“ವಿಶ್ವ ಕ್ಯಾನ್ಸರ್ ದಿನಾಚರಣೆ” ಅರಿವು ಮೂಡಿಸುವ ಕಾರ್ಯಕ್ರಮ

  “ವಿಶ್ವ ಕ್ಯಾನ್ಸರ್ ದಿನಾಚರಣೆ”  ಅರಿವು ಮೂಡಿಸುವ ಕಾರ್ಯಕ್ರಮ “World Cancer Day” awareness program

ಲೋಕದರ್ಶನ ವರದಿ 

 “ವಿಶ್ವ ಕ್ಯಾನ್ಸರ್ ದಿನಾಚರಣೆ”  ಅರಿವು ಮೂಡಿಸುವ ಕಾರ್ಯಕ್ರಮ 

ಗದಗ 04 : ದಿನಾಂಕ:04-02-2026 ರಂದು “ವಿಶ್ವ ಕ್ಯಾನ್ಸರ್ ದಿನ”ದ ಅಂಗವಾಗಿ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸಮೀಕ್ಷಾ ಘಟಕ, ಜಿಲ್ಲಾ ಅಸಾಂಕ್ರಾಮಿಕ ರೋಗಗಳ ವಿಭಾಗ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಇಂಡಿಯನ್ ಕ್ಯಾನ್ಸರ್ ಸೋಸೈಟಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಗದಗ ಶಾಖೆ ಹಾಗೂ ಪಂಡಿತ ಪಂಚಾಕ್ಷರ ಗವಾಯಿಗಳವರ ಶಿಕ್ಷಣ ಮಹಾವಿದ್ಯಾಲಯ, ಗದಗ ಇವರ ಸಂಯುಕ್ತಾಶ್ರಯದಲ್ಲಿ ವಿದ್ಯಾರ್ಥಿಗಳಿಗೆ “ಕ್ಯಾನ್ಸರ್‌” ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. 

ಡಾಽಽವೆಂಕಟೇಶ ರಾಠೋಡ, ಜಿಲ್ಲಾ ಸಮೀಕ್ಷಣಾಧಿಕಾರಿಗಳು, ಗದಗ ರವರು ವಿಶ್ವ ಕ್ಯಾನ್ಸರ್ ದಿನಾಚರಣೆ ಕುರಿತು ಪ್ರಾಸ್ತಾವಿಕ ನುಡಿಯಲ್ಲಿ ಮಾತನಾಡಿ ಕ್ಯಾನ್ಸರ್ ದಿನಾಚರಣೆಯ ಮಹತ್ವ ಹಾಗೂ ಕಾಯಿಲೆಯ ಗಂಭೀರತೆಯನ್ನು ವಿದ್ಯಾರ್ಥಿಗಳಿಗೆ ತಿಳಿಸುತ್ತಾ, ನಮ್ಮ ದೇಶದಲ್ಲಿ ಪ್ರತಿ ವರ್ಷ 15,62 ಲಕ್ಷ ಕ್ಯಾನ್ಸರ್ ರೋಗಿಗಳು ಪತ್ತೆ ಆಗುತ್ತಿದ್ದಾರೆ. ಕರ್ನಾಟಕದಲ್ಲಿ 89.215 ಹೊಸ ಕ್ಯಾನ್ಸರ್ ಪ್ರಕರಣಗಳ ವರದಿಯಾಗಿದ್ದು, ಶೇ.24.6 ತಂಬಾಕು ಬಳಕೆಯಿಂದ ಕ್ಯಾನ್ಸರ್‌ಗೆ ಒಳಗಾದವರಿದ್ದಾರೆ. ತಂಬಾಕು ಸೇವನೆ ಹಾಗೂ ಮಧ್ಯಪಾನದಿಂದ ಸಾಮಾನ್ಯವಾಗಿ ಕ್ಯಾನ್ಸರ್ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿವೆ. ಮಹಿಳೆಯರಲ್ಲಿ ಸ್ತನ ಮತ್ತು ಗರ್ಭಕಂಠದ ಕ್ಯಾನ್ಸರ್ ಪ್ರಕರಣಗಳು ಅತೀ ಹೆಚ್ಚಾಗಿ ವರದಿಯಾಗುತ್ತಿವೆ ಎಂದು ತಿಳಿಸಿದರು. ಪುರುಷರಲ್ಲಿ ಬಾಯಿ, ಅನ್ನನಾಳ, ಶ್ವಾಸಕೋಶ ಹಾಗೂ ಲೀವರ್ ಕ್ಯಾನ್ಸರ್‌ಗಳು ಹೆಚ್ಚಾಗಿ ಕಂಡುಬರುತ್ತಿವೆ ಎಂದು ತಿಳಿಸಿದರು. ತಂಬಾಕು ದುಷ್ಚಟಗಳಿಂದ ಹೊರಬರಲು ನಮ್ಮ ಇಲಾಖೆಯ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಡಿಯಲ್ಲಿ ಜಿಲ್ಲಾ ತಂಬಾಕು ವ್ಯಸನಮುಕ್ತ ಕೇಂದ್ರ ರೂ.ನಂ.182 ಜಿಲ್ಲಾ ಆಸ್ಪತ್ರೆ ಗದಗದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇದರ ಸೌಲಭ್ಯವನ್ನು ಪಡೆದುಕೊಂಡು ತಂಬಾಕು ವ್ಯಸನದಿಂದ ಮುಕ್ತರಾಗಲು ತಿಳಿಸಿದರು.  

ರಾಷ್ಟ್ರೀಯ ಅಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಹಾಗೂ ಗೃಹ ಆರೋಗ್ಯ ಯೋಜನೆಯಡಿಯಲ್ಲಿ ಸಾಮಾನ್ಯ ಕ್ಯಾನ್ಸರ್‌ಗಳಾದ ಬಾಯಿ, ಸ್ತನ ಹಾಗೂ ಗರ್ಭಕಂಠದ ಕ್ಯಾನ್ಸರ್ ತಪಾಸಣೆಯನ್ನು ಜಿಲ್ಲೆಯ ಪ್ರತಿಯೊಂದು ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ಕೈಗೊಳ್ಳಲಾಗುತ್ತಿದ್ದು, 30 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಕ್ಯಾನ್ಸರ್ ತಪಾಸಣೆಯನ್ನು ಮಾಡಿಸಿಕೊಳ್ಳಬೇಕೆಂದು ಕರೆ ನೀಡಿದರು. 

ಉದ್ಘಾಟಕರಾಗಿ ಆಗಮಿಸಿದ ಡಾ.ರಾಜೇಂದ್ರ ಬಸರಿಗಿಡದ, ಜಿಲ್ಲಾ ಅಸಾಂಕ್ರಾಮಿಕ ರೋಗಗಳ ನಿಯಂತ್ರಣಾಧಿ ಕಾರಿಗಳು ಕಾರ್ಯಕ್ರಮವನ್ನು ಉದ್ಘಾಟಿಸಿ ರಾಜ್ಯ ಸರಕಾರದಿಂದ ಆಚಿಥಿ ಛಿಚಿಡಿಜ ಛಿಜಟಠಜಡಿಚಿಠಿಥಿ ವಾರ್ಡನ್ನು ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಾರಂಭಿಸಲಾಗಿದ್ದು, ಕ್ಯಾನ್ಸರ್ ರೋಗಿಗಳಿಗೆ ಅಜಟಠಜಡಿಚಿಠಿಥಿ ಚಿಕಿತ್ಸೆಯನ್ನು ಜಿಲ್ಲಾ ಆಸ್ಪತ್ರೆಯಲ್ಲಿ ಒದಗಿಸಲಾಗುತ್ತದೆ ಎಂದು ತಿಳಿಸಿದರು. ಜಿಲ್ಲೆಯಲ್ಲಿ ವೈದ್ಯರಿಗೆ ಮುಂಚೂಣಿಯಲ್ಲಿರುವ ಕ್ಷೇತ್ರ ಆರೋಗ್ಯ ಕಾರ್ಯಕರ್ತೆಯರಿಗೆ, ಶ್ರೂಶ್ರುಷಕ ಅಧಿಕಾರಿಗಳಿಗೆ, ಎನ್‌.ಪಿ.ಎನ್‌.ಸಿ.ಡಿ. ಕಾರ್ಯಕ್ರಮ ಹಾಗೂ ಇಂಡಿಯನ್ ಕ್ಯಾನ್ಸರ್ ಸೋಸೈಟಿ ಸಹಯೋಗದಲ್ಲಿ ಕ್ಯಾನ್ಸರ್ ಕಾಯಿಲೆ ಕುರಿತು ತರಬೇತಿಯನ್ನು ನೀಡಲಾಗಿದೆ. ಜಿಲ್ಲೆಯಲ್ಲಿ ಅಸಾಂಕ್ರಾಮಿಕ ಕಾಯಿಲೆಗಳ ಪ್ರಾಥಮಿಕ ಹಂತದ ತಪಾಸಣೆಯನ್ನು ಪ್ರತಿ ಗ್ರಾಮಗಳಲ್ಲಿ ಕೈಗೊಳ್ಳಲಾಗುತ್ತಿದ್ದು, ಒಟ್ಟು 7 ಎನ್‌.ಸಿ.ಡಿ. ಕ್ಲಿನಿಕ್‌ಗಳು ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿವೆ ಹಾಗೂ ಪ್ರತಿ ಆರೋಗ್ಯ ಕೇಂದ್ರಗಳಲ್ಲಿ ಅಸಾಂಕ್ರಾಮಿಕ ಕಾಯಿಲೆಗಳಿಗೆ ಉಚಿತ ತಪಾಸಣೆ ಮತ್ತು ಓಷಧ ವಿತರಿಸಲಾಗುತ್ತಿದೆ.  

ವಿಶೇಷ ಅತಿಥಿಗಳಾಗಿ ಆಗಮಿಸಿದ ಖ್ಯಾತ ಕ್ಯಾನ್ಸರ್ ತಜ್ಞರಾದ ಡಾಽಽಗಣೇಶರಾವ್ ಕುಂದಾಪೂರ, (ಖಣಡಿರಛಿಚಿಟ ಓಟಿಛಿಠಠಣ) ಬಾಬಾ ಸೂಪರ್ ಸ್ಪೇಷಾಲಿಟಿ ಹಾಸ್ಪಿಟಲ್, ಗದಗ ರವರು ವಿದ್ಯಾರ್ಥಿಗಳಿಗೆ ಪಾವರ್ ಪಾಯಿಂಟ್ ಪ್ರಸೆಂಟೇಷನ್ ಮೂಲಕ ಕ್ಯಾನ್ಸರ್ ಕಾಯಿಲೆ ಕುರಿತು ಉಪನ್ಯಾಸ ನೀಡಿದರು. ಕ್ಯಾನ್ಸರ್ ಖಾಯಿಲೆಯು ಅನಿಯಂತ್ರಿತ ಜೀವಕೋಶ ವಿಭಜನೆಗಳಿಂದ ದೇಹದಲ್ಲಿ ಬೆಳವಣಿಗೆಯಾಗುವಂತಹ ಗಡ್ಡೆ, ಕ್ಯಾನ್ಸರ್ ಜೀವಕೋಶವು ಐಥಿಟಠಿಟಿಠ  


ಮುಖಾಂತರ ದೇಹದ ಎಲ್ಲಾ ಭಾಗಗಳಲ್ಲಿ ಪಸರಿಸುತ್ತದೆ. ಕ್ಯಾನ್ಸರ್ ಕಂಡುಬಂದ ನಂತರ ರೋಗಿಯ ಆತ್ಮಸೈರ್ಯ ಕುಗ್ಗುತ್ತದೆ ಆದರೆ ಇದಕ್ಕೆ ಆತಂಕ ಪಡುವ ಅಗತ್ಯವಿಲ್ಲ. ಪ್ರಸ್ತುತ ಲಭ್ಯವಿರುವ ಚಿಕಿತ್ಸೆ ಹಾಗೂ ತಪಾಸಣೆ ವಿಧಾನಗಳ ಮೂಲಕ ಕಾಯಿಲೆಯನ್ನು ಆರಂಭದಲ್ಲಿಯೇ ಪತ್ತೇ ಮಾಡಿ ಸೂಕ್ತ ಚಿಕಿತ್ಸೆ ಮತ್ತು ಆರೈಕೆ ಮಾಡಿದಲ್ಲಿ ಶೇ.95 ರಷ್ಟು ಗುಣಪಡಿಸಬಹುದು ಎಂದು ತಿಳಿಸಿದರು. ಕ್ಯಾನ್ಸರ್ ಕಾಯಿಲೆಯನ್ನು ಮುನ್ನೆಚ್ಚರಿಕೆ ಮತ್ತು ಆರಂಭಿಕ ಹಂತದಲ್ಲಿ ಪತ್ತೇ ಮಾಡುವುದು ಮುಖ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಈ ವರ್ಷದ ಘೋಷವಾಕ್ಯ “ವಿಶಿಷ್ಟತೆಯಿಂದ ಏಕತೆ” ಎನ್ನುವುದನ್ನು ಸವಿಸ್ತಾರವಾಗಿ ಎಲ್ಲರಿಗೂ ತಿಳಿಸಿದರು.  

ಅಸಾಂಕ್ರಾಮಿಕ ರೋಗಗಳಲ್ಲಿ ಹೃದಯ ಸಂಬಂಧಿತ ಕಾಯಿಲೆಯ ನಂತರದಲ್ಲಿ 2ನೇ ಸ್ಥಾನದಲ್ಲಿ ಕ್ಯಾನ್ಸರ್‌ನಿಂದ ಅತೀ ಹೆಚ್ಚು ಸಾವು ಸಂಭವಿಸುತ್ತಿವೆ ಎಂದು ತಿಳಿಸಿದರು. ಕ್ಯಾನ್ಸರ್ ರೋಗದಲ್ಲಿ ನಾಲ್ಕು ಹಂತಗಳಿದ್ದು, ಮೊದಲನೇ ಮತ್ತು ಎರಡನೇ ಹಂತದಲ್ಲಿರುವ ಕ್ಯಾನ್ಸರ್ ರೋಗವನ್ನು ತಜ್ಞ ವೈದ್ಯರಿಂದ ಚಿಕಿತ್ಸೆ ಪಡೆದರೆ ಸಂಪೂರ್ಣ ಗುಣಪಡಿಸಬಹುದೆಂದು ತಿಳಿಸಿದರು. ಕ್ಯಾನ್ಸರ್ ರೋಗದ ಜಾಗೃತಿ ಕೊರತೆ ಹಾಗೂ ಹಿಂಜರಿಕೆಯಿಂದಾಗಿ ಬಹಳಷ್ಟು ರೋಗಿಗಳು 3-4ನೇ ಹಂತಕ್ಕೆ ತಲುಪಿದಾಗ ಚಿಕಿತ್ಸೆ ಪಡೆಯಲು ಬರುತ್ತಾರೆ. ಇದರಿಂದಾಗಿ ಕ್ಯಾನ್ಸರ್ ಕಾಯಿಲೆಯಿಂದ ಹೆಚ್ಚು ರೋಗಿಗಳು ಮರಣ ಹೊಂದುತ್ತಾರೆ ಎಂದು ತಿಳಿಸಿದರು. 

ಕ್ಯಾನ್ಸರ್ ಕೇವಲ ರೋಗಿಯನ್ನು ಭಾದಿಸುವುದಿಲ್ಲ. ಒಬ್ಬರಿಗೆ ಈ ಕಾಯಿಲೆ ಬಂದರೆ ಇಡೀ ಕುಟುಂಬವೇ ಆರ್ಥಿಕ ಹಾಗೂ ಮಾನಸಿಕವಾಗಿ ಕುಗ್ಗಿ ಹೋಗುತ್ತದೆ.   

ಪುರುಷರಲ್ಲಿ ಬಾಯಿ, ಅನ್ನನಾಳ, ಶ್ವಾಸಕೋಶ ಮತ್ತು ಲೀವರ್ ಕ್ಯಾನ್ಸರ್‌ಗಳು ಹೆಚ್ಚಾಗಿ ಕಂಡುಬರುತ್ತಿದ್ದು, ಮಹಿಳೆಯರಲ್ಲಿ ಸ್ತನ, ಗರ್ಭಕಂಠ ಮತ್ತು ಅಂಡಾಣುವಿನ ಕ್ಯಾನ್ಸರ್ ಸಾಮಾನ್ಯವಾಗಿ ಕಂಡುಬರುತ್ತವೆ. ಕ್ಯಾನ್ಸರ್ ರೋಗಿಗಳಿಗೆ ಸರಿಯಾದ ಚಿಕಿತ್ಸೆ, ಆರೈಕೆ ಹಾಗೂ ಮನೋಸ್ಥೈರ್ಯ ಮಾತುಗಳಿಂದ ಗುಣಪಡಿಸಬಹುದೆಂದು ತಿಳಿಸಿದರು. 

ಉತ್ತಮ ಜೀವನ ಶೈಲಿ, ಸಮತೋಲನ ಆಹಾರ, ತರಕಾರಿ ಹಣ್ಣು ಹಂಪಲಗಳ ಸೇವನೆ, ಪ್ರತಿನಿತ್ಯ ಯೋಗ, ಧ್ಯಾನ ಮತ್ತು ದೈಹಿಕ ಚಟುವಟಿಕೆಯಿಂದ ಕ್ಯಾನ್ಸರ್ ಖಾಯಿಲೆ ಬರದಂತೆ ತಡೆಯಬಹುದೆಂದು ಕರೆ ನೀಡಿದರು. 

ಡಾ.ರಾಜೇಂದ್ರ ಗೋಡಬೋಲೆ, ಚೇರಮೆನ್ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಗದಗ ಶಾಖೆ ರವರು ಕ್ಯಾನ್ಸರ್ ದಿನಾಚರಣೆೆ ಅಂಗವಾಗಿ ಈಗಿನ ಆಧುನಿಕ ಜೀವನದಲ್ಲಿ ಕ್ಯಾನ್ಸರ್ ಕಾಯಿಲೆಯು ಮಾರಕ ರೋಗವಾಗಿದ್ದು, ಸಮಾಜದಲ್ಲಿ ಇದರ ಅರಿವು ಮೂಡಿಸುವ ಅಗತ್ಯವಿದೆ ಎಂದು ತಿಳಿಸಿದರು. ಕ್ಯಾನ್ಸರ್ ರೋಗಕ್ಕೆ ಕಾರಣವಾಗುವಂತಹ ಅಪಾಯಕಾರಿ ಅಂಶಗಳಾದಂತಹ ತಂಬಾಕು ಸೇವನೆ ಮತ್ತು ಮಧ್ಯಾಪಾನದಿಂದ ದೂರವಿದ್ದು, ಉತ್ತಮ ಸಮಾಜ ನಿರ್ಮಾಣ ಮಾಡಬೇಕೆಂದು ವಿದ್ಯಾರ್ಥಿಗಳಿಗೆ ತಿಳಿಸಿದರು. 

ಶ್ರೀ ಡಿ.ಎಸ್‌.ಗಾಳಿ, ಉಪನ್ಯಾಸಕರು/ಎನ್‌.ಎಸ್‌.ಎಸ್‌. ಕಾರ್ಯಕ್ರಮಾಧಿಕಾರಿಗಳು ಪಂಡಿತ ಪಂಚಾಕ್ಷರ ಗವಾಯಿ ಗಳವರ ಶಿಕ್ಷಣ ಮಹಾವಿದ್ಯಾಲಯ, ಗದಗ ರವರು ಮಾತನಾಡುತ್ತ ಕ್ಯಾನ್ಸರ್ ಖಾಯಿಲೆ ಕುರಿತು ಇಂತಹ ಅಭೂತಪೂರ್ವ ಮಾಹಿತಿ ಹೊಂದಿದ ಕಾರ್ಯಕ್ರಮಗಳು ಎಲ್ಲ ಶಾಲಾ-ಕಾಲೇಜುಗಳಲ್ಲಿ ಹಮ್ಮಿಕೊಳ್ಳುವುದು ಅವಶ್ಯಕವಾಗಿದ್ದು, ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಮೂಲಕ ಮನೆ ಹಾಗೂ ಸಮುದಾಯ ಮಟ್ಟದಲ್ಲಿ ಜಾಗೃತಿ ಮೂಡಿಸಲು ಅನುಕೂಲವಾಗುವುದೆಂದು ತಿಳಿಸಿದರು. ದುಷ್ಚಟಗಳಿಂದ ದೂರವಿದ್ದು, ಉತ್ತಮ ಆಹಾರ ಪದ್ಧತಿಯಿಂದ ಆರೋಗ್ಯಕರ ಸಮಾಜವನ್ನು ನಿರ್ಮಾಣ ಮಾಡಿ ಕ್ಯಾನ್ಸರ್‌ನಂತಹ ಅಸಾಂಕ್ರಾಮಿಕ ಖಾಯಿಲೆಯಿಂದ ದೂರವಿರಬಹುದೆಂದು ತಿಳಿಸಿದರು.  

 ಮುತ್ತುನಗೌಡ ಎಸ್‌. ರಬ್ಬನಗೌಡ್ರ, ಹಿರಿಯ ಆರೋಗ್ಯ ನೀರೀಕ್ಷಣಾಧಿಕಾರಿಗಳು, ಜಿಲ್ಲಾ ಸಮೀಕ್ಷಣಾ ಘಟಕ, ಗದಗ ರವರು ಕಾರ್ಯಕ್ರಮ ನಿರೂಪಣೆ ಮಾಡಿದರು. ಕುಮಾರಿ ವೈದೇಹಿ ರವರು ಪ್ರಾರ್ಥಿಸಿದರು.  ಕುಮಾರ ಅಜಯ್ ಪಂಡಿತ್ ರವರು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಡಾ.ಪಂಪಾಪತಿ ಎನ್‌.ಎಲ್‌. ಜಿಲ್ಲಾ ಕಾರ್ಯಕ್ರಮ ಸಂಯೋಜಕರು, ಇಂಡಿಯನ್ ಕ್ಯಾನ್ಸರ್ ಸೋಸೈಟಿ, ಗದಗ, ಡಾಽಽರವಿ ಕಡಗಾವಿ, ಜಿಲ್ಲಾ ಕಾರ್ಯಕ್ರಮ ಸಂಯೋಜಕರು, ಎನ್‌.ಸಿ.ಡಿ.ವಿಭಾಗ, ಡಾಽಽಪ್ರವೀಣ ನಿಡಗುಂದಿ, ಎಪಿಡೆಮಿಯೊಲಾಜಿಸ್ಟ್‌, ಗೋಪಾಲ ಸುರಪುರ, ಜಿಲ್ಲಾ ಸಲಹೆಗಾರರು ತಂಬಾಕು ನಿಯಂತ್ರಣ ಕೋಶ, ರಮೇಶ ಅರಹುಣಸಿ, ಹಿ.ಆ. ನೀರೀಕ್ಷಣಾಧಿಕಾರಿಗಳು, ವಿಠ್ಠಲ್ ನಾಯಕ್, ಜಿಲ್ಲಾ ಆರ್ಥಿಕ ಸಲಕರಣೆ ಸಲಹೆಗಾರರು, ಬಸಮ್ಮ ಚಿತ್ತರಿಗಿ, ಸಾಮಾಜಿಕ ಕಾರ್ಯಕರ್ತೆ, ವಿರೇಶ ಮದಕಟ್ಟಿ, ಡಾಟಾ ಮ್ಯಾನೇಜರ್, ಐಡಿಎಸ್‌ಪಿ ವಿಭಾಗ, ಇಂಡಿಯನ್ ಕ್ಯಾನ್ಸರ್ ಸೋಸೈಟಿ ಸಂಸ್ಥೆಯ ಸಿಬ್ಬಂದಿಗಳು, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಗದಗ ಶಾಖೆ ಸಿಬ್ಬಂದಿಗಳು ಹಾಗೂ ಪಂಡಿತ ಪಂಚಾಕ್ಷರ ಗವಾಯಿಗಳವರ ಶಿಕ್ಷಣ ಮಹಾವಿದ್ಯಾಲಯದ ಎಲ್ಲ ಉಪನ್ಯಾಸಕರು, ಆಡಳಿತ ವರ್ಗದವರು, ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಜಿಲ್ಲಾ ಸಮೀಕ್ಷಾಧಿಕಾರಿಗಳ ಕಚೇರಿಯ ಅಧಿಕಾರಿಗಳು/ ಸಿಬ್ಬಂದಿಗಳು, ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.