲ್.ಎಮ್ ಯೋಜನೆಯು ಅತ್ಯಂತ ಪ್ರಮುಖವಾಗಿದ್ದು, ಯೋಜನೆಯಲ್ಲಿರುವ ಸೌಲಭ್ಯಗಳನ್ನು ಪಡೆದುಕೊಂಡು ಬಡತನದಿಂದ ಹೊರಬರಲು ಸಂಘಟಿತ ಪ್ರಯತ್ನ ಮಾಡಬೇಕು” ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯತನ ಯೋಜನಾ ನಿರ್ದೇಶಕರಾದ ಶ್ರೀ ಎಮ್.ವಿ.ಚಳಗೇರಿ ಇವರು ಗ್ರಾಮೀಣ ಪ್ರದೇಶದ ಸ್ವ-ಸಹಾಯ ಸಂಘದ ಮಹಿಳೆಯರ ಆದಾಯವನ್ನು ಹೆಚ್ಚಿಸಿ ಅವರನ್ನು ಲಕ್ಷಾಧಿಪತಿಗಳನ್ನಾಗಿ (ಲಖಪತಿ) ಅಭಿವೃದ್ಧಿಪಡಿಸಲು ಇರುವ ಅವಕಾಶಗಳ ಕುರಿತು ಇಂದಿನ ತರಬೇತಿಯಲ್ಲಿ ಸಂಪನ್ಮೂಲ ವ್ಯಕ್ತಿಗಳು ಮಾಹಿತಿ ನೀಡುತ್ತಾರೆ. ತರಬೇತಿಯಲ್ಲಿಯ ವಿಷಯಗಳನ್ನು ಸರಿಯಾಗಿ ತಿಳಿದುಕೊಂಡು ಸ್ವ-ಸಹಾಯ ಗುಂಪಿನ ಮಹಿಳೆಯರ ಅಭಿವೃದ್ಧಿಗೆ ಸೇವೆಗಳನ್ನು ಒದಗಿಸಬೇಕು” ಎಂದು ತಿಳಿಸಿದರು.
ತರಬೇತಿ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತನ ಸಹಾಯಕ ಕಾರ್ಯದರ್ಶಿಗಳಾದ ಶ್ರಿ ಎಸ್.ಎಸ್.ಕಲ್ಮನಿ, ಗ್ರಾಮ ಪಂಚಾಯತ ಮಟ್ಟದ ಒಕ್ಕೂಟಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಸಮುದಾಯ ಸಂಪನ್ಮೂಲ ವ್ಯಕ್ತಿಗಳು, ಸಂಜೀವಿನಿ ಯೋಜನೆಯ ಜಿಲ್ಲಾ ಹಾಗೂ ತಾಲೂಕು ಅಭಿಯಾನ ನಿರ್ವಹಣಾ ಘಟಕದ ಸಿಬ್ಬಂದಿಗಳು ಭಾಗವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಗೀರೀಶ ಕಬಾಡರ್, ಮಧುಮತಿ ಪಾಟೀಲ್, ಮಡ್ಡೆಪ್ಪ ಮಲ್ಲಿಮಾರ್ ತರಬೇತಿ ನೀಡಿದರು. ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರಾದ ಶ್ರೀ ರಘುನಾಥಗೌಡ ಪಾಟೀಲ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು ಹಾಗೂ ಜಿಲ್ಲಾ ವ್ಯವಸ್ಥಾಪಕರಾದ ಶ್ರೀ ಬಸವರಾಜ ಮೂಲಿಮನಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 